ಧಾರವಾಡ | ಜೂಜಾಟದ ಅಡ್ಡೆ ಮೇಲೆ ದಾಳಿ; ಪೊಲೀಸರ ಮೇಲೆ ಜೂಜುಕೋರರಿಂದ ಹಲ್ಲೆ

Date:

ಜೂಜಾಟ ಅಡುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ್ದು, ಆ ವೇಳೆ ಜಾಜಾಡುತ್ತಿದ್ದ ಗುಂಪು ಪೊಲೀಸರ ಮೇಲೆಯೇ ದಾಳಿ ಮಾಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಜಿfಲೆಯ ನರೇಂದ್ರ ಗ್ರಾಮದಲ್ಲಿ ಘಟನೆ ನಡೆದಿದ್ದು, ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರ ಮೇಲೆ ಹಲ್ಲೆ ಮತ್ತು ಜೂಜಾಟ ಪ್ರಕರಣದಲ್ಲಿ ಎಂಟು  ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಗ್ರಾಮದಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಪಿಎಸ್‌ಐ ನಾಗರಾಜ್ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ, ಜೂಜುಕೋರರು ಪೊಲೀಸ್‌ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೋಮವಾರ ತಡರಾತ್ರಿ 1 ಗಂಟೆಗೆ ನರೇಂದ್ರ ಗ್ರಾಮದ ಶಾಲೆ ಬಳಿಯಲ್ಲಿ ಜೂಜಾಟ ನಡೆಯುತ್ತಿರುವ ಮಾಹಿತಿ ಬಂದಿತ್ತು. ಆಗ ನಮ್ಮ ಸಿಬ್ಬಂದಿ ದಾಳಿ ಮಾಡಿದ್ದರು. ಆಗ ಪಿಎಸ್‌ಐ ಮತ್ತು ಸಿಬ್ಬಂದಿ ಮೇಲೆ ಕೆಲವರು ದಾಳಿ ಮಾಡಿದ್ದಾರೆ. ಪ್ರಕರಣದಲ್ಲಿ ಎಂಟು ಮಂದಿಯನ್ನು ಬಂಧಿಸಲಾಗಿದೆ. ಉಳಿದವರನ್ನು ಪತ್ತೆ ಮಾಡಿ, ಬಂಧಿಸಲಾಗುತ್ತದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ತಿಳಿಸಿದ್ದಾರೆ.

“ಘಟನೆಯಲ್ಲಿ ಕಾನ್ಸ್​​ಟೇಬಲ್​​​ ನಾಗರಾಜ್ ಅವರ ತಲೆಗೆ ಪೆಟ್ಟಾಗಿದೆ. ಪಿಎಸ್‌ಐ ಬಸನಗೌಡರಿಗೆ ಕೈ ಮತ್ತು ಕುತ್ತಿಗೆಗೆ ಗಾಯವಾಗಿದೆ. ಇಬ್ಬರೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...