ಧಾರವಾಡ | ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರದಿಂದ ಹೊರಬನ್ನಿ; ಸ್ವರೂಪ ಟಿ.ಕೆ

Date:

ಸಿಬ್ಬಂದಿ ಒತ್ತಡ ಸಹಿಸಲಾಗದೆ ಕೆಲವರು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಅಂತಹ ನಿರ್ಧಾರಗಳಿಂದ ಹೊರಬರುವಂತೆ ಮಾನಸಿಕ ತಜ್ಞರು ತಿಳವಳಿಕೆ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ ಅವರು ಹೇಳಿದ್ದಾರೆ.

ಗುರುವಾರ ಧಾರವಾಡ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ನಡೆದ ಮಾನಸಿಕ ಒತ್ತಡ ನಿವಾರಣೆಯ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಜ್ಞ ವೈದ್ಯರುಗಳಿಂದ ಅವಸರದ ನಿರ್ಧಾರ ತಡೆಗಟ್ಟುವ ನಿಟ್ಟಿನಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಕೆಲವೊಂದು ಅಹಿತಕರ ಘಟನೆಗಳನ್ನು ತಡೆಯಬೇಕಿದೆ. ಸಿಬ್ಬಂದಿ ಮಾನಸಿಕ ಒತ್ತಡದಿಂದ ತೆಗೆದುಕೊಳ್ಳುತ್ತಿರುವ ಆತುರದ ನಿರ್ಧಾರದಿಂದ ಜೀವವನ್ನೇ ಕಳೆದುಕೊಳ್ಳುತ್ತಾರೆ. ಅಂತಹ ಸಿಬ್ಬಂದಿಗಳನ್ನು ಗುರುತಿಸಿ ಚಿಕಿತ್ಸೆ ಕೊಡಿಸಬೇಕೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲಸದ ನಿಮಿತ್ಯ ಮಾನಸಿಕ ಒತ್ತಡವು ಹೆಚ್ಚಿದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ. ದೂರವಾಣಿ ಸಂಖ್ಯೆಗೆ ಕರೆ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ಅವರು ಸಲಹೆ ನೀಡಿದರು.

ಡಿಮಾನ್ಸ್ ಮಾನಸಿಕ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಮೇಘಮಾಲಾ ಎಸ್. ತಾವರಗಿ  ಅವರು ತರಬೇತಿ ಕುರಿತಾಗಿ ಕೆಲಸದ ಸ್ಥಳಗಳಲ್ಲಿ ಒತ್ತಡ ನಿರ್ವಹಣೆ ಹಾಗೂ ಕೌಟುಂಬಿಕ ಕಲಹಗಳು ನಿರ್ವಹಣೆ ಎಲ್ಲ ವಿಷಯಗಳ ಕುರಿತಾಗಿ ಸವಿಸ್ತಾರವಾಗಿ ಮಾತನಾಡಿದರು.

ವಿವಿಧ ರೀತಿಯ ಒತ್ತಡಗಳು. ಸಮಸ್ಯೆ ಆಧಾರಿತ ಒತ್ತಡಗಳು, ಒತ್ತಡಗಳಿಂದ ಆರೋಗ್ಯದ ಮೇಲೆ ಆಗುವಂತ ಸಮಸ್ಯೆಗಳು, ಕೆಲಸದ ಒತ್ತಡಗಳನ್ನು ಹೇಗೆ ನಿರ್ವಹಣೆ ಮಾಡಬೇಕು. ಕುಟುಂಬ ನಿರ್ವಹಣೆ ಮಾಡುವಾಗ ಬರುವಂತಹ ಸಮಸ್ಯೆಗಳು ಹೇಗೆ ನಿಭಾಯಿಸಬೇಕು ಮತ್ತು ಪರಿಹರಿಸಿಕೊಳ್ಳಬೇಕು ಹಾಗೂ ಕುಟುಂಬದೊಂದಿಗೆ ಕಳೆಯುವಂತಹ ಸಮಯ ಮೌಲ್ಯವಾಗಿರಬೇಕು ಮತ್ತು ಆರೋಗ್ಯಕರವಾಗಿರುವಂತಹ ವಾತಾವರಣವನ್ನು ಸೃಷ್ಟಿ ಮಾಡಿಕೊಳ್ಳುವ ಕುರಿತು ಹಾಗೂ ಕುಟುಂಬದ ಸದಸ್ಯರೊಂದಿಗೆ ಸಮಸ್ಯೆಗಳನ್ನು ಹಂಚಿಕೊಳ್ಳುವ ಕುರಿತು ಸವಿಸ್ತಾರವಾಗಿ ತಿಳಿಸಿದರು.

ಡಿಮ್ಹಾನ್ಸ್ ಮನೋವೈದ್ಯ ಡಾ. ರಾಘವೇಂದ್ರ ಪಾಟೀಲ್‌ ಅವರು ಆತ್ಮೀಯತೆ ತಡೆಗಟ್ಟುವಿಕೆ ಮತ್ತು ವ್ಯಸನದಿಂದ ಆಗುವ ಮಾನಸಿಕ ತೊಂದರೆಗಳು ಈ ವಿಷಯಗಳ ಕುರಿತು ಮಾತನಾಡಿದರು. ಭಾರತ ದೇಶದಲ್ಲಿ ಆಗುತ್ತಿರುವಂತಹ ಆತ್ಮಹತ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವ ಸಮಸ್ಯೆಗಳ ಕುರಿತು ಆತ್ಮಹತ್ಯೆಯಲ್ಲಿ ವಿವಿಧ ರೀತಿಯ ಪ್ರಕರಣಗಳು ಬೆಳಕಿಗೆ ಬಂದಿವೆ. ಇತ್ತೀಚಿನ ಆಧುನಿಕ ಯುಗದಲ್ಲಿ ಯುವಜನರು ಆತ್ಮಹತ್ಯೆ ಮಾಡಿಕೊಳ್ಳಬಾರದು.

ಆತ್ಮಹತ್ಯೆ ತಡೆಗಟ್ಟುವಲ್ಲಿ ಸರ್ಕಾರದಿಂದ ಇರುವಂತ ಕಾರ್ಯಕ್ರಮಗಳು ಮತ್ತು ಕಾನೂನು ವ್ಯವಸ್ಥೆಗಳು, ಮತ್ತು ಟೆಲಿ ಮಾನಸ ಸಹಾಯವಾಣಿ 14416 ದಿನದ 24 ಗಂಟೆ ಕಾರ್ಯನಿರ್ವಹಿಸುತ್ತವೆ.  ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಶಶಿ ಪಾಟೀಲ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಸವಲಿಂಗಯ್ಯ ಮೂಗನೂರಮಠ, ಜಿಲ್ಲಾ ಕುಷ್ಠರೋಗ ನಿಯಂತ್ರಣಧಿಕಾರಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಅನುಷ್ಠಾನಾಧಿಕಾರಿ ಡಾ. ಎಸ್.ಬಿ. ಕಳಸೂರಮಠ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲರಾದ ಸೋಮಶೇಖರ ಜಾಡರ, ಡಿವೈಎಸ್‌ಪಿ ನಾಗರಾಜ ಎಸ್.ಎಂ ಹಾಗೂ ಇತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...