ಆರ್‌ಎಸ್‌ಎಸ್‌ ನಿಷೇಧ ಸಂವಿಧಾನಕ್ಕೆ ವಿರುದ್ಧ: ನಿವೃತ್ತ ನ್ಯಾ. ಸಂತೋಷ್‌ ಹೆಗ್ಡೆ

Date:

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಅದರ ಚಟುವಟಿಕೆಗಳು ದೇಶದ ಐಕ್ಯತೆಗೆ ಭಂಗ ತರುತ್ತವೆ ಎಂಬ ವಿಷಯ ಮತ್ತೆ ಮುನ್ನೆಲೆಗೆ ಬಂದಿವೆ. ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಧಾರವಾಡದಲ್ಲಿ ಈ ವಿಚಾರವಾಗಿ ಪ್ರತಿಕ್ರಿಯಿಸಿ, ಆರ್‌ಎಸ್‌ಎಸ್ ನಿಷೇಧ ಸಂವಿಧಾನಕ್ಕೆ ವಿರುದ್ಧ ಎಂದು ಹೇಳಿದ್ದಾರೆ.

ಸಂಘಟನೆ ಕಟ್ಟುವ ಅವಕಾಶ ಸಂವಿಧಾನದಲ್ಲಿದೆ. ಆರ್‌ಎಸ್‌ಎಸ್‌ ನಿಷೇಧಿಸುವುದು ಸಂವಿಧಾನಕ್ಕೆ ವಿರುದ್ಧವಾಗುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಹೇಳಿದ್ದಾರೆ.

‘ಕಾಂಗ್ರೆಸ್ ಸರ್ಕಾರ ಆರ್‌ಎಸ್‌ಎಸ್‌ ನಿಷೇಧಕ್ಕೆ ಮುಂದಾಗಿದೆ ಎಂದು ಸುದ್ದಿಗಾರರು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಪಕ್ಷವನ್ನೇ ನಿಷೇಧಿಸುತ್ತಾರೆ. ಆಗ ಅವರ ಆಟ ಶುರುವಾಗುತ್ತದೆ. ಒಟ್ಟಿನಲ್ಲಿ ನಿಷೇಧಿಸುವ ಆಟ ಜೋರಾಗಿದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘಟನೆ ಮಾಡುವ ಅಧಿಕಾರ, ಹಕ್ಕು ಸಂವಿಧಾನ ಕೊಟ್ಟಿದೆ. ಹೀಗಿರುವಾಗ ಆರ್‌ಎಸ್‌ಎಸ್‌ ಸಂಘಟನೆ ನಿಷೇಧಿಸಲು ಹೊರಟಿರುವುದು ಸಂವಿಧಾನ ವಿರೋಧಿ ಎಂದು ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಶೇ 33 ಅಂಕ ನಿಗದಿ- ಭೇದಭಾವ ಹೆಚ್ಚಿಸುವ ಪಲಾಯನವಾದಿ ಹಾದಿ

ಆದರೆ ಸಂತೋಷ್‌ ಹೆಗ್ಡೆ ಅವರ ಹೇಳಿಕೆ ಸಂಘಟನೆಯ ಹಿಂದಿನ ಇತಿಹಾಸವನ್ನು ನಿರ್ಲಕ್ಷಿಸುವಂತಿದೆ. ಸಂಘಟನೆಯ ಸ್ಥಾಪಕರು ಬ್ರಿಟಿಷರೊಂದಿಗೆ ಸಹಕಾರ ನೀಡಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೇ ಇದ್ದುದು ಚರಿತ್ರೆಯ ಸತ್ಯ. ಮಹಾತ್ಮ ಗಾಂಧಿಯ ಹತ್ಯೆಯಲ್ಲಿ ಸಂಘದ ಸಂಪರ್ಕ ಆರೋಪಗಳು ಇದರ ಉದ್ದೇಶವನ್ನು ಪ್ರಶ್ನಿಸುತ್ತವೆ, ಇದು ಸಂವಿಧಾನದ ಮೂಲಭೂತ ಮೌಲ್ಯಗಳಾದ ಜಾತ್ಯತೀತತೆಗೆ ವಿರೋಧಿಯಾಗಿದೆ.

ಕರ್ನಾಟಕದ ಐಟಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಸರ್ಕಾರಿ ಶಾಲೆಗಳು, ಕಾಲೇಜುಗಳು, ದೇವಸ್ಥಾನಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸಬೇಕು. ಸರ್ಕಾರಿ ನೌಕರರು ಈ ಸಂಘಟನೆಯಲ್ಲಿ ಪಾಲ್ಗೊಳ್ಳಬಾರದು ಎಂದು ಒತ್ತಾಯಿಸಿದ್ದಾರೆ. ಅವರು ಸಂಘವನ್ನು “ವಿಷಕಾರಿ ವೈರಸ್” ಎಂದು ಕರೆದು, ಅದರ ಶಾಖೆಗಳು ಯುವ ಮನಸ್ಸುಗಳನ್ನು ವಿಷಲಿಪ್ತಗೊಳಿಸುತ್ತವೆ ಎಂದು ಆರೋಪಿಸಿದ್ದಾರೆ.

ಖರ್ಗೆ ಅವರ ಪತ್ರದ ನಂತರ ಅವರಿಗೆ ಬೆದರಿಕೆ ಕರೆಗಳು ಬಂದಿವೆ, ಇದು ಸಂಘದ ಉದ್ದೇಶದ ಬಗ್ಗೆ ಮತ್ತಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ಸಂಘದ ಚಟುವಟಿಕೆಗಳು ಕೋಮು ಗಲಭೆಗಳನ್ನು ಪ್ರಚೋದಿಸುವುದು, ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಹರಡುವುದು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದ್ದು, ಸಾಕಷ್ಟು ಕಡೆ ರುಜುವಾತಾಗಿದೆ.ಆರ್‌ಎಸ್‌ಎಸ್‌ನ ಚಟುವಟಿಕೆಗಳು ರಾಷ್ಟ್ರೀಯ ಐಕ್ಯತೆಗೆ ಬೆದರಿಕೆಯಾಗಿದ್ದು, ಇದು ಭಾರತದ ವೈವಿಧ್ಯತೆಗೆ ಧಕ್ಕೆ ತರುತ್ತದೆ ಎಂಬ ಆರೋಪಗಳನ್ನು ದೃಢಪಡಿಸುತ್ತದೆ.

ನಂತರದ ಬೆಳವಣಿಗೆಗಳಲ್ಲಿ, ಸಂಪುಟ ಸಂಭೆಯಲ್ಲಿ ಸಭೆಯಲ್ಲಿ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸೇರಿದಂತೆ ಖಾಸಗಿ ಸಂಘಟನೆಗಳ ಚಟುವಟಿಕೆಗಳನ್ನು ನಿಯಂತ್ರಿಸಲು ನಿಯಮಗಳನ್ನು ತರುವ ನಿರ್ಧಾರ ಮಾಡಿದೆ. ತಮಿಳುನಾಡು ಮಾದರಿಯನ್ನು ಅನುಸರಿಸಿ, ಪೂರ್ವಾನುಮತಿ ಕಡ್ಡಾಯಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...