ಮಾಜಿ ಸಿಎಂ ಬೊಮ್ಮಾಯಿ ಜನಿಸಿದ ಗ್ರಾಮಕ್ಕೆ ದೊರೆಯುವುದೇ ಆರೋಗ್ಯ ಕೆಂದ್ರದ ಭಾಗ್ಯ

Date:

ಸಾಮಾನ್ಯವಾಗಿ ಆರೋಗ್ಯ ಕೇಂದ್ರಕ್ಕೆ ಎಲ್ಲರೂ ಬರುವುದು ಅನಾರೋಗ್ಯದಿಂದ ಮುಕ್ತರಾಗುವುದಕ್ಕೆ. ಆದರೆ; ಈ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವಾತಾವರಣ ಹೊಸ ರೋಗವನ್ನು ತಂದೊಡ್ಡುವಂತಿದೆ. ಅಷ್ಟಕ್ಕೂ ಈ ಗ್ರಾಮ ಯಾವುದು ಗೊತ್ತೇ? ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನಿಸಿದ ಕಮಡೊಳ್ಳಿ ಗ್ರಾಮ.

ಧಾರವಾಡ ಜಿಲ್ಲೆಯ ಕುಂದಗೋಳ‌ ತಾಲೂಕಿನ ಈ ಗ್ರಾಮದ ಆರೋಗ್ಯ ಕೇಂದ್ರದಲ್ಲಿ ಖಾಯಂ ಆರೋಗ್ಯಾಧಿಕಾರಿಯಿಲ್ಲ. ಒಬ್ಬರೆ ನರ್ಸ್‌ ಇದ್ದು, ಅವರೂ ತಿಳಿದಾಗೊಮ್ಮೆ ಬಂದು ಹೋಗುತ್ತಾರೆ. ರೋಗಿಗಳು ಹೆಚ್ಚಿನ ಚಿಕಿತ್ಸೆಗಾಗಿ ಕುಂದಗೋಳದ ತಾಲೂಕು ಸರ್ಕಾರಿ ಆಸ್ಪತ್ರಗೆ ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ. ನಮ್ಮೂರಿನ ಆರೋಗ್ಯ ಕೇಂದ್ರದ ಸಮಸ್ಯೆ ಯಾವತ್ತು ಬಗೆಹರಿಯುವುದೊ? ಎಂದು ನಿಟ್ಟುಸಿರು ಬಿಡುತ್ತಾರೆ ಗ್ರಾಮಸ್ಥರು.

“ಆರೋಗ್ಯ ಕೇಂದ್ರದ ಸುತ್ತಲೂ ಗಿಡಗಂಟಿ ಕಸದಂತೆ ಬೆಳೆದಿದೆ. ಆಸ್ಪತ್ರೆ ಬಳಿಯೇ ಬಸ್ ನಿಲ್ದಾಣವಿದ್ದು, ಅದರ ಕಟ್ಟೆಯ ಮೇಲೆ ಕುಡುಕರು ಮದ್ಯಪಾನ ಮಾಡಿ ವಾತಾವರಣ ಕಲುಸಿತಗೊಳಿಸುತ್ತಾರೆ. ಈ ದಾವಾಖಾನೆಯ ಹಿಂದೆಯೆ ಸ್ಥಳಿಯರು ಮಲ, ಮೂತ್ರ ವಿಸರ್ಜನೆ ಮಾಡುತ್ತಾರೆ. ಸ್ಥಳೀಯರೂ ಗ್ರಾಮದ ಆರೋಗ್ಯ ಕೇಂದ್ರವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಮರೆತಿದ್ದಾರೆ” ಎಂದು ಗ್ರಾಮ ಪಂಚಾಯತಿ ಉಪಾಧ್ಯಕ್ಷ ದಾದಾಪೀರ ಗುಡಗೇರಿ ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಗ್ರಾಮ ಪಂಚಾಯತಿ ಅಧ್ಯಕ್ಷೆ ಮಾತನಾಡಿ, “ಆರೋಗ್ಯ ಕೇಮದ್ರದ ಹಳೆ ಕಟ್ಟಡವು ಸಂಪೂರ್ಣ ಹಾಳಾಗಿದ್ದು ನಮ್ಮೂರಿಗೆ ಒಂದು ಪ್ರತ್ಯೇಕ ಆರೋಗ್ಯ ಕೇಂದ್ರದ ಅವಶ್ಯಕತೆಯಿದೆ. ಈ ಗ್ರಾಮದ ನಿವಾಸಿಗಳಲ್ಲಿ ಅತಿಹೆಚ್ಚು ಬಡವರಿದ್ದಾರೆ. ಅದ್ದರಿಂದ ಅವರಿಗೆಲ್ಲ ಅನುಕೂಲ ಮಾಡಿಕೊಡಲು ಅಧಿಕಾರಿಗಳೊಂದಿಗೆ ಮಾತನಾಡಿ ದಾವಾಖಾನೆಯನ್ನು ಸ್ವಚ್ಛಗೊಳಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ?: ಮೈಸೂರು | ‘ಸೋಮಾರಿ ಸಿದ್ದ’ ಎಂದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್

“ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಮ್ಮೂರಿನವರೆ ಆದಕಾರಣ; ಅವರ ಅಧಿಕಾರಾವಧಿಯಲ್ಲಿ ಆರೋಗ್ಯ ಕೇಂದ್ರಕ್ಕಾಗಿ ಎರಡು ಎಕರೆ ಜಮೀನನ್ನು ದಾನವನ್ನಾಗಿ ನೀಡಿದ್ದಾರೆ. ಆದರೆ, ಇಂದಿಗೂ ಆ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುತ್ತಿಲ್ಲ. ಗ್ರಾಮ ಪಂಚಾಯತಿ ಸದಸ್ಯರೂ ಸಹಿತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವುದಿಲ್ಲ. ದಾವಾಖಾನೆಯಲ್ಲೂ ಕೂಡಾ ರೋಗಿಗಳಿಗೆ ಸರಿಯಾದ ವ್ಯವಸ್ಥೆಯಿಲ್ಲ” ಎಂದು ಸ್ಥಳಿಯರು ಹೇಳುತ್ತಾರೆ.

ಮಾಜಿ ಗ್ರಾಮಪಂಚಾಯತಿ ಉಪಾಧ್ಯಕ್ಷ ಶಂಭಯ್ಯ ನೀರಲಗಿಮಠ ಮಾತನಾಡಿ, “ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಸರ್ಕಾರ ಅನುಮತಿ ನೀಡಿದೆ ಎಂದು ಬಸವರಾಜ ಬೊಮ್ಮಾಯಿಯವರೆ ಹೇಳಿದ್ದರು. ಮುಖ್ಯ ಆರೋಗ್ಯ ಅಧಿಕಾರಿಗಳಿಂದಲೂ ಈ ಹಿಂದೆ ಸರ್ಕಾರದಿಂದ ಅನುದಾನವೂ ಬಿಡುಗಡೆಯಾಗಿದೆ. ನಾವು ಜಾಗೆ ನೋಡಲು ಬರುತ್ತೇವೆ ಎಂದು ಹೇಳಿದ್ದರು. ಅನಿವಾರ್ಯ ಕಾರಣದಿಂದ ಯಾರೂ ಬರಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿಗೆ, ಆರೋಗ್ಯ ಸಚಿವರಿಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೂ ಮನವಿ ಸಲ್ಲಿಸಿದ್ದೇವೆ. ಒಂದು ವೇಳೆ ಸರ್ಕಾರ ಅನುದಾನ ಬಿಡುಗಡೆಗೊಳಿಸಿದರೆ; ಆರೋಗ್ಯ ಕೆಂದ್ರದ ಸುಸಜ್ಜಿತ ಕಟ್ಟಡ ನಿರ್ಮಿಸಲು ಮುಂದಾಗುತ್ತೇವೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...