ಧಾರವಾಡ | ವಿಜಯೇಂದ್ರ ಬಿಜೆಪಿ ಅಧ್ಯಕ್ಷ ಆಯ್ಕೆ ಚುನಾವಣಾ ಗಿಮಿಕ್: ಕೆಪಿಸಿಸಿ ವಕ್ತಾರ ಗಂಗಾಧರ ದೊಡ್ಡವಾಡ

Date:

ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣೆ ಜರುಗುವ ನಿಟ್ಟಿನಲ್ಲಿ ಲಿಂಗಾಯತ ವೋಟ್ ಬ್ಯಾಂಕ್ ತನ್ನತ್ತ ಸೆಳೆಯುವ ಉದ್ದೇಶದಿಂದ ಬಿಜೆಪಿ ರಾಜ್ಯ ಘಟಕಕ್ಕೆ ಬಿ ವೈ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ತಂತ್ರಗಾರಿಕೆ ರೂಪಿಸಿದೆ ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡ್ಡವಾಡ ತಿಳಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಅವಳಿ ಜಿಲ್ಲೆಯ ಹುಬ್ಬಳ್ಳಿ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿ ಅವರು ಮಾತನಾಡಿದರು.  “ಹಿಂದಿನ ಬಿಜೆಪಿ ಆಡಳಿತದಲ್ಲಿ ಲಿಂಗಾಯತ ಸಮಾಜದಲ್ಲಿ ಹಿರಿಯಣ್ಣನಂತಿರುವ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡದೆ, ಪಂಚಮಸಾಲಿ ಸಮಾಜವನ್ನು ಮೀಸಲಾತಿಯಿಂದ ದೂರವಿಟ್ಟು ಅಲಕ್ಷ್ಯ ಮಾಡಿದ್ದನ್ನು ಪಂಚಮಸಾಲಿಗರು ಇನ್ನೂ ಮರೆತಿಲ್ಲ. ಹೀಗಿರುವಾಗ ವಿಜಯೇಂದ್ರರನ್ನು ನೇಮಕ ಮಾಡುವ ಮೂಲಕ ಲಿಂಗಾಯತರ ಮತ ಬೇಟೆಗೆ ಹೊರಟಿರುವ ಬಿಜೆಪಿ ಸಾಧನೆ ಫಲ ಕೊಡಲಾರದು” ಎಂದು ಅವರು ಪ್ರತಿಕ್ರಿಯಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬಿಜೆಪಿ ಇನ್ನಾದರೂ ಕುಟುಂಬ ರಾಜಕಾರಣದ ಕುರಿತು ಮಾತನಾಡುವುದನ್ನು ನಿಲ್ಲಿಸಬೇಕು: ಆಯನೂರ್‌ ಮಂಜುನಾಥ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಂಗಾಧರ ದೊಡ್ಡವಾಡ ಈ ದಿನ.ಕಾಮ್ ಜತೆಗೆ ಮಾತನಾಡಿ, “ಕಾಂಗ್ರೆಸ್ ಪಕ್ಷದಲ್ಲಿ ಈಗಾಗಲೇ ಡಾ. ಈಶ್ವರ ಖಂಡ್ರೆ ಅವರನ್ನು ಕೆಪಿಸಿಸಿ ಕಾರ್ಯಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ ಬಿ ಡಿ ಜತ್ತಿ, ನಿಜಲಿಂಗಪ್ಪ, ಎಸ್ ಆರ್ ಕಂಠಿ, ವೀರೇಂದ್ರ ಪಾಟೀಲ್‌ರಂತಹ ನಾಲ್ಕು ಜನ ಮೇಧಾವಿಗಳನ್ನು ಮುಖ್ಯಮಂತ್ರಿ ಮತ್ತು ಉಪರಾಷ್ಟ್ರಪತಿ ಸ್ಥಾನದವರೆಗೆ ಕಳುಹಿಸಿ ಕಾಂಗ್ರೆಸ್ ಗೌರವಿಸಿದ್ದನ್ನು ಲಿಂಗಾಯತರು ಮರೆತಿಲ್ಲ. ಹೀಗಿರುವಾಗ ಲಿಂಗಾಯತರನ್ನು ತನ್ನತ್ತ ಸೆಳೆಯಲು ಬಿಜೆಪಿ ಏನೇ ತಂತ್ರಗಾರಿಕೆ ರೂಪಿಸಿದರೂ ಅದು ಯಶಸ್ಸು ಕಾಣಲಾಗದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...