ಯಾವ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು: ಸರ್ಕಾರಕ್ಕೆ ಕುಮಾರಸ್ವಾಮಿ ಎಚ್ಚರಿಕೆ

Date:

  • ‘ವಾಸ್ತವ ಸ್ಥಿತಿಯ ಬಗ್ಗೆ ದಾಖಲೆಗಳನ್ನು ಒದಗಿಸುವಲ್ಲಿ ಸರ್ಕಾರ ವಿಫಲ’
  • ‘ಸಮಿತಿ – ಪ್ರಾಧಿಕಾರದ ಸಭೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ’

ತಮಿಳುನಾಡಿಗೆ ನಿತ್ಯವೂ 5,000 ಕ್ಯೂಸೆಕ್‌ ಕಾವೇರಿ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕೊಟ್ಟಿರುವ ನಿರ್ದೇಶನ ಆಘಾತಕಾರಿ. ಯಾವ ಕಾರಣಕ್ಕೂ ರಾಜ್ಯ ಸರ್ಕಾರ ನೀರು ಹರಿಸಬಾರದು ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಬುಧವಾರ ಸರಣಿ ಟ್ವೀಟ್‌ ಮಾಡಿರುವ ಅವರು, “ಸರ್ಕಾರ ಹೆಜ್ಜೆಹೆಜ್ಜೆಗೂ ಎಡವಿದೆ. ತಮಿಳುನಾಡು ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿದಾಕ್ಷಣ ರಾಜ್ಯ ಸರ್ಕಾರ ತಕ್ಷಣವೇ ಆಕ್ಷೇಪ ಸಲ್ಲಿಸಬೇಕಿತ್ತು. ವಾಸ್ತವ ಸ್ಥಿತಿಯ ಬಗ್ಗೆ ದಾಖಲೆಗಳನ್ನು ಒದಗಿಸಿ, ಸಮರ್ಥವಾಗಿ ಎದುರಿಸಬೇಕಿತ್ತು. ಕಾಲಹರಣ ಮಾಡಿದ್ದಲ್ಲದೆ, ಈಗ ಕಾವೇರಿ ಬಗ್ಗೆ ಮೊಸಳೆ ಕಣ್ಣೀರು ಹಾಕಿದರೆ ಕನ್ನಡಿಗರು ನಂಬಬೇಕಾ?” ಎಂದು ಟೀಕಿಸಿದ್ದಾರೆ.

“ಸಂಕಷ್ಟಸೂತ್ರವೇ ಇಲ್ಲ, ಕರ್ನಾಟಕಕ್ಕಷ್ಟೇ ಸಂಕಷ್ಟವೇ? ತಮಿಳುನಾಡಿಗೆ ಯಾವ ಸಂಕಷ್ಟವೂ ಇಲ್ಲ. ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು! ಹೀಗಿದೆ ನಮ್ಮ ಸ್ಥಿತಿ. ಆ ರಾಜ್ಯವು ಎಷ್ಟು ವಿಸ್ತೀರ್ಣದಲ್ಲಿ ಬೆಳೆ ಬೆಳೆಯುತ್ತಿದೆ ಎಂಬ ಅಂಕಿ-ಅಂಶದ ಬಗ್ಗೆ ಸಮಿತಿಯಲ್ಲಿ ಚರ್ಚಿಸಿಲ್ಲ ಎನ್ನುವುದಕ್ಕೆ ಆ ಸಮಿತಿಯ ಆದೇಶವೇ ಸಾಕ್ಷಿ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯೋಧ ರಾಯಭಾರಿ; ಹಲವು ಕೋನಗಳಿಂದ ಅಪಾಯಕಾರಿ ಈ ಹುಲಿಸವಾರಿ

ಸರ್ಕಾರಕ್ಕೆ ಬದ್ಧತೆ ಇಲ್ಲ

“ಸಮಿತಿ – ಪ್ರಾಧಿಕಾರದ ಸಭೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಆ ಸಭೆಗಳಿಗೆ ಅಧಿಕಾರಿಗಳು ಆನ್‌ಲೈನ್‌ನಲ್ಲಿ ಹಾಜರಾದರೆ, ನೆರೆರಾಜ್ಯದವರು ಖುದ್ದು ಹಾಜರಿದ್ದು ಅಂಕಿ-ಅಂಶ ಸಮೇತ ವಾದ ಮಂಡಿಸುತ್ತಾರೆ. ಹೀಗಾದರೆ, ರಾಜ್ಯದ ಹಿತರಕ್ಷಣೆ ಹೇಗೆ ಸಾಧ್ಯ? ನೆಲ, ಜಲ, ಭಾಷೆ ಬಗ್ಗೆ ತಮಿಳುನಾಡಿನವರಿಗೆ ಇರುವ ಬದ್ಧತೆ ನಮ್ಮವರಿಗಿಲ್ಲ. ಇದು ದುರಂತ” ಎಂದು ಕಿಡಿಕಾರಿದ್ದಾರೆ.

“ನಮ್ಮವರಲ್ಲಿ ಉಪೇಕ್ಷೆ, ಉಡಾಫೆ ಹೆಚ್ಚು. ಟ್ರಿಬ್ಯುನಲ್‌ ಆದೇಶ ಉಲ್ಲಂಘಿಸಿರುವ ತಮಿಳುನಾಡು ವಿರುದ್ಧ ಸಮರ್ಥ ವಾದ ಮಂಡಿಸಲು ಏಕೆ ಸಾಧ್ಯವಾಗಿಲ್ಲ? ನೀರಾವರಿ ಪ್ರದೇಶವನ್ನು ನೆರೆರಾಜ್ಯ ಅಕ್ರಮವಾಗಿ ವಿಸ್ತರಣೆ ಮಾಡಿಕೊಂಡಿರುವುದನ್ನು ಹೇಳಲೇಬೇಕಿತ್ತು. ಮೊದಲು ಸಂಕಷ್ಟಸೂತ್ರ ರೂಪಿಸಿ ಎಂದು ಪಟ್ಟು ಹಿಡಿಯಬೇಕಿತ್ತು” ಎಂದು ತಿಳಿಸಿದ್ದಾರೆ.

“ಜಲ ನಿರ್ವಹಣೆ ಪ್ರಾಧಿಕಾರ, ಜಲ ನಿಯಂತ್ರಣ ಸಮಿತಿ ಏನು ಮಾಡುತ್ತಿವೆ? ಟ್ರಿಬ್ಯುನಲ್ ಆದೇಶ ಉಲ್ಲಂಘಿಸಿ, ನೀರಾವರಿ ಪ್ರದೇಶ ಹೆಚ್ಚಿಸಿಕೊಂಡಿರುವ ತಮಿಳುನಾಡು ಬಗ್ಗೆ ಇವುಗಳಿಗೆ ಮಾಹಿತಿ ಇಲ್ಲವೇ? ರಾಜ್ಯಗಳ ನೈಜಸ್ಥಿತಿ ಅರಿಯುವ ಕರ್ತವ್ಯ ಅವುಗಳಿಗೆ ಇಲ್ಲವೇ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವ ನೀತಿ ಯಾಕೆ” ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ನಮ್ಮ ರೈತರಿಗೆ ನೀರಿಲ್ಲ

“ನಮ್ಮ ರೈತರಿಗೆ ನೀರಿಲ್ಲದಿದ್ದರೂ, ಅವರು ಬೆಳೆಯನ್ನೇ ಬೆಳೆಯದಿದ್ದರೂ ನೀರು ಬಿಡಲು ಸರ್ಕಾರ ಒಪ್ಪಿದೆ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಪೂರ್ಣ ವಿಫಲವಾಗಿದೆ. ರೈತರ ತಾಳ್ಮೆಯನ್ನೂ ದುರುಪಯೋಗ ಮಾಡಿಕೊಂಡಿದೆ. ಸುಪ್ರೀಂ ಕೋರ್ಟ್ ಏನು ಹೇಳುತ್ತದೋ ಅಲ್ಲಿಯವರೆಗೆ ಕಾಯಬೇಕಿತ್ತು. ಪ್ರಾಧಿಕಾರ, ಸಮಿತಿ ಹೇಳಿದವೆಂದು ನೀರು ಬಿಟ್ಟಿದ್ದು ತಪ್ಪು” ಎಂದು ಹರಿಹಾಯ್ದಿದ್ದಾರೆ.

“ರೈತರ ಬಗ್ಗೆ ಕಾಳಜಿ, ಬೆಂಗಳೂರಿನ ಜನರ ಕುಡಿಯುವ ನೀರಿನ ಬಗ್ಗೆ ಆತಂಕ ಇದ್ದಿದ್ದರೆ ಸರಕಾರ ನೀರು ಹರಿಸುತ್ತಿರಲಿಲ್ಲ. ಬೆಂಗಳೂರಿಗರ ಮೌನ ನನಗೆ ಅಚ್ಚರಿ ತಂದಿದೆ. ನೆರೆ ರಾಜ್ಯಗಳಿಂದ ವಲಸೆ ಬಂದು ನಮ್ಮ ನೆಲ, ಜಲ, ಆರ್ಥಿಕತೆಯ ಆಸರೆಯಲ್ಲಿ ನೆಮ್ಮದಿಯಾಗಿರುವವರು ಕೂಡ ಕಾವೇರಿ ಬಗ್ಗೆ ದನಿ ಎತ್ತಬೇಕು. ಇವರಾರಿಗೂ ಕಾವೇರಿ ನೀರಿನ ಚಿಂತೆಯೇ ಇಲ್ಲ” ವಾಗ್ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...