ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಹೊಸ ಕಲ್ಪನೆಯೊಂದಿಗೆ ಜಾರಿಗೊಳಿಸುತ್ತಿರುವ ಐತಿಹಾಸಿಕ ಯೋಜನೆಗಳು ರಾಷ್ಟ್ರದ ಗಮನ ಸೆಳೆದಿವೆ ಎಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಒಗ್ಗೂಡಿ ಧಾಡವಾರದ ಹೆಬ್ಬಳ್ಳಿ ಗ್ರಾಮದಲ್ಲಿ ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮವನ್ನು ಆಯೋಜಿಸಿದ್ದವು. ಕಾರ್ಯಕ್ರಮದಲ್ಲಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
“ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆಗಳ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದೆ. ರಾಜ್ಯ ಸರ್ಕಾರವು ನುಡಿದಂತೆ ನಡೆದಿದೆ” ಎಂದು ಹೇಳಿದರು.
ಧಾರವಾಡ ಜಿಲ್ಲೆಯ 3,39,305 ಫಲಾನುಭವಿಗಳಿದ್ದು, ಈ ಪೈಕಿ ಶೇ.86 ರಷ್ಟು ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿತರಾಗಿದ್ದಾರೆ. ಭ್ರಷ್ಟಾಚಾರ ರಹಿತ ಅಭಿವೃದ್ಧಿ ಪರವಾಗಿರುವ ಆಡಳಿತವನ್ನು ನೀಡುತ್ತಿದ್ದೇವೆ ಎಂದರು.




