ಆದೇಶ ಪಾಲಿಸದ ಕಲ್ಯಾಣ ಮಂಡಳಿ; ಹೈಕೋರ್ಟ್‌ ಅಸಮಾಧಾನ

Date:

ಬಡ ಕಟ್ಟಡ ಕಾರ್ಮಿಕ‌ರ ಮಕ್ಕಳಿಗೆ‌ ಧನಸಹಾಯ ನೀಡಲು ಹೈಕೋರ್ಟ್ ನೀಡಿದ್ದ ‌ಮಧ್ಯಂತರ ಆದೇಶ ಜಾರಿ ಮಾಡಲು ವಿಫಲವಾದ‌ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ವಿರುದ್ದ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯು ಶೈಕ್ಷಣಿಕ ಧನಸಹಾಯ‌ ಕಡಿತ ಮಾಡಿರುವುದರಿಂದ ನಮ್ಮ ವಿದ್ಯಾಭ್ಯಾಸ ಮುಂದುವರೆಸಲು ಕಷ್ಟವಾಗಿದೆ ಎಂದು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಇಬ್ಬರು ಕಟ್ಟಡ ಕಾರ್ಮಿಕರ‌ ಮಕ್ಕಳು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಮೂಲಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

ಕಳೆದ‌ ಏಪ್ರಿಲ್ 23 ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ನಾಲ್ಕು ವಾರದೊಳಗೆ ಎಲ್‌ಎಲ್‌ಬಿ ಹಾಗೂ ಎಂಬಿಎ ವಿದ್ಯಾಭ್ಯಾಸ ಮಾಡುವ ಇಬ್ಬರು ವಿದ್ಯಾರ್ಥಿನಿಯರಿಗೆ ದಂಡಸಹಿತ ಶೈಕ್ಷಣಿಕ ಧನಸಹಾಯ ಪಾವತಿಸಲು ಆದೇಶಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಆದೇಶ ನೀಡಿ ನಾಲ್ಕುವಾರವಾದರೂ ಮಧ್ಯಂತರ ಆದೇಶವನ್ನು ಮಂಡಳಿ ಪಾಲಿಸಿಲ್ಲವೆಂದು ಅರ್ಜಿದಾರರ ಪರ ವಕೀಲ ಆದಿತ್ಯ ಚಟರ್ಜಿ ಮಂಗಳವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಮಂಡಳಿ ಪರವಾಗಿ ಹಾಜರಿದ್ದ ವಕೀಲರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ನಾಗಪ್ರಸನ್ನ, “ಕಾರ್ಮಿಕರ‌ ಮಕ್ಕಳ ವಿದ್ಯಾಭ್ಯಾಸಕ್ಕೆ ಆದೇಶ‌ ನೀಡಿದ 30 ಸಾವಿರ ರೂ.ಗಳನ್ನು ನೀಡದ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

“ಬಿಸಿಲು ಮಳೆಯಲ್ಲಿ ಶ್ರಮಪಡುವ ಕಟ್ಟಡ ಕಾರ್ಮಿಕರ ದುಡಿಮೆಯಿಂದಾಗಿ ಸಾವಿರಾರು ಕೋಟಿ ಸೆಸ್ ಸಂಗ್ರಹವಾಗುತ್ತಿದೆ ಅದನ್ನು ಅವರ‌ ಮಕ್ಕಳ ವಿದ್ಯಾಬ್ಯಾಸಕ್ಕೆ ಖರ್ಚು‌ಮಾಡಬೇಕೆ ಹೊರತು ಅಧಿಕಾರಿಗಳ ಓಡಾಟ‌ ಮತ್ತು ಐಶಾರಾಮಿ ಜೀವನಕ್ಕಲ್ಲ” ಎಂದು ಹೇಳಿದರು.

“ಮಂಡಳಿಯಲ್ಲಿ ಸಂಗ್ರಹವಾಗಿರುವ 6,700 ಕೋಟಿ ರೂ. ಸೆಸ್ ಹಣವನ್ನು ಹೊಂದಿರುವ‌ ಬ್ಯಾಂಕ್ ಖಾತೆಯ ವಿವರಗಳು ಹಾಗೂ ಯಾವ ಸೌಲಭ್ಯಗಳಿಗೆ ಎಷ್ಟು ಖರ್ಚು ಮಾಡಲಾಗುತ್ತಿದೆ ಎನ್ನುವ ವಿವರಗಳನ್ನು ಒಳಗೊಂಡ ಅಫಿಡವಿಟ್ ಅನ್ನು ಮುಂದಿನ ವಿಚಾರಣೆಯ ವೇಳೆ ಪೀಠದ ಮುಂದೆ ಸಲ್ಲಿಸಬೇಕು” ಎಂದು ಮಂಡಳಿಗೆ ತಾಕೀತು ಮಾಡಿದ್ದಾರೆ. ವಿಚಾರಣೆಯನ್ನು ಜೂನ್ 14ಕ್ಕೆ ಮುಂದೂಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...