ಧಾರವಾಡ | ನ.07ನ್ನುʼವಿದ್ಯಾರ್ಥಿ ದಿನʼ ಎಂದು ಘೋಷಿಸಿ; ಸಿಎಂಗೆ ಡಿವಿಪಿ ಮನವಿ

Date:

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಗೌರವಾರ್ಥವಾಗಿ ನವೆಂಬರ್ 7ನ್ನು ʼವಿದ್ಯಾರ್ಥಿ ದಿನʼ ಎಂದು ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಒತ್ತಾಯಿಸಿದೆ.

ಸಂಘಟನೆಯ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಅಂಬೇಡ್ಕರ್ ಅವರ ಶಾಲಾ ಪ್ರವೇಶ ದಿನವಾದ ನವೆಂಬರ್ 7ನ್ನು ‘ವಿದ್ಯಾರ್ಥಿ ದಿನ’ವನ್ನಾಗಿ ಆಚರಿಸಲಾಗುತ್ತದೆ. ಅಂಬೇಡ್ಕರ್ ಅವರ ಗೌರವಾರ್ಥವಾಗಿ ನವೆಂಬರ್ 07ರಂದು ಮಹಾರಾಷ್ಟ್ರದಾದ್ಯಂತ ವಿದ್ಯಾರ್ಥಿ ದಿನವನ್ನು ಆಚರಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

64 ವಿಷಯಗಳಲ್ಲಿ ಅತ್ಯುನ್ನತ ಮಟ್ಟದ ಜ್ಞಾನವನ್ನು ಹೊಂದಿದ್ದರೂ, ಅಂಬೇಡ್ಕರರು ತನ್ನನ್ನು ತಾನು ಜೀವಮಾನವಿಡೀ ವಿದ್ಯಾರ್ಥಿ ಎಂದು ಪರಿಗಣಿಸಿ, ಆದರ್ಶ ವಿದ್ಯಾರ್ಥಿಯಾಗಿ ಹೊರಹೊಮ್ಮಿದ್ದಾರೆ. ಮಹಾರಾಷ್ಟ್ರ ಸರ್ಕಾರದಂತೆ ಕರ್ನಾಟಕ ಸರ್ಕಾರವು ಅವರ ಶಾಲಾ ಪ್ರವೇಶ ದಿನವನ್ನು ವಿದ್ಯಾರ್ಥಿ ದಿನವೆಂದು ಘೋಷಿಸುವ ಮೂಲಕ ಅವರನ್ನು ಗೌರವಿಸಬೇಕು. ಈ ದಿನದಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಅಂಬೇಡ್ಕರ್ ಅವರ ಜೀವನಾಧಾರಿತ ವಿವಿಧ ಅಂಶಗಳ ಕುರಿತು ಪ್ರಬಂಧ ಸ್ಪರ್ಧೆ, ಭಾಷಣ, ಕವನ ವಾಚನ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದು ಮನವಿ ಪತ್ರದಲ್ಲಿ ಕೇಳಿಕೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವೆಂಬರ್ 07, 1900ರಂದು ಅಂಬೇಡ್ಕರ್ ಅವರು ಮಹಾರಾಷ್ಟ್ರದ ಸತಾರಾದಲ್ಲಿನ ರಾಜವಾಡ ಚೌಕ್‌ನಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ (ಈಗ ಪ್ರತಾಪ್ ಸಿಂಗ್ ಹೈಸ್ಕೂಲ್) ಪ್ರವೇಶಿಸಿದರು. ಇಲ್ಲಿ ಅವರು 1904ರವರೆಗೆ, ಅಂದರೆ ನಾಲ್ಕನೇ ತರಗತಿಯವರೆಗೆ ಕಲಿತರು. ಶಾಲೆಯು ಅವರ ಹೆಸರನ್ನು ‘ಭೀವಾ ರಾಮ್‌ಜಿ ಅಂಬೇಡ್ಕರ್’ ಎಂದು ದಾಖಲಿಸುತ್ತದೆ. ಶಾಲೆಯ ರಿಜಿಸ್ಟರ್‌ನಲ್ಲಿ 1914 ಸಂಖ್ಯೆಯ ಮುಂದೆ ಮಕ್ಕಳ ಭೀವಾ (ಭೀಮರಾವ್) ಸಹಿ ಇದೆ. ಈ ಐತಿಹಾಸಿಕ ದಾಖಲೆಯನ್ನು ಶಾಲೆಯು ಸಂರಕ್ಷಿಸಿದೆ.

ಪತ್ರಕರ್ತ ಮತ್ತು ಸತಾರಾ ಪ್ರವರ್ತನ ಸಂಘಟನೆಯ ಅಧ್ಯಕ್ಷ ಅರುಣ್ ಜವಳೆ ಅವರು 2003 ರಿಂದ ಅಂಬೇಡ್ಕರ್ ಅವರ ಶಾಲಾ ಪ್ರವೇಶ ದಿನ ಅಥವಾ ಶಾಲಾ ಪ್ರವೇಶ ದಿನವನ್ನು ಆಯೋಜಿಸುತ್ತಿದ್ದಾರೆ. ಅವರು ಈ ದಿನವನ್ನು ವಿದ್ಯಾರ್ಥಿ ದಿನವನ್ನಾಗಿ ಘೋಷಿಸಲು ಮಹಾರಾಷ್ಟ್ರ ಸರ್ಕಾರವನ್ನು ಪದೇ ಪದೇ ಒತ್ತಾಯಿಸಿದರು.  ನಂತರ, 27 ಅಕ್ಟೋಬರ್ 2017 ರಂದು, ಮಹಾರಾಷ್ಟ್ರ ಸರ್ಕಾರವು ಈ ದಿನವನ್ನು ವಿದ್ಯಾರ್ಥಿ ದಿನ ಎಂದು ಘೋಷಿಸಿತು. ಈ ಕಾರಣವಾಗಿ ಕರ್ನಾಟಕ ಸರ್ಕಾರವೂ ಕೂಡ ಪ್ರತೀ ವರ್ಷ ನವೆಂಬರ್ 7 ಅನ್ನು “ವಿಧ್ಯಾರ್ಥಿ ದಿನ” ವನ್ನಾಗಿ ಆಚರಣೆ ಮಾಡಲು ಘೋಷಣೆ ಹೊರಡಿಸಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಡಿವಿಪಿ ಧಾರವಾಡ ಜಿಲ್ಲಾ ಘಟಕವು ಮನವಿ ಮಾಡಿಕೊಳ್ಳಲಾಯಿತು.

ಈ ವೇಳೆ ಪರಿಷತ್ ನ ವಿಭಾಗೀಯ ಅಧ್ಯಕ್ಷರು, ಜಿಲ್ಲಾ ಅಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಸಹ ಸಂಚಾಲಕರು ಹಾಗೂ ವಿವಿಧ ಜಿಲ್ಲಾ ಪದಾಧಿಕಾರಿಗಳು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...