ಧಾರವಾಡ | ಷಟ್‌ ಪಥ ರಸ್ತೆ ಕಾಮಗಾರಿ; ತಗ್ಗಿದ ಅಪಘಾತಗಳ ಪ್ರಮಾಣ

Date:

ಹುಬ್ಬಳ್ಳಿ-ಧಾರವಾಡ ಬೈಪಾಸ್‌ ರಸ್ತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಮಾಣ ತಗ್ಗಿದೆ. ವರ್ಷಕ್ಕೆ 400ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿ, 90ಕ್ಕೂ ಹೆಚ್ಚು ಮಂದಿ ಸಾಯುತ್ತಿದ್ದ ರಸ್ತೆಯಲ್ಲಿ ಈಗ ಅಪಘಾತಗಳ ಪ್ರಮಾಣ ಶೂನ್ಯಕ್ಕೆ ಇಳಿದಿದೆ. ಈ ಮೊದಲು ‘ಸಾವಿನ ಹೆದ್ದಾರಿ’ ಎಂದೇ ಕರೆಸಿಕೊಳ್ಳುತ್ತಿದ್ದ ರಸ್ತೆಯಿದು.

2023ರ ಮೇವರೆಗಿನ ಐದು ತಿಂಗಳ ಅವಧಿಯಲ್ಲಿ 187 ಅಪಘಾತ ಸಂಭವಿಸಿದ್ದವು. ಅವುಗಳಲ್ಲಿ 39 ಮಂದಿ ಮೃತಪಟ್ಟು, 176 ಮಂದಿ ಗಾಯಗೊಂಡಿದ್ದರು. ನಂತರದ ಜೂನ್‌ನಿಂದ ಸೆಪ್ಟೆಂಬರ್‌ ಅವಧಿಯಲ್ಲಿ 30 ಅಪಘಾತಗಳು ಸಂಭವಿಸಿದವು. ಅವುಗಳಲ್ಲಿ ಇಬ್ಬರು ಮೃತಪಟ್ಟು, 18 ಮಂದಿ ಗಾಯಗೊಂಡರು. ಅಕ್ಟೋಬರ್‌ನಲ್ಲಿ ಎರಡು ಅಪಘಾತ ಪ್ರಕರಣ ಸಂಭವಿಸಿ, ಮೂವರು ಗಾಯಗೊಂಡರು. ಡಿಸೆಂಬರ್‌ನಲ್ಲಿ ಅಪಘಾತ ಪ್ರಕರಣಗಳು ಶೂನ್ಯಕ್ಕೆ ಇಳಿದಿದೆ.

ಜೂನ್‌ನಿಂದ ಡಿಸೆಂಬರ್‌ವರೆಗಿನ ಏಳು ತಿಂಗಳ ಅವಧಿಯಲ್ಲಿ ಶೇ. 90ರಷ್ಟು ಅಪಘಾತ ಪ್ರಕರಣಗಳು ನಿಯಂತ್ರಣಕ್ಕೆ ಬಂದಿವೆ. ಕಾರಣ, ಇಕ್ಕಟ್ಟಾದ ಬೈಪಾಸ್‌ ರಸ್ತೆ ಷಟ್‌ಪಥ ರಸ್ತೆಯಾಗುವಲ್ಲಿ ನಡೆಯುತ್ತಿರುವ ಕಾಮಗಾರಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪಘಾತಗಳು ನಡೆಯುತ್ತಿದ್ದ ಸ್ಥಳದಲ್ಲಿ ರಸ್ತೆಯನ್ನು ವಿಸ್ತರಿಸಲಾಗಿದೆ. ಅಲ್ಲಲ್ಲಿ ಎಚ್ಚರಿಕೆ ಫಲಕ ಹಾಕಲಾಗಿದೆ. ಸವಾರರು ಜಾಗೃತೆಯಿಂದ ವಾಹನಗಳನ್ನು ಓಡಿಸುತ್ತಿದ್ದಾರೆ. ಪರಿಣಾಮ ಗಣನೀಯ ಪ್ರಮಾಣದಲ್ಲಿ ಸಾವು-ನೋವಿನ ಸಂಖ್ಯೆ ಇಳಿಕೆಯಾಗಿದೆ.

ಈ ಮೊದಲು ತಾರಿಹಾಳ ಬೈಪಾಸ್‌ ರಸ್ತೆಯ ಪಕ್ಕ ರಾತ್ರಿವೇಳೆ ಗೂಡ್ಸ್‌, ಕಂಟೇನರ್‌, ಟ್ಯಾಂಕರ್‌ ವಾಹನಗಳು ಕೆಟ್ಟು ನಿಂತಿರುತ್ತಿದ್ದವು. ಬೈಪಾಸ್‌ ರಸ್ತೆಯೆಂದು ಕೆಲವರು ವಾಹನಗಳನ್ನು ವೇಗವಾಗಿ ಚಲಾಯಿಸಿ, ಕೆಟ್ಟು ನಿಂತ ವಾಹನಗಳಿಗೆ ಡಿಕ್ಕಿ ಹೊಡೆಯುತ್ತಿದ್ದರು. ಇನ್ನು ಕೆಲವರು ಮದ್ಯಪಾನ, ಮಾದಕ ವಸ್ತುಗಳ ಸೇವನೆ ಮಾಡಿ ನಿಯಂತ್ರಣ ಕಳೆದುಕೊಂಡು ರಸ್ತೆಯ ವಿಭಜಕಕ್ಕೋ, ಎದುರಿಗೆ ಇರುವ ವಾಹನಗಳಿಗೋ ಡಿಕ್ಕಿ ಹೊಡೆಯುತ್ತಿದ್ದರು ಎನ್ನುತ್ತಾರೆ ಪೊಲೀಸರು.

ಬಹುತೇಕ ಬೈಕ್‌ ಸವಾರರು ಹೆಲ್ಮೆಟ್‌ಗಳನ್ನೇ ಧರಿಸುತ್ತಿರಲಿಲ್ಲ. ಈಗ ರಸ್ತೆ ಕಾಮಗಾರಿ ನಡೆಯುತ್ತಿರುವ ಕಾರಣ ಎಚ್ಚರಿಕೆಯಿಂದ ವಾಹನಗಳನ್ನು ಚಲಾಯಿಸುತ್ತಾರೆ. ಹತ್ತಾರು ಜೆಸಿಬಿ ವಾಹನಗಳು, ಮೂವತ್ತಕ್ಕೂ ಹೆಚ್ಚು ಟ್ರಕ್‌ಗಳು ಕಾಮಗಾರಿ ಸ್ಥಳದಲ್ಲಿ ಇರುವುದರಿಂದ ಸವಾರರು ನಿಧಾನವಾಗಿ ವಾಹನಗಳನ್ನು ಚಲಾಯಿಸುತ್ತಾರೆ. ಹೀಗಾಗಿ ಅಪಘಾತಗಳ ಪ್ರಮಾಣ ಕಡಿಮೆಯಾಗಿದೆ ಎನ್ನುವುದು ಪೊಲೀಸರ ಅಭಿಪ್ರಾಯ.

ಉತ್ತರ ಸಂಚಾರ ಠಾಣೆ ಇನ್‌ಸ್ಪೆಕ್ಟರ್‌ ರಮೇಶ ಗೋಕಾಕ, ಪ್ರತಿದಿನ ಒಂದು-ಎರಡು ಅಪಘಾತ, ವಾರಕ್ಕೆ ಎರಡು, ಮೂರು ಸಾವು ಬೈಪಾಸ್‌ ರಸ್ತೆಯಲ್ಲಿ ಸಾಮಾನ್ಯವಾಗಿತ್ತು. ಸಂಚಾರ ದಟ್ಟಣೆ ನಿಯಂತ್ರಿಸಲು ಹಾಗೂ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಸಾಗಿಸಲು ಕಾಯಂ ಸಿಬ್ಬಂದಿ ನಿಯೋಜಿಸಬೇಕಿತ್ತು. ರಕ್ತಸಿಕ್ತ ದೇಹ, ನಜ್ಜು-ಗುಜ್ಜಾದ ವಾಹನಗಳನ್ನು ನೋಡುತ್ತಲೇ ಕರ್ತವ್ಯ ನಿರ್ವಹಿಸುತ್ತಿದ್ದೆವು. ಕಾಮಗಾರಿ ಆರಂಭವಾದಾಗಿನಿಂದ ಅಪಘಾತಗಳು ಹಂತ-ಹಂತವಾಗಿ‌ ಕಡಿಮೆಯಾಗಿದೆ ಎಂದು ಮಾದ್ಯಮಗಳಿಗೆ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...