ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡುವುದಾಗಿ ಎ‌ಫ್‌ಸಿಐ ಹೇಳಿತ್ತಾ: ಸಿ ಟಿ ರವಿ ಪ್ರಶ್ನೆ

Date:

  • ‘ಆಕಾಶವೇನು ಕಳಚಿ ಬಿದ್ದಿಲ್ಲ. ಹಣ ಕೊಟ್ಟರೆ ಅಕ್ಕಿ ಎಲ್ಲ ಕಡೆಯೂ ಸಿಗುತ್ತದೆ’
  • ಸದ್ದಿಲ್ಲದೆ ಮದ್ಯದ ದರವನ್ನೂ ಏರಿಕೆ ಮಾಡಲಾಗಿದೆ: ಸಿ ಟಿ ರವಿ ಆಕ್ಷೇಪ

ರಾಜ್ಯ ಸರ್ಕಾರದಿಂದ ಆಗದಿರುವ ಕೆಲಸಕ್ಕೆ ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಸಿದ್ದರಾಮಯ್ಯ ಈಗಲೇ ಶುರು ಮಾಡಿದ್ದಾರೆ. ನಾಲೈದು ತಿಂಗಳ ಬಳಿಕ ಕೇಂದ್ರವನ್ನು ದೂರುತ್ತಾರೆ ಎಂದು ಭಾವಿಸಿದ್ದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದರು.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡುವುದಾಗಿ ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕಮಿಟ್ಮೆಂಟ್‌ ಪತ್ರ ಏನಾದರೂ ಕೊಟ್ಟಿತ್ತೇ” ಎಂದು ಪ್ರಶ್ನಿಸಿದರು.

“ಆಕಾಶವೇನು ಕಳಚಿ ಬಿದ್ದಿಲ್ಲ. ಹಣ ಕೊಟ್ಟರೆ ಅಕ್ಕಿ ಎಲ್ಲ ಕಡೆಯೂ ಸಿಗುತ್ತದೆ. ತಲಾ 10 ಕೆ.ಜಿ ಅಕ್ಕಿ ಕೊಡಲಾಗದಿದ್ದರೆ ಎಲ್ಲ ಪಡಿತರ ಚೀಟಿದಾರರ ಖಾತೆಗೆ ಹಣ ಹಾಕಿ, ಅವರೇ ಅಕ್ಕಿ ಕೊಂಡುಕೊಳ್ಳುತ್ತಾರೆ. ಕೊಟ್ಟರೆ ನಾನೇ ಕೊಟ್ಟೆ ಎನ್ನುವುದು, ಕೊಡದಿದ್ದರೆ ಕೇಂದ್ರದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಕ್ಕಿ ಕಳುಹಿಸುತ್ತೇವೆ. ಚೀಲದ ಮೇಲೆ ನಿಮ್ಮ ಹೆಸರು ಹಾಕಿಕೊಂಡು ವಿತರಿಸಿ ಎಂದು ಎಫ್‌ಸಿಐ ಪತ್ರ ನೀಡಿತ್ತಾ? ಸಿದ್ದರಾಮಯ್ಯ ಅವರು ‘ಸುಳ್ಳುರಾಮಯ್ಯ’ ಅಲ್ಲ ಎನ್ನುವುದಾದರೆ ಕಮಿಟ್ಮೆಂಟ್ ಪತ್ರ ತೋರಿಸಲಿ” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿಯವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು: ಸಿದ್ದರಾಮಯ್ಯ ತರಾಟೆ

“ವಿದ್ಯುತ್‌ ದರವನ್ನು ಮೆಲ್ಲಗೆ ಏರಿಸಿದ್ದಾರೆ. ಹಿಂದಿನ ಸರ್ಕಾರವೇ ತೀರ್ಮಾನ ಮಾಡಿತ್ತು ಎನ್ನುತ್ತಿದ್ದಾರೆ. ಹಿಂದು-ಮುಂದು ನೋಡದೆ ಪ್ರಸ್ತಾವನೆಗೆ ಒಪ್ಪಿಗೆ ಕೊಟ್ಟವರು ಯಾರು ಸಿದ್ದರಾಮಯ್ಯ ಅವರೇ? ಜನರಿಗೆ ಗ್ಯಾರಂಟಿ ಘೋಷಣೆ ಮಾಡುವಾಗ ದೊಡ್ಡದಾಗಿ ಸದ್ದು ಮಾಡುವುದು, ಕಿತ್ತುಕೊಳ್ಳುವಾಗ ಸದ್ದೇ ಇರುವುದಿಲ್ಲ. ಬಿಜೆಪಿ ಸರ್ಕಾರದ ಮುಂದೆಯೂ ಕೆಇಆರ್‌ಸಿ ಪ್ರಸ್ತಾವನೆ ಇಟ್ಟಿತ್ತು. ಅನುಮತಿ ನೀಡಿರಲಿಲ್ಲ. ಸದ್ದಿಲ್ಲದೆ ಮದ್ಯದ ದರವನ್ನೂ ಏರಿಕೆ ಮಾಡಲಾಗಿದೆ” ಎಂದರು.

“ಆಸ್ತಿ, ವಾಹನ ನೋಂದಣಿ ಶುಲ್ಕ ಹೆಚ್ಚಿಸಲಾಗುತ್ತಿದೆಯಂತೆ. ಒಂದು ಕಡೆ ಕಿತ್ತು, ಮತ್ತೊಂದು ಕಡೆ ಕೊಟ್ಟಂತೆ ಮಾಡಲಾಗುತ್ತಿದೆ. ಜನರಿಗೆ ಎಲ್ಲವೂ ಅರ್ಥವಾಗುತ್ತಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...