ಚಾಮರಾಜನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಹಾಗೂ ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಂಮ್ಕೋ) ಸಂಸ್ಥೆಗಳ ಸಿ.ಎಸ್.ಆರ್ ನಿಧಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಶಿಬಿರದಲ್ಲಿ ಜಿಲ್ಲೆಯ 235 ವಿಶೇಷಚೇತನ ಫಲಾನುಭವಿಗಳಿಗೆ 420 ವಿವಿಧ ಬಗೆಯ ಸಾಧನ-ಸಲಕರಣೆಗಳನ್ನು ಜಿಲ್ಲಾಧಿಕಾರಿಯವರು ವಿತರಣೆ ಮಾಡಿದರು.
ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, “ವಿಶೇಷಚೇತನರಿಗೆ ಅಗತ್ಯವಾಗಿರುವ ಸಾಧನ-ಸಲಕರಣೆಗಳನ್ನು ವಿತರಿಸುವುದು ಮಾನವೀಯ ಮೌಲ್ಯವುಳ್ಳ ಕೆಲಸವಾಗಿದೆ. ಜಿಲ್ಲೆಯಲ್ಲಿ ವಿಶೇಷಚೇತನರಿಗೆ ಸಾಕಷ್ಟು ಸಮಸ್ಯೆಗಳಿರುವುದು ಕಂಡುಬಂದಿದೆ. ಅವಶ್ಯ ಸೌಲಭ್ಯಗಳನ್ನು ತಲುಪಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ವಿಶೇಷಚೇತನರು ಸಾಧನ ಸಲಕರಣೆಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸಲು ಮುಂದಾಗಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ನಗರಸಭೆ ಬಜೆಟ್ ಮಂಡನೆ: ₹1.87 ಕೋಟಿ ಉಳಿತಾಯ

ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‍ನ ರಾಜ್ಯ ಕಚೇರಿಯ ಪ್ರಧಾನ ವ್ಯವಸ್ಥಾಪಕರಾದ ಅನೂಪ್,
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಂಮ್ಕೋ) ಸಂಸ್ಥೆಯ ಶಿವಕುಮಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಡಾ. ಮಂಜುನಾಥ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ ಸೇರಿದಂತೆ ಇನ್ನಿತರರು ಇದ್ದರು.





