ಬೀದರ್‌ | ಕಾಂಗ್ರೆಸ್‌ನಿಂದ ಮಾದಿಗ ಸಮುದಾಯದ ಕಡೆಗಣನೆ: ಫರ್ನಾಂಡಿಸ್‌ ಹಿಪ್ಪಳಗಾಂವ್

Date:

2‌023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಮಾದಿಗ ಸಮುದಾಯದ ಒಬ್ಬರಿಗೂ ಕಾಂಗ್ರೆಸ್‌ ಟಿಕೆಟ್‌ ನೀಡಿಲ್ಲ. ಇದೀಗ, ನಿಗಮ/ಮಂಡಳಿಯಲ್ಲೂ ಸ್ಥಾನ ನೀಡದೇ ಸಮುದಾಯವನ್ನು ಕಡೆಗಣಿಸಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ಫರ್ನಾಂಡಿಸ್‌ ಹಿಪ್ಪಳಗಾಂವ ಆರೋಪಿಸಿದ್ದಾರೆ.

ಬೀದರ್‌ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮಾದಿಗ ಸಮುದಾಯ ಮೊದಲಿನಿಂದಲೂ ಕಣ್ಮುಚ್ಚಿ ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕಿ ಬೆಂಬಲಿಸುತ್ತ ಬಂದಿದ್ದಾರೆ. ಆದರೆ, ಪಕ್ಷ ಎಲ್ಲದರಲ್ಲೂ ಮಾದಿಗ ಸಮುದಾಯಕ್ಕೆ ಅನ್ಯಾಯ ಮಾಡುತ್ತಲಿದೆ” ಎಂದು ದೂರಿದರು.

“ನಿಗಮ, ಮಂಡಳಿಗಳ ನೇಮಕಾತಿಯಲ್ಲಿ ಎಲ್ಲಾ ಸಮುದಾಯಗಳಿಗೆ ಪ್ರಾತಿನಿಧ್ಯ ಕೊಟ್ಟಿದೆ. ಆದರೆ, ಮಾದಿಗರನ್ನು ಕಡೆಗಣಿಸಿದೆ. ವಿಧಾನ ಪರಿಷತ್‌ ನಲ್ಲೂ ಅವಕಾಶ ಕಲ್ಪಿಸಲಿಲ್ಲ.ಕಾಂಗ್ರೇಸ್‌ಗೆ ಮಾದಿಗ ಸಮುದಾಯದ ಮತಗಳು ಬೇಕು. ಆದರೆ, ಪ್ರಾತಿನಿಧ್ಯ ನೀಡುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾದಿಗ ಸಮುದಾಯದಿಂದ ಈ ಹಿಂದೆ ಕಾಂಗ್ರೇಸ್ ಎಲ್‌.ಹನುಮಂತಯ್ಯ ಅವರಿಗೆ ರಾಜ್ಯಸಭೆಯಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಆದರೆ ಈ ಬಾರಿ ಅವರಿಗೆ ಉದ್ದೇಶಪೂರ್ವಕವಾಗಿಯೇ ಟಿಕೆಟ್‌ ತಪ್ಪಿಸಲಾಗಿದೆ. ಈ ರೀತಿ ಮಾದಿಗರನ್ನು ತುಳಿಯುವ ಕೆಲಸ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ʼಹಸಿವು ಮುಕ್ತ ಕರ್ನಾಟಕʼಕ್ಕೆ ಬೇಕಿದೆ ಅಧಿಕಾರಿಗಳ ಬದ್ಧತೆ

ಪತ್ರಿಕಾಗೋಷ್ಠಿಯಲ್ಲಿ ಮಾದಿಗ ದಂಡೋರ ಸಮಿತಿ ಜಿಲ್ಲಾಧ್ಯಕ್ಷ ವಿಜಯಕುಮಾರ ಹಿಪ್ಪಳಗಾಂವ, ಉಪಾಧ್ಯಕ್ಷ ಕಮಲಾಕರ ಹೆಗಡೆ, ಕಾರ್ಯಾಧ್ಯಕ್ಷ ದತ್ತಾತ್ರಿ ಜ್ಯೋತಿ, ಪೀಟರ್‌ ಚಿಟಗುಪ್ಪ, ಸಂಘಟನಾ ಕಾರ್ಯದರ್ಶಿ ಜೈಶೀಲ್‌ ಕಲವಾಡೆ ಸೇರಿದಂತೆ ಪ್ರಮುಖರಾದ ವೀರಾಶೆಟ್ಟಿ, ರವಿ ಸೂರ್ಯವಂಶಿ, ಓಂಕಾರ ನೂರೆ, ದೀಪಕ್‌, ಲಾಲಪ್ಪ ನಿರ್ಣಾ, ದಯಾನಂದ ರೇಕುಳಗಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...