ಬೀದರ್ | ಯತ್ನಾಳರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ : ಚನ್ನಬಸವಾನಂದ ಸ್ವಾಮೀಜಿ

Date:

ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರಿಗೆ ಅಧಿಕಾರ ಮದ ಮತ್ತು ಧನ ಮದದಿಂದ ಪಿತ್ತ ನೆತ್ತಿಗೇರಿದೆ ಎಂದು ಬೆಂಗಳೂರು ಬಸವ ಗಂಗೋತ್ರಿಯ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಡಾ. ಚನ್ನಬಸವಾನಂದ ಸ್ವಾಮೀಜಿ ಕಿಡಿಕಾರಿದರು.

ಬೀದರ್‌ನಲ್ಲಿ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಶಾಸಕ ಯತ್ನಾಳ್ ಅವರು ‘ಬಸವಣ್ಣ ಹೊಳ್ಯಾಗ್ ಹಾರಿದ್ರು’ ಎಂದು ಹೇಳಿಕೆ ನೀಡಿ ಬಸವ ಭಕ್ತರಿಗೆ ಅವಮಾನಿಸಿದ್ದಾರೆ. ಕೂಡಲೇ ಯತ್ನಾಳ್ ಬಸವ ಭಕ್ತರಲ್ಲಿ ಕ್ಷಮೆ ಯಾಚಿಸಬೇಕು’ ಎಂದು ಆಗ್ರಹಿಸಿದರು.

ಯತ್ನಾಳ್ ಮತಿಭ್ರಮಣೆ ರೀತಿಯ ಅವಹೇಳನಕಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಹೇಳಿಕೆ ನೀಡಿದ್ದೂ ಅಲ್ಲದೇ ‘ನಾನೇ ಬಸವಣ್ಣ, ನಾನೇಕೆ ಕ್ಷಮೆ ಕೇಳಬೇಕು’ ಎಂಬ ಅಹಂಕಾರದ ಮಾತುಗಳು ಆಡುತ್ತಿರುವುದು ಎಲ್ಲ ಭಕ್ತರಿಗೆ ನೋವಾಗಿದೆ. ಹೀಗಾಗಿ ಡಿ.3ರಂದು ನಗರದಲ್ಲಿ ಯತ್ನಾಳ್ ಅವರಿಗೆ ಶಾಸಕ ಸ್ಥಾನದಿಂದ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ವಿಧಾನಸಭಾ ಅಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವ ಮಂಟಪದ ಮಾತೆ ಸತ್ಯದೇವಿ, ಲಿಂಗಾಯತ ಧರ್ಮ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ ಪಾಟೀಲ ಅತಿವಾಳ ಹಾಗೂ ಪ್ರಮುಖರಾದ ಶಿವಶರಣಪ್ಪ ಪಾಟೀಲ, ಕಾಶಪ್ಪ ಸೀತಾ, ಬಸವಂತರಾವ ಬಿರಾದಾರ, ಶಾಂತಪ್ಪ ಮುಗಳಿ, ನಿರ್ಮಲಾ ನಿಲಂಗೆ, ಮಲ್ಲಿಕಾರ್ಜುನ ಶಾಪುರ, ಸಿದ್ಧವೀರ ಸಂಗಮದ, ಸತೀಶ ಪಾಟೀಲ, ಬಸಮ್ಮ ಬಿರಾದಾರ, ಈರಮ್ಮ ಕೋರೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...