ಧಾರವಾಡ | ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಬೇಡಿ; ಮಾಧ್ಯಮಗಳಿಗೆ ಜಿಲ್ಲಾಧಿಕಾರಿ ಮನವಿ

Date:

ಡಿಸೆಂಬರ್ 21 ಮತ್ತು 22 ರಂದು ಕೆಲವು ಮಾಧ್ಯಮಗಳಲ್ಲಿ ಧೃವ ಎಂಬ ಮಗುವಿಗೆ ಲಸಿಕೆ ನೀಡಿದ ನಂತರ ಮಗು ಸಾವನ್ನಪ್ಪಿದೆ ಎಂದು ವರದಿಯಾಗಿದೆ. ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿ ಅನುಸಾರ ಮಗುವಿಗೆ ಡಿ.21ರಂದು ಲಸಿಕೆ ನೀಡಿಲಾಗಿದೆ. ಅದೇ ಲಸಿಕೆಯನ್ನು ಅದೇ ದಿನ ಬೇರೆ ಮಕ್ಕಳಿಗೂ ಕೂಡ ನೀಡಲಾಗಿದೆ. ಆ ಎಲ್ಲ ಮಕ್ಕಳು ಆರೋಗ್ಯವಾಗಿದ್ದಾರೆ. ಆದರೆ, ಲಸಿಕೆಯಿಂದಲೇ ಮಗು ಸಾವನ್ನಪ್ಪಿದೆ ಎಂದು ಸುದ್ದಿ ಬಿತ್ತಸಿವೆ. ಮಾಧ್ಯಮಗಳು ಲಸಿಕೆಯ ಕುರಿತು ತಪ್ಪು ಮಾಹಿತಿ ಹರಡಬಾರದು ಎಂದು ಧಾರವಾಡ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

“ಮಕ್ಕಳನ್ನು ಮಾರಕ ರೋಗಗಳಿಂದ ರಕ್ಷಿಸಲು ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು ಲಸಿಕೆ ನೀಡಲಾಗುತ್ತದೆ. ಮಗುವಿನ ಮರಣದ ಕುರಿತಂತೆ ನಿಯಮಾನುಸಾರ ಸಮಿತಿಯಿಂದ ತನಿಖೆ ನಡೆಸಲಾಗುತ್ತಿದೆ. ವರದಿಯನ್ನು ರಾಜ್ಯಮಟ್ಟಕ್ಕೆ ಸಲ್ಲಿಸಲಾಗುತ್ತದೆ. ಮಗು ಸಾವಿಗೆ ಕಾರಣವೇನೆಂದು ನಿರ್ಧರಿಸಲಾಗುತ್ತದೆ” ಎಂದು ಹೇಳಿದ್ದಾರೆ.

“ಯಾವುದೇ ವಿಚಾರದಲ್ಲಿಯೂ ನಿಖರ ಕಾರಣ ತಿಳಿಯದೇ ತಪ್ಪು ಮಾಹಿತಿಯನ್ನು ಮಾಧ್ಯಮಗಳು ಭಿತ್ತಿರಿಸಬಾರದು” ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...