ಕೊಪ್ಪಳ | ವಿದ್ಯುತ್ ಕಂಬ ಶಿಥಿಲ : ಆತಂಕದಲ್ಲಿ ಗ್ರಾಮಸ್ಥರು

Date:

ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದ 2ನೇ ವಾರ್ಡ್‌ನ ದುರ್ಗಾ ದೇವಿ ದೇವಸ್ಥಾನ ಹಿಂದುಗಡೆಯ ವಿದ್ಯುತ್ ಕಂಬವೊಂದು ಸಂಪೂರ್ಣ ಶಿಥಲಗೊಂಡಿದ್ದು ಗ್ರಾಮಸ್ಥರು ಆತಂಕದಲ್ಲೇ ಓಡಾಡುವಂತಾಗಿದೆ.

ವಿದ್ಯುತ್ ಕಂಬ ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಕಬ್ಬಿಣದ ಸರಳುಗಳು ಕಾಣುತ್ತಿವೆ. ಕಂಬ ಯಾವಾಗ ಮುರಿದು ಬೀಳುತ್ತೋ ಎಂಬ ಭಯ ಇಲ್ಲಿಯ ನಿವಾಸಿಗಳಿಗೆ ಕಾಡುತ್ತಿದೆ. ಶಿಥಿಲಗೊಂಡ ಕಂಬ ಬದಲಾಯಿಸದ ಜೆಸ್ಕಾಂ ಅಧಿಕಾರಿಗಳು ನಮಗೂ ಅದಕ್ಕೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆʼ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ʼಓಣಿಯಲ್ಲಿ ಮಕ್ಕಳು ಸೇರಿದಂತೆ ಸಾರ್ವಜನಿಕರು ದಿನನಿತ್ಯ‌ ಶಿಥಿಲಗೊಂಡ ವಿದ್ಯುತ್ ಕಂಬದ ಹತ್ತಿರದಿಂದಲೇ ತಿರುಗಾಡುತ್ತಾರೆ. ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆಗಾರರಾಗುತ್ತಾರೆ. ಕೂಡಲೇ ಕಂಬ ತೆರವುಗೊಳಿಸಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 08 27 at 3.09.06 PM
ಸಂಪೂರ್ಣ ಶಿಥಿಲಗೊಂಡ ವಿದ್ಯುತ್‌ ಕಂಬ

ಗ್ರಾಮದ ನಿವಾಸಿ ಯಮನೂರಪ್ಪ ಮಾತನಾಡಿ, ʼವಿದ್ಯುತ್ ಕಂಬದ ಕೆಳಭಾಗದಲ್ಲಿ ಸಿಮೆಂಟ್ ಉದುರಿದ ಪರಿಣಾಮ, ಕಬ್ಬಿಣದ ಸರಳುಗಳು ತೇಲಿ ಸ್ಟ್ರೀಟ್‌ ಲೈಟ್ ಪೋಲ್ ಮುರಿದು ಬೀಳುವ ಹಂತಕ್ಕೆ ತಲುಪಿದೆ. ಈ ಬಗ್ಗೆ ಗ್ರಾಮ ಪಂಚಾಯತಿ ಹಾಗೂ ಜೆಸ್ಕಾಂ ಅಧಿಕಾರಿಗಳಿಗೆ ಹಲವು ಬಾರಿ ಗಮನಕ್ಕೆ ತಂದರೂ ಪ್ರಯೋಜನ ಆಗಲಿಲ್ಲ. ಆಕಸ್ಮಾತ್ ಕಂಬ ಮುರಿದು ಅಪಾಯ ಸಂಭವಿಸಿದರೆ ಅದಕ್ಕೆ ಜೆಸ್ಕಾಂ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆʼ ಎಂದು ಹೇಳಿದರು .

ʼಗ್ರಾಮದ ಇತರೆ ವಾರ್ಡ್‌ಗಳಲ್ಲಿ ಕೆಲ ಕಂಬಗಳು ಶಿಥಿಲಗೊಂಡು ಮುರಿದು ಬೀಳುವ ಹಂತಕ್ಕೆ ತಲುಪಿವೆ. ಯಾವುದೇ ಅಹಿತಕರ ಘಟನೆ ಜರುಗುವ ಮುಂಚೆ ಜೆಸ್ಕಾಂ ಶಾಖಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತುಕೊಂಡು ಸರಿಪಡಿಸಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಒಲವಿನ ಬಾಂಧವ್ಯ ಬೆಸೆದ ʼವನಭೋಜನʼ!

ಜೆಸ್ಕಾಂ ಅಧಿಕಾರಿಗಳು ವಾರ್ಡಿನ ನಿವಾಸಿಗಳ ಜೀವದ ಜೊತೆ ಆಟವಾಡುತ್ತಿರುವುದು ವಿಪರ್ಯಾಸ. ಸಂಬಂಧಪಟ್ಟ ಅಧಿಕಾರಿಗಳು ಈಗಲಾದರೂ ಎಚ್ಚೆತ್ತು ಕ್ರಮ ಕೈಗೊಂಡು ಮುಂದಿನ ಅನಾಹುತಕ್ಕೆ ಕಡಿವಾಣ ಹಾಕುವರೇ ಎಂಬುದನ್ನು ಕಾದು ನೋಡಬೇಕು.

mdrafi
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...