ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಣೆ; ಮರಣೋತ್ತರ ಪರೀಕ್ಷೆಗೆ ಹೊತ್ತೊಯ್ಯುವಾಗ ಕೈ ಕಾಲು ಆಡಿಸಿದ ವ್ಯಕ್ತಿ

Date:

ಎದೆನೋವಿನಿಂದ ಕುಸಿದು ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಕೊಂಡೊಯ್ದರೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದರು. ಆದರೆ, ಮರಣೋತ್ತರ ಪರೀಕ್ಷೆಗೆ ಹೊತ್ತೊಯ್ಯುವಾಗ ಆ ವ್ಯಕ್ತಿ ಕೈ ಕಾಲು ಆಡಿಸಿದ್ದು, ಪರೀಕ್ಷಿಸಿದ ಬಳಿಕ ಆತ ಜೀವಂತವಾಗಿರುವುದು ಗೊತ್ತಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹನೂರಿನ ವಿವೇಕಾನಂದ ಶಾಲೆಯಲ್ಲಿ ಚುನಾವಣೆ ತರಬೇತಿಯಲ್ಲಿದ್ದ ನೌಕರ ಜಗದೀಶ್‌ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದರು. ವಿಷಯ ತಿಳಿದು ಮೃತನ ಕುಟುಂಬಸ್ಥರ ಆಕ್ರಂದನವೂ ಮುಗಿಲು ಮುಟ್ಟಿತ್ತು. ಆದರೆ, ಹೃದಯ ಬಡಿತವೇ ನಿಂತು ಜೀವವೇ ಹೋಗಿದೆ ಎಂದು ಅಂದುಕೊಂಡಿದ್ದ ವ್ಯಕ್ತಿಗೆ ಜೀವ ಇರುವುದಾಗಿ ಕಂಡುಬಂದಿದೆ.

ಹನೂರಿನ ಖಜಾನೆ ಇಲಾಖೆಯಲ್ಲಿ ಜಗದೀಶ್ ಎಂಬುವವರು ಕೆಲಸ ನಿರ್ವಹಿಸುತ್ತಿದ್ದರು. ವಿಧಾನಸಭೆ ಚುನಾವಣೆ ನಿಮಿತ್ತ ಅವರನ್ನು ಚುನಾವಣಾ ಕರ್ತವ್ಯಕ್ಕೆ ತೊಡಗಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿವೇಕಾನಂದ ಶಾಲೆಯಲ್ಲಿ ಚುನಾವಣಾ ತರಬೇತಿ ನಡೆಯುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ (ಏ.18) ಬೆಳಗ್ಗೆ ತರಬೇತಿಗಾಗಿ ಬಂದಿದ್ದ ಜಗದೀಶ್‌ ಎದೆನೋವಿನಿಂದ ಕುಸಿದು ಬಿದ್ದಿದ್ದರು. ಕೂಡಲೇ ಅಲ್ಲಿದ್ದವರು ಅವರನ್ನು ಕಾಮಗೆರೆ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಜಗದೀಶ್‌ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಗಿ ಪರೀಕ್ಷಿಸಿದ ವೈದ್ಯರು ಘೋಷಿಸಿದ್ದರು.

ಜಗದೀಶ್ ಮೃತಪಟ್ಟಿದ್ದಾರೆಂದು ತಿಳಿದು ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಲಾಗಿತ್ತು. ಇನ್ನೇನು ಮರಣೋತ್ತರ ಪರೀಕ್ಷೆಗಾಗಿ ಕೊಠಡಿಗೆ ತೆಗೆದುಕೊಂಡು ಹೋಗಬೇಕಿತ್ತು. ಆಗಲೇ ಜಗದೀಶ್ ಕೈ-ಕಾಲು ಆಡಿಸಿದ್ದಾರೆ. ಇದನ್ನೂ ಸಾರ್ವಜನಿಕರು ಗಮನಿಸಿದ್ದು, ಕೂಡಲೇ ವೈದ್ಯರಿಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಚುನಾವಣಾ ತರಬೇತಿ ವೇಳೆ ಹೃದಯಾಘಾತದಿಂದ ಸಿಬ್ಬಂದಿಯೋರ್ವ ಸಾವು

ವೈದ್ಯರು ಪರೀಕ್ಷೆ ನಡೆಸಿದಾಗ ಜಗದೀಶ್‌ ಉಸಿರಾಡುತ್ತಿರುವುದನ್ನೂ ಗಮನಿಸಿದ್ದಾರೆ. ಹೃದಯದ ಬಡಿತ ನಿಂತೇ ಹೋಯಿತು ಎಂದುಕೊಂಡವರಿಗೆ ಅಚ್ಚರಿಯಾಗಿ ತಕ್ಷಣಕ್ಕೆ ಪ್ರಾಥಮಿಕ ಚಿಕಿತ್ಸೆ ನೀಡಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಜಗದೀಶ್‌ ಅವರನ್ನು ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಬದುಕಿದ್ದವರನ್ನು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಕ್ಕೆ ಕುಟುಂಬಸ್ಥರು, ಸಾರ್ವಜನಿಕರು ಆಸ್ಪತ್ರೆ ವಿರುದ್ಧ ಕಿಡಿಕಾರಿದ್ದು, ಒಬ್ಬರ ಪ್ರಾಣದ ಬಗ್ಗೆ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆಂದು ಆಕ್ರೋಶ ಹೊರಹಾಕಿದ್ದಾರೆ.

ಜಗದೀಶ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕಳುಹಿಸಿದ ಬಳಿಕ ಮತ್ತೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...