ಬೆಂ.ಗ್ರಾ | ಚಿನ್ನದ ಸರ ದೋಚಿದ್ದ ಆಟೊ ಚಾಲಕ, ಆತನ ಪ್ರೇಯಸಿ ಬಂಧನ

Date:

ಮನೆಗೆ ತೆರಳಲು ಆಟೊ ಹತ್ತಿದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಿನ್ನದ ಸರ ದೋಚಿದ್ದ ಆಟೊ ಚಾಲಕ ಮತ್ತು ಆತನ ಪ್ರೇಯಸಿಯನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.

ಹನಿಯೂರ ನಿವಾಸಿ ಆಟೊ ಚಾಲಕ ರಘು ಮತ್ತು ಚೆಲ್ಲಹಳ್ಳಿ ಶ್ವೇತಾ ಬಂಧಿತರು.

“ತೂಬಗೆರೆ ಪೇಟೆಯ ಯಶೋಧಮ್ಮ ಎಂಬುವವರು ಕೊಂಗಾಡಿಯಪ್ಪ ಕಾಲೇಜು ಬಳಿಯಿರುವ ಮಗಳ ಮನೆಯಿಂದ ಬರಲು ಆಟೊ ಹತ್ತಿದ್ದಾರೆ. ಆಟೊದಲ್ಲಿ ಚಾಲಕನೊಂದಿಗೆ ಓಂ ಶಕ್ತಿ ಮಾಲಾಧಾರಿ ಮಹಿಳೆಯು ಕುಳಿತಿದ್ದು, ಅವರನ್ನು ಆಲಹಳ್ಳಿ ಸಮೀಪ ಬಿಟ್ಟು ನಂತರ ಮನೆಗೆ ಬಿಡುವುದಾಗಿ ಚಾಲಕ ಕರೆದೊಯ್ದಿದ್ದ. ಆದರೆ, ಆಟೊ ಚಾಲಕ ನಾಗಸಂದ್ರ ಸಮೀಪದ ರಾಷ್ಟ್ರೀಯ ಹೆದ್ದಾರಿ 648 ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಯಶೋಧಮ್ಮನವರ 33 ಗ್ರಾಂ ಮಾಂಗಲ್ಯ ಸರ ಹಾಗೂ 4 ಗ್ರಾಂ ಓಲೆ ದೋಚಿದ್ದು, ಬಳಿಕ ಅವರನ್ನು ಆಲಹಳ್ಳಿ ಸಮೀಪ ಬಿಟ್ಟು ಪರಾರಿಯಾಗಿದ್ದ” ಎಂದು ಇನ್‌ಸ್ಪೆಕ್ಟರ್‌ ಅಮರೇಶ್‌ಗೌಡ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ದೂರು ಸ್ವೀಕರಿಸಲು ಪೊಲೀಸರ ನಿರಾಕರಣೆ; ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಆಸ್ಪತ್ರೆಗೆ ದಾಖಲು

“ಈ ಕುರಿತು ಯಶೋಧಮ್ಮ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಚಾಲಕ ರಘು ಮತ್ತು ಶ್ವೇತಾ ಎಂಬುವವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೋಚಿದ್ದ ಮಾಂಗಲ್ಯ ಸರವನ್ನು ಅಡವಿಟ್ಟಿದ್ದು, ಮರು ವಸೂಲಿ ಮಾಡಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...