ಧಾರವಾಡ | ಜಿಲ್ಲಾಸ್ಪತ್ರೆಯಲ್ಲಿ ಶುಲ್ಕ ವಸೂಲಿ; ಆದೇಶ ಹಿಂಪಡೆಯಲು ಎಸ್‌ಯುಸಿಐ ಆಗ್ರಹ

Date:

ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಬಡವರಿಗೆ ಈ ಹಿಂದೆ ಉಚಿತವಾಗಿ ಆರೋಗ್ಯ ಸೇವೆ ನೀಡಲಾಗುತ್ತಿತ್ತು. ಆದರೆ, ಈಗ ಶೇ.50ರಷ್ಟು ಶುಲ್ಕ ವಿಧಿಸಲಾಗುತ್ತಿದೆ. ಶುಲ್ಕ ನಿಗದಿ ಮಾಡಿರುವುದನ್ನು ಹಿಂಪಡೆಯಬೇಕು ಎಂದು ಎಸ್‌ಯುಸಿಐ ಪಕ್ಷವು ಒತ್ತಾಯಿಸಿದೆ.

ಶುಲ್ಕ ವಸೂಲಿ ಬಗ್ಗೆ ಪಕ್ಷದ ಮುಖಂಡ ಶರಣು ಗೋನವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. “ಶುಲ್ಕ ನಿಗದಿ ಮಾಡಿರುವುದನ್ನು ಹಿಂಪಡೆಬೇಕು ಎಂದು ಒತ್ತಾಯಿಸಿ ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿದ್ದ ಅಪರ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಅಧಿಕಾರಿಗಳು ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದ್ದರು. ಅದರಂತೆ ಸಭೆ ನಡೆದಿದ್ದು, ಶುಲ್ಕ ನಿಗದಿ ಹಿಂಪಡೆಯುವ ಬಗ್ಗೆ ಪರಿಶೀಲಿಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

“ಜಿಲ್ಲಾಸ್ಪತ್ರೆಯಲ್ಲಿ ಬಡವರಿಗೆ ಉಚಿತವಾಗಿದ್ದ ವಿವಿಧ ಪರೀಕ್ಷೆಗಳಿಗೆ ಹೊಸದಾಗಿ ಶೇ.50 ದರಗಳನ್ನು ನಿಗದಿಪಡಿಸಲಾಗಿದೆ. ಜನರು ಈಗಾಗಲೇ ವಿಪರೀತ ಬೆಲೆ ಏರಿಕೆ ಹಾಗೂ ಬರಗಾಲದಿಂದ ಕಂಗೆಟ್ಟಿರುವಾಗ, ಮೂಲಭೂತ ಅವಶ್ಯಕತೆಯಾದ ಆರೋಗ್ಯ ಸೇವೆಯನ್ನು ಪಡೆಯಲು ಜಿಲ್ಲಾಸ್ಪತ್ರೆಯಲ್ಲಿ ಹೊಸದಾಗಿ ವಿವಿಧ ಪರೀಕ್ಷೆಗಳಿಗೆ ಶೇ.50 ಕಟ್ಟಬೇಕಾಗಿ ಬಂದಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಆದ್ದರಿಂದ ಕೂಡಲೇ ಹೊಸ ಶುಲ್ಕ ಸಂಗ್ರಹಣೆಯನ್ನು ಕೈಬಿಡಬೇಕೆಂದು ಸಭೆಯಲ್ಲಿ ಪಕ್ಷವು ಆಗ್ರಹಿಸಿತ್ತು. ‘ಅನುದಾನದ ಕೊರತೆಯಿಂದಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ನಿರ್ವಹಣೆ ಕಾರ್ಯಗಳನ್ನು ಕೈಗೊಳ್ಳಲು ಜನರಿಂದ ಶುಲ್ಕ ಸಂಗ್ರಹಿಸುವುದು ಅನಿವಾರ್ಯವಾಗಿದೆ. ಶುಲ್ಕ ಹಿಂಪಡೆಯುವ ಬಗ್ಗೆ ಪರಿಶೀಲನೆ ಮಾಡುತ್ತೆವೆ’ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ” ಎಂದಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶುದ್ದ ಕುಡಿಯುವ ನೀರನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು, ಆವರಣದೊಳಗೆ ಸಮರ್ಪಕ ರಸ್ತೆಗಳನ್ನು ನಿರ್ಮಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಶೀಘ್ರವೇ ರಸ್ತೆ ನಿರ್ಮಿಸಲಾಗುವುದು. ಅಗತ್ಯ ಇರುವ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಎಸ್‌ಯುಸಿಐ ನಿಯೋಗದ  ಲಕ್ಷ್ಮಣ ಜಡಗನ್ನವರ, ಗಂಗಾಧರ ಬಡಿಗೇರ, ದೀಪಾ ಧಾರವಾಡ, ಶರಣು ಗೋನವಾರ, ಭವಾನಿಶಂಕರ್, ಸದಸ್ಯರಾದ ಹಣಮೇಶ ಹುಡೇದ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...