ಮೋದಿಯವರ 56 ಇಂಚಿನ ಎದೆಯಲ್ಲಿ ಹಿಂಸೆ ಹತ್ತಿಕ್ಕುವ ಎದೆಗಾರಿಕೆ ಇಲ್ಲವೇ: ದಿನೇಶ್‌ ಗುಂಡೂರಾವ್‌ ಪ್ರಶ್ನೆ

Date:

  • ಮಣಿಪುರ ಭಾರತದಲ್ಲಿದೆಯೇ ಅಥವಾ ಅಫ್ಘಾನಿಸ್ತಾನದಲ್ಲಿದೆಯೇ?
  • ರಾಷ್ಟ್ರಪತಿ ಆಳ್ವಿಕೆಯ ಮೂಲಕ ಪರಿಸ್ಥಿತಿ ನಿಯಂತ್ರಿಸಲಿ: ಆಗ್ರಹ

ಮಣಿಪುರದಲ್ಲಿ ಮೂರು ತಿಂಗಳಿಂದ ಹಿಂಸಾಚಾರ ನಡೆಯುತ್ತಿದೆ. ಸಜೀವ ದಹನ, ಮಹಿಳೆಯರ ನಗ್ನ ಮೆರವಣಿಗೆಯಂತಹ ಭೀಭತ್ಸ ಕೃತ್ಯಗಳು ಸರಣಿ ರೂಪದಲ್ಲಿ ನಡೆಯುತ್ತಿವೆ. ಕೊಲೆ ಅತ್ಯಾಚಾರಗಳಿಗೆ ಲೆಕ್ಕವೇ ಇಲ್ಲ.‌ ಮಣಿಪುರ ಭಾರತದಲ್ಲಿದೆಯೇ ಅಥವಾ ಅಫ್ಘಾನಿಸ್ತಾನದಲ್ಲಿದೆಯೇ? ಗಲಭೆ ನಿಯಂತ್ರಿಸಲು ಪ್ರಧಾನಿಯವರಿಗೆ ಸಾಧ್ಯವಿಲ್ಲವೇ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಮಣಿಪುರದಲ್ಲಿ ಬಿಜೆಪಿಯಲ್ಲದೇ ಬೇರೆ ಪಕ್ಷದ ಸರ್ಕಾರವಿದ್ದಿದರೆ ಕೇಂದ್ರ ಸುಮ್ಮನಿರುತಿತ್ತೆ? ಮಣಿಪುರ ದೊಂಬಿ ಹಾಗೂ ಕೊಲೆಗಡುಕರ ರಾಜ್ಯವಾಗಲು ಅಲ್ಲಿನ ಸರ್ಕಾರದ ನಿಷ್ಕ್ರಿಯತೆ ಅತಿ ಮುಖ್ಯ ಕಾರಣ. ಕೇಂದ್ರ ಈ ಕೂಡಲೇ ಸಂವಿಧಾನದ 356ನೇ ವಿಧಿಯ ಅನ್ವಯ ಅಲ್ಲಿಯ ಸರ್ಕಾರವನ್ನು ವಜಾ ಮಾಡಲಿ. ರಾಷ್ಟ್ರಪತಿ ಆಳ್ವಿಕೆಯ ಮೂಲಕ ಪರಿಸ್ಥಿತಿ ನಿಯಂತ್ರಿಸಲಿ” ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಮಣಿಪುರ ಗಲಭೆ; ಸರ್ಕಾರಗಳು ಮತ್ತು ಕೋರ್ಟುಗಳು ವಿವೇಚನೆ ಕಳೆದುಕೊಂಡವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಣಿಪುರ ಹಿಂಸಾಚಾರವನ್ನು ಕಳೆದ ಮೂರು ತಿಂಗಳಿಂದ ಜೀವಂತವಾಗಿ ಬಿಟ್ಟಿರುವುದು ಕೇಂದ್ರದ ಅಸಹಾಯಕತೆಗಿಂತ ಹೆಚ್ಚಾಗಿ ಹೇಡಿತನ ತೋರಿಸುತ್ತಿದೆ‌. ಮಣಿಪುರದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಅಲ್ಲಿನ ಬಿಜೆಪಿ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಮೋದಿಯವರ 56 ಇಂಚಿನ ಎದೆಯಲ್ಲಿ ಹಿಂಸಾಚಾರ ಸದ್ದಡಗಿಸುವ ಎದೆಗಾರಿಕೆ ಇಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...