ಉಡುಪಿ | ಕಟ್‌ಬೆಲ್ತೂರು : ದಲಿತರ ಬೇಡಿಕೆಗಳ ಬಗ್ಗೆ ಡಿಎಚ್ಎಸ್ ಹಕ್ಕೊತ್ತಾಯ

Date:

ದಲಿತ ಹಕ್ಕುಗಳ ಸಮಿತಿ ಕರ್ನಾಟಕ ರಾಜ್ಯ ಸಮಿತಿಯು ನೀಡಿದ ಕರೆಯ ಮೇರೆಗೆ ದಲಿತರ ವಸತಿ ಸಹಿತ ಇತರೆ ಹಕ್ಕುಗಳನ್ನು ಆಗ್ರಹಿಸಿ ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿಗಳ ಮುಂದೆ ಬೇಡಿಕೆಗಳನ್ನು ಸಲ್ಲಿಸುವ ಕಾರ್ಯಕ್ರಮದ ಅಂಗವಾಗಿ ದಲಿತ ಹಕ್ಕುಗಳ ಸಮಿತಿ ಕಟ್‌ಬೆಲ್ತೂರು ಘಟಕದ ಸಂಚಾಲಕರಾದ ಶ್ರೀಮತಿ ಸಹಾನ ಮತ್ತು ದಲಿತ ಚಿಂತಕ ಶುಬಭಕರ ಇವರ ನಾಯಕತ್ವದಲ್ಲಿ ಹಾಗೂ ಇತರ ದಲಿತ ಸದಸ್ಯರ ನೇತೃತ್ವದಲ್ಲಿ ಇಂದು ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ವೈಶಾಲಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರಾದ ಶ್ರೀಮತಿ ರೇಖಾ ಇವರಿಗೆ ವಿವಿಧ ಬೇಡಿಕೆಗಳ ಬಗ್ಗೆ ಮನವಿಯನ್ನು ಅರ್ಪಿಸಲಾಯಿತು.

ದಲಿತರ ಬೇಡಿಕೆಗಳನ್ನು ಕಡೆಗಣಿಸಿದಲ್ಲಿ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಹಾಗೂ ಸಾಮಾಜಿಕ ಹೋರಾಟವನ್ನು ಡಿಎಚ್ ಎಸ್ ಮೂಲಕ ಸಂಘಟಿಸಲಾಗುವುದು ಎಂದು ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸಂಜೀವ ಬಳ್ಕೂರು ಹೇಳಿದರು.

ಸಂಜೀವ ಬಳ್ಕೂರ್ ರವರು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ನೆರೆದ ಗ್ರಾಮ ಪಂಚಾಯಿತಿ ಸದಸ್ಯರಿಗೆ ದಲಿತರ ಹಕ್ಕುಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ರಾಮ ಶೆಟ್ಟಿ ಹಾಗೂ ಸದಸ್ಯರಾದ ಶರತ್ ಕುಮಾರ್ ಶೆಟ್ಟಿ ಶ್ರೀಮತಿ ವಿಮಲಾ ಅಶೋಕ ಬಳೆಗಾರ ಶಾರದಾ ಮುಂತಾದವರು ಉಪಸ್ಥಿತರಿದ್ದು ನಮ್ಮ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಸ್ಪಂದಿಸುವುದಾಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 11 21 at 11.22.24 AM

ಈ ಹೋರಾಟದಲ್ಲಿ ಜಿಲ್ಲಾ ಕಾರ್ಯದರ್ಶಿಯವರಾದ ಶ್ರೀ ರವಿ ವಿಎಂ ಈ ಕಾರ್ಯಕ್ರಮದ ಬಗ್ಗೆ ವಿವರಿಸಿದ್ದರು. ಹಿರಿಯ ದಲಿತ ಮುಖಂಡರಾದ ಬಾಬು ಬಳ್ಕೂರ್ ರವರು ಅಲ್ಲಿ ನೆರೆದಿರುವ ಅವರ ಹಳೆಯ ಸ್ನೇಹಿತರನ್ನು ಮುಂದಿನ ದಿನಗಳಲ್ಲಿ ಸಂಘಟನೆಯನ್ನು ಬೆಳೆಸಿ ಗಟ್ಟಿಗೊಳಿಸಲು ಸಹಕರಿಸುವಂತೆ ವಿನಂತಿಸಿದರು. ನಮ್ಮ ಘಟಕದ ಸಂಚಾಲಕರಾದ ಶ್ರೀಮತಿ ಸಹನಾ ಅವರು ನಮ್ಮ ಹಕ್ಕುತಾಯದ ಮನವಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರಿಗೆ ಹಸ್ತಾಂತರಿಸಿ ಇದಕ್ಕೆ ಸ್ಪಂದಿಸಿದ ಬಗ್ಗೆ ವಂದನಾರ್ಪಣೆಯನ್ನು ಸಲ್ಲಿಸಿದರು.

ಈ ಕಾರ್ಯಕ್ರಮದ ಮುಂದಿನ ಭಾಗವಾಗಿ ಮುಳ್ಳಿಕಟ್ಟೆಯ ಹೊಸಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶೊಭ ರಮೇಶ್ ರವರನ್ನು ಜಿಲ್ಲಾ ನಾಯಕರಾದ ರವಿ ವಿಎಂ ಮತ್ತು ಬಾಬುಬಳ್ಕೂರು ಹಾಗೂ ಜಿಲ್ಲಾಧ್ಯಕ್ಷರಾದ ಸಂಜೀವ ಬಳ್ಕೂರು ಭೇಟಿ ಮಾಡಿ ಅಲ್ಲಿನ ನಿವಾಸಿ ಶ್ರೀ ಕೃಷ್ಣ ಇವರ ಮನೆಗೆ ಕೂಡಲೇ ವಿದ್ಯುತ್ ಸಂಪರ್ಕವನ್ನು ಕಲ್ಪಿಸಿ ಕೊಡುವಂತೆ ವಿನಂತಿಸಿ ಮಾತುಕತೆ ನಡೆಸಿ ಅಭಿವೃದ್ಧಿ ಅಧಿಕಾರಿಗಳ ಈ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿ ದ ನಂತರದಲ್ಲಿ ಶ್ರೀ ಕೃಷ್ಣ ಅವರಿಗೆ ಸಂಬಂಧಪಟ್ಟ ದಾಖಲೆಯನ್ನು ಕೂಡಲೇ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಒದಗಿಸುವಂತೆ ನಿರ್ದೇಶನ ನೀಡಲಾಯಿತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...