ಬೀದರ್‌ | ಪ್ರವೇಶಾತಿಗೆ ತಾರತಮ್ಯ: ಎಸ್‌ಸಿ,ಎಸ್‌ಟಿ ವಿದ್ಯಾರ್ಥಿ, ಪೋಷಕರಿಂದ ಪ್ರತಿಭಟನೆ

Date:

ಬೀದರ್‌ ಜಿಲ್ಲೆಯ ಪ್ರತಿಷ್ಠಿತ ಖಾಸಗಿ ಶಾಲೆಗೆ ಆಯ್ಕೆಯಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಶೀಘ್ರವೇ  ಆಂಗ್ಲ ಮಾಧ್ಯಮ ಶಾಲೆಗೆ ಪ್ರವೇಶಾತಿ ದೊರಕಿಸಿಕೊಡುವಂತೆ ಆಗ್ರಹಿಸಿ ಪೋಷಕರು ಹಾಗೂ ಅವರ ಮಕ್ಕಳು ಪ್ರತಿಭಟನೆ ನಡೆಸಿದರು.

ಬೀದರ್‌ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಕ್ಕಳೊಂದಿಗೆ ಧರಣಿ ನಡೆಸಿ ಪೋಷಕರು, “ಸರಕಾರದ ನಿಯಮಗಳನ್ನು ಉಲ್ಲಂಘಿಸಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಲು ತಾರತಮ್ಯ ಮಾಡುತ್ತಿರುವ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಮಾನ್ಯತೆ ರದ್ದುಪಡಿಸಬೇಕು. ಶಾಲಾ ಆಡಳಿತ ಮಂಡಳಿ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಸಮಾಜ ಕಲ್ಯಾಣ ಕಲ್ಯಾಣಯಲ್ಲಿ ದಲಿತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಿಕ್ಷಣ ಯೋಜನೆಯಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಯ ಆಡಳಿತ ಮಂಡಳಿ ಪ್ರವೇಶಾತಿ ನಿರಾಕರಿಸಿದೆ. ಪರಿಣಾಮ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕದಲ್ಲಿದ್ದಾರೆ. ಮಕ್ಕಳ ಹಿತದೃಷ್ಟಿಯಿಂದ ಖಾಸಗಿ ಶಾಲೆಯಲ್ಲಿ ಪ್ರವೇಶಾತಿ ದೊರಕಿಸಿಕೊಡಬೇಕೆಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಸಂಜೆ ಭೇಟಿ ನೀಡಿ ಪೋಷಕರಿಂದ ಹಕ್ಕೊತ್ತಾಯ ಪತ್ರ ಸ್ವೀಕರಿಸಿದರು. ಬಳಿಕ ಮಾತನಾಡಿ, ಮಕ್ಕಳ ಪ್ರವೇಶಾತಿ ಪಡೆಯುವಂತೆ ಶಾಲಾ ಆಡಳಿತ ಮಂಡಳಿಗೆ ತಿಳಿಸಿಲಾಗಿದೆ, ಪ್ರತಿಭಟನೆ ಹಿಂಪಡೆಯುವಂತೆ ಪೋಷಕರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಿತ್ತನೆ ಬೀಜ ಖರೀದಿಸಿ ಮನೆಗೆ ತೆರಳುವ ವೇಳೆ ಅಪಘಾತ; ಇಬ್ಬರು ರೈತರು ಸಾವು

ಪ್ರತಿಭಟನೆಯಲ್ಲಿ ಲಕ್ಷ್ಮೀಪುತ್ರ ಮಾಳಗೆ, ಗೌತಮ ಚವ್ಹಾಣ, ಶ್ರೀನಿವಾಸ ಕಟ್ಟಿಮನಿ, ಬಸವರಾಜ ಮೋರೆ, ಸುಧಾಕರ ರಾಜಗೀರಾ, ಬಾಬು ನಾರಾಯಣಪುರ, ಸಚಿನ್‌ ರಾಠೋಡ್‌, ದೇವಿದಾಸ ಚವ್ಹಾಣ, ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...