ಕೊಡಗು | ‘ದಿ. ಬಿ ಎಸ್ ಗೋಪಾಲಕೃಷ್ಣ ದತ್ತಿ’ ಪ್ರಶಸ್ತಿಗೆ ಭಾಜನರಾದ ವೈದ್ಯ ಡಾ. ಕೆ ಬಿ ಸೂರ್ಯಕುಮಾರ್

Date:

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುರುಷ ಸಾಹಿತಿಗಳಿಗೆ ಮೀಸಲಾಗಿರುವ ಪ್ರತಿಷ್ಠಿತ ದತ್ತಿ ‘ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ಗೆ ಜಿಲ್ಲೆಯ ಹಿರಿಯ ಸಾಹಿತಿ ಹಾಗು ವೈದ್ಯರಾದ ಡಾ. ಕೆ.ಬಿ. ಸೂರ್ಯಕುಮಾರ್ ಭಾಜನರಾಗಿದ್ದಾರೆ.

ಡಾ. ಕೆ.ಬಿ. ಸೂರ್ಯಕುಮಾರ್ ರಚಿಸಿರುವ ‘ವೈದ್ಯ ಕಂಡ ವಿಸ್ಮಯ’ ವಿಭಿನ್ನ ವಿಶ್ವದ ಇಣುಕು ನೋಟ ಕೃತಿಗೆ ಪ್ರಶಸ್ತಿ ಕೊಡಮಾಡಲಾಗುತ್ತಿದೆ. ಜಿಲ್ಲೆಯ ದೈನಿಕ ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾದ ಬಿ.ಎಸ್. ಗೋಪಾಲಕೃಷ್ಣ ರವರ ಹೆಸರಿನಲ್ಲಿ, ಅವರ ಪುತ್ರರು ಸ್ಥಾಪಿಸಿರುವ ಈ ದತ್ತಿ ಪ್ರಶಸ್ತಿ ಇದಾಗಿದ್ದು, ದತ್ತಿ ಪ್ರಶಸ್ತಿಯ ಆಯ್ಕೆಗಾಗಿ ಜಿಲ್ಲೆಯ ಪುರುಷ ಬರಹಗಾರರು ಸಲ್ಲಿಸಿದ್ದ ಕೃತಿಗಳನ್ನು ಜಿಲ್ಲೆಯ ಹಿರಿಯ ಮೂರು ಸಾಹಿತಿಗಳು ಪ್ರತ್ಯೇಕವಾಗಿ ಈ ಪುಸ್ತಕಗಳನ್ನು ಪರಿಶೀಲಿಸಿ ನೀಡಿದ ಅಂಕಗಳನ್ನು ಜಿಲ್ಲಾ ಸಮಿತಿ ಒಟ್ಟುಗೂಡಿಸಿ ಪ್ರಶಸ್ತಿ ಘೋಷಿಸಲಾಗಿದೆ.

ಡಾ. ಕೆ.ಬಿ. ಸೂರ್ಯಕುಮಾರ್ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ 18 ವರ್ಷಗಳ ಕಾಲ ವೈದ್ಯಕೀಯ ವಿಭಾಗ ಮತ್ತು ವಿಧಿ ವಿಜ್ಞಾನ ವೈದ್ಯರಾಗಿ ಸೇವೆ ಸಲ್ಲಿಸಿರುತ್ತಾರೆ. 90ರ ದಶಕದಲ್ಲಿ ಕರ್ನಾಟಕದ ಆರೋಗ್ಯ ಇಲಾಖೆಯಲ್ಲಿದ್ದ ಏಕೈಕ ವಿಧಿ ವಿಜ್ಞಾನ ಪರಿಣಿತರು ಎಂಬ ಹೆಗ್ಗಳಿಕೆ ಇವರದ್ದಾಗಿದೆ. ಕೊಡಗು, ಹಾಸನ, ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಡೆದ ಅಸ್ವಾಭಾವಿಕ ಮರಣಗಳಲ್ಲಿ ಸ್ಥಳ ಪರೀಕ್ಷೆ ನಡೆಸಿ ಪೊಲೀಸರಿಗೆ ಅನೇಕ ಕೊಲೆಗಳನ್ನು ಭೇದಿಸಲು ಸಹಾಯ ಮಾಡಿದ್ದಾರೆ. ಕೊಡಗು ಸರ್ಕಾರಿ ವೈದ್ಯರ ಸಂಘ ಮತ್ತು ಕೊಡಗು ಲೇಖಕ ಹಾಗು ಕಲಾವಿದರ ಬಳಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಮಡಿಕೇರಿಯಲ್ಲಿ ವಾಸವಿರುವ ಇವರು, ಪ್ರಸ್ತುತ ಸುಳ್ಯ ಕೆ.ವಿ.ಜಿ ಮೆಡಿಕಲ್ ಕಾಲೇಜಿನ ವಿಧಿ ವಿಜ್ಞಾನ ವಿಭಾಗದಲ್ಲಿ ಪ್ರೊಫೆಸರ್ ಮತ್ತು ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಮನಗರ | ಫೆ.4ರಂದು ‘ಜಿಲ್ಲಾಧಿಕಾರಿ ಹಠಾವೋ, ರೈತ ಬಚಾವೋ’ ಆಂದೋಲನ

ಮುಂದೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗುವುದು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ಮಾಹಿತಿ ನೀಡಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...