ಹುಬ್ಬಳ್ಳಿ | ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು: ಕಿಮ್ಸ್​​ ಸಿಬ್ಬಂದಿ ನಿರ್ಲಕ್ಷ್ಯ ಆರೋಪ

Date:

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದರೂ ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ಹುಬ್ಬಳ್ಳಿಯ ಕಿಮ್ಸ್​​ ಸಿಬ್ಬಂದಿ ಬೇಜವಾಬ್ದಾರಿ ತೋರಿರುವ ಕಾರಣ ಆತನ ಬ್ರೈನ್​ ಡೆಡ್​​ ಆಗಿ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಧಾರವಾಡದ ತಾಲೂಕಿನ ಮೊರಬ ಗ್ರಾಮದ ನಿವಾಸಿ ಪ್ರಕಾಶ್(25) ಮೃತ ಮ್ಯಕ್ತಿಯಾಗಿದ್ದು, ಇವರು ಜೆಸಿಬಿ ಚಾಲಕನಾಗಿ ಕೆಲಸಮಾಡಿಕೊಂಡಿದ್ದರು.

“ಮಾರ್ಚ್ 13ರಂದು ಕೆಲಸ ಮುಗಿಸಿ ಬೈಕ್​ನಲ್ಲಿ ತನ್ನೂರಿಗೆ ಹೋಗುತ್ತಿದ್ದ ವೇಳೆ ಯಾವುದೋ ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಕಾಶ್​​ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಆ್ಯಂಬುಲೆನ್ಸ್​ ಮೂಲಕ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಅಲ್ಲಿನ ವೈದ್ಯರು ಹುಬ್ಬಳ್ಳಿ ಕಿಮ್ಸ್​​ಗೆ ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ. ಹೀಗಾಗಿ ರಾತ್ರಿಯೇ ಪ್ರಕಾಶ್ ಅವ​​ರನ್ನು ಕಿಮ್ಸ್​​ಗೆ ಕರೆತರಲಾಗಿತ್ತು. ಆದರೆ ಇಲ್ಲಿನ ಸಿಬ್ಬಂದಿ ಮಾತ್ರ ಅರ್ಧ ಗಂಟೆಗೂ ಹೆಚ್ಚು ಕಾಲ ಕಳೆದರೂ ಕನಿಷ್ಠ ಚಿಕಿತ್ಸೆಯನ್ನೂ ನೀಡಿಲ್ಲ. ಬೆಡ್ ಇಲ್ಲವೆಂಬ ಕಾರಣ ಹೇಳಿ ನಿರ್ಲಕ್ಷ್ಯ ವಹಿಸಿದ್ದಾರೆ” ಎಂಬುದು ಕುಟುಂಬಸ್ಥರ ಆರೋಪ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆ್ಯಂಬುಲೆನ್ಸ್​​ನಿಂದ ಗಾಯಾಳುವನ್ನು ಕೆಳಗಿಳಿಸಲು ಸಿಬ್ಬಂದಿ ಬಾರದ ಕಾರಣ, ಅರ್ಧಗಂಟೆಗೂ ಹೆಚ್ಚು ಹೊತ್ತು ಕಾದು, ಬಳಿಕ ಅನಿವಾರ್ಯವಾಗಿ ಪ್ರಕಾಶ್​​ನನ್ನು ಮತ್ತೆ ಧಾರವಾಡದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರೊಳಗಾಗಿ ಅವರ ಬ್ರೈನ್ ಡೆಡ್ ಆಗಿದ್ದುದರಿಂದ ಮರಳಿ ಮತ್ತೆ ಕಿಮ್ಸ್​​ಗೆ ಕರೆತರಲಾಗಿತ್ತು. ಆದರೂ ಗಾಯಾಳು ಮಾತ್ರ ಬದುಕುಳಿಯಲಿಲ್ಲ” ಎಂದು ಅವಲತ್ತುಕೊಂಡಿದ್ದಾರೆ.

“ಧಾರವಾಡ ಜಿಲ್ಲಾ ಆಸ್ಪತ್ರೆಯಿದ ಹುಬ್ಬಳ್ಳಿ ಕಿಮ್ಸ್, ಹುಬ್ಬಳ್ಳಿ ಕಿಮ್ಸ್​​ನಿಂದ ಧಾರವಾಡ ಖಾಸಗಿ ಆಸ್ಪತ್ರೆ ಓಡಾಟದಲ್ಲಿಯೇ ಎರಡು ಗಂಟೆಗೂ ಹೆಚ್ಚು ಸಮಯ ಹೋಗಿದ್ದರಿಂದ ಸೂಕ್ತ ಚಿಕಿತ್ಸೆ ಸಿಗದ ಕಾರಣ ಪ್ರಕಾಶ್ ಬಾರದ ಲೋಕಕ್ಕೆ ಹೋಗಿದ್ದಾರೆ. ಹುಬ್ಬಳ್ಳಿ ಕಿಮ್ಸ್​​ನಲ್ಲಿಯೇ ಸಕಾಲಕ್ಕೆ ಚಿಕಿತ್ಸೆ ಸಿಕ್ಕಿದ್ದರೆ ಪ್ರಕಾಶ್ ಬದುಕುಳಿಯುತ್ತಿದ್ದರು. ಆದರೆ ಇಲ್ಲಿನ ಸಿಬ್ಬಂದಿ ಆತನನ್ನು ಬಲಿ ಪಡೆದಿದ್ದಾರೆ” ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಮಖಂಡಿ | ದಲಿತ ಯುವಕನ ಹತ್ಯೆ ಪ್ರಕರಣ: ಪೊಲೀಸರ ನಿರ್ಲಕ್ಷ್ಯದ ವಿರುದ್ಧ ಕ್ರಮಕ್ಕೆ ದಸಂಸ ಆಗ್ರಹ

“ಇನ್ನು ಹುಬ್ಬಳ್ಳಿಯ ಕಿಮ್ಸ್​​ನಲ್ಲಿ ಇತ್ತೀಚೆಗೆ ಕೆಲ ಡಿ ಗ್ರೂಪ್ ಸಿಬ್ಬಂದಿ ಹಾಗೂ ವೈದ್ಯರು ಜನರ ಜೀವದ ಜತೆಗೆ ಚೆಲ್ಲಾಟವಾಡುತ್ತಿದ್ದಾರೆ. ಇಂತವರ ವಿರುದ್ದ ಮೇಲಾಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕಿದ್ದು, ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡಿ ಜೀವ ಉಳಿಸುವ ಕೆಲಸ ಮಾಡಬೇಕಿದೆ. ಜನರು ಕಿಮ್ಸ್​​ ಸಂಸ್ಥೆಯನ್ನು ಬಡವರ ಸಂಜೀವಿನಿ ಎಂದೇ ನಂಬಿರುವ ಕಾರಣ, ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ವಾರ್ತಾ ಇಲಾಖೆ ಸಹಾಯಕನಿಂದ ಪತ್ರಕರ್ತನ ಮೇಲೆ ಹಲ್ಲೆ; ಸಾರ್ವಜನಿಕರ ಆಕ್ರೋಶ

ವಾರ್ತಾ ಇಲಾಖೆಯ ಸಹಾಯಕ ಮಡಿವಾಳರ ಉರ್ಫ್ ಹಿರೇಮಠ ಎಂಬುವವರು ಓರ್ವ ಪತ್ರಕರ್ತನೊಬ್ಬನ...

ಧಾರವಾಡ | ಕಲಾಜಾಥಾ ಪ್ರಚಾರ ಕಾರ್ಯಕ್ರಮಕ್ಕೆ ತಾಳ ಹಾಕಿ, ಗ್ಯಾರಂಟಿ ಯೋಜನೆಯ ಹಾಡು ಹಾಡಿ, ಸಂತೋಷ ಲಾಡ್ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಂಚಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ...

ಧಾರವಾಡ | ಸರ್ವಜ್ಞನ ತ್ರಿಪದಿ ಜನಸಾಮಾನ್ಯರಿಗೆ ಸುಲಭವಾಗಿ ಅರ್ಥೈಸುವ ಸಾಹಿತ್ಯ: ಶಾಕೀರ್ ಸನದಿ

ಸರ್ವಜ್ಞರು ತ್ರಿಪದಿ ಎಂಬ ಕಾವ್ಯರೂಪದ ಮೂಲಕ ಜನಪ್ರಿಯ ಆಗಿದ್ದಾರೆ. ತ್ರಿಪದಿ ಚಿಕ್ಕದಾಗಿದ್ದರೂ...