ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳ ವಿಲೀನ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ: ಸಚಿವ ಮಧು ಬಂಗಾರಪ್ಪ

Date:

  • ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳ ವಿಲೀನಕ್ಕೆ ಶಾಸಕರಿಂದ ಸಲಹೆ
  • ಮಕ್ಕಳಿಗೆ ಯಾವುದೇ ವಿಚಾರ ಹೇರಿಕೆ ಮಾಡುವುದು ಶಿಕ್ಷಣ ಇಲಾಖೆ ಕೆಲಸವಲ್ಲ

ಮಕ್ಕಳ ಸಂಖ್ಯೆ ಕಡಿಮೆ ಇರುವ ಕಡೆ ಶಿಕ್ಷಕರಿಗೆ ಕೆಲಸವೇ ಇಲ್ಲದಂತಾಗಿದೆ. ಮಕ್ಕಳಿಗೂ ಶಾಲಾ ವಾತಾವರಣ ಹಿತಕರವಾಗಿರುವುದಿಲ್ಲ. ಸಾರಿಗೆ ವ್ಯವಸ್ಥೆ ಅನುಕೂಲ ಇರುವ ಕಡೆ ಮಕ್ಕಳ ಸಂಖ್ಯೆ ಇರುವ ಶಾಲೆಗಳನ್ನು ವಿಲೀನ ಮಾಡಿದರೆ ಅನುಕೂಲ ಎಂದು ಶಾಸಕರಿಂದ ಸಲಹೆ ಬಂದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಸರ್ಕಾರಿ ಶಾಲೆಗಳ ಬಲವರ್ಧನೆಗೆ ಆದ್ಯತೆ ನೀಡಲಾಗುವುದು. ಮಕ್ಕಳ ಭವಿಷ್ಯ ರೂಪಿಸಿಕೊಳ್ಳಲು ಯಾವ ರೀತಿಯ ಶಿಕ್ಷಣ ಬೇಕು. ಅದನ್ನು ಕೊಡುವುದು ನಮ್ಮ ಕೆಲಸ. ವಿಲೀನ ಪ್ರಕ್ರಿಯೆ ಬಗ್ಗೆ ಅಧಿಕಾರಿಗಳೊಂದಿಗೂ ಚರ್ಚೆ ಮಾಡುವೆ” ಎಂದರು.

“ಮಕ್ಕಳಿಗೆ ಯಾವುದೇ ವಿಚಾರಗಳನ್ನು ಹೇರಿಕೆ ಮಾಡುವುದು ಶಿಕ್ಷಣ ಇಲಾಖೆ ಕೆಲಸವಲ್ಲ. ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಇಂಗ್ಲಿಷ್ ಕಲಿಕೆಗೆ ಈಗಾಗಲೇ ಆದ್ಯತೆ ನೀಡಲಾಗಿದೆ. ಪಬ್ಲಿಕ್ ಶಾಲೆಗಳನ್ನು ಹೆಚ್ಚಾಗಿ ಆರಂಭಿಸುವ ದಿಸೆಯಲ್ಲಿ ಸರ್ಕಾರ ಹೆಜ್ಜೆ ಇಟ್ಟಿದೆ. ಪ್ರತಿ ಜಿಲ್ಲೆಯ ಪ್ರವಾಸ ಮಾಡುತಿದ್ದು, ಸರ್ಕಾರಿ ಶಾಲೆಗಳ ಮೂಲಸೌಕರ್ಯದ ಬಗ್ಗೆ ವರದಿ ತರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸುವೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಸ್ಥಳಾಂತರ ಬೇಡ: ಎಚ್‌ ಡಿ ಕುಮಾರಸ್ವಾಮಿ

ರಾಜ್ಯ ಶಿಕ್ಷಣ ನೀತಿ ಜಾರಿ ವಿಚಾರವಾಗಿ ಮಾತನಾಡಿ, “ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಪ್ರತ್ಯೇಕ ಶಿಕ್ಷಣ ನೀತಿ ಕೆಲಸ ನಡೆಯುತ್ತಿವೆ. ಎನ್.ಇ.ಪಿ ರದ್ದು ಮಾಡುವುದರಿಂದ ಇಲಾಖೆಗೆ ಕೇಂದ್ರದ ಅನುದಾನ ಕೊರತೆ ಆಗಲಿದೆ. ಈ ಬಗ್ಗೆ ಕೇಂದ್ರದ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಲಾಗುವುದು” ಎಂದರು.

“ಡಯೆಟ್‌ನಲ್ಲಿ ಸಂಪನ್ಮೂಲ ವ್ಯಕ್ತಿಗಳ ಸಮರ್ಪಕ ಬಳಕೆ ಮಾಡಿಕೊಳ್ಳಲು ಯೋಜನೆ ರೂಪಿಸಲಾಗುವುದು. ಶಿಕ್ಷಕರ ಕೊರತೆ ಇರುವ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತಿದೆ”ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...