ಚಿಕ್ಕಬಳ್ಳಾಪುರ | ಮೈಕ್ರೋ ಫೈನಾನ್ಸ್‌ ಹಾವಳಿಗೆ ಶಾಸಕರ ಅಭಯ

Date:

ಯಾರದರೂ ಮನೆ ಬಳಿ ಬಂದು ಮಹಿಳೆಯರಿಗೆ ಕಿರುಕುಳ ನೀಡಿದರೆ ಒದ್ದು ಒಳಗೆ ಹಾಕಿಸುತ್ತೇನೆ. ನೀವು ಭಯಪಡದೆ ನಿಶ್ಚಿಂತೆಯಿಂದಿರಿ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಮಹಿಳೆಯರ ಗುಂಪೊಂದಕ್ಕೆ ಅಭಯ ಹಸ್ತ ನೀಡಿದರು.

ಚಿಕ್ಕಬಳ್ಳಾಪುರ ತಾಲೂಕಿನ ದಿನ್ನಹಳ್ಳಿ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಮ್ಮ ಊರು ನಮ್ಮ ಶಾಸಕರು ಕಾರ್ಯಕ್ರಮದಲ್ಲಿ ಮುಸಲ್ಮಾನ್‌ ಮಹಿಳೆಯರ ಸ್ವಸಹಾಯ ಗುಂಪುಗಳ ಅಹವಾಲು ಸ್ವೀಕರಿಸಿ ಬಳಿಕ ಅವರು ಮಾತನಾಡಿದರು.

ಶಾಸಕ 2

ಸಾಲದಾರರು(ಮೈಕ್ರೋ ಫೈನಾನ್ಸ್‌) ಯಾರೇ ಆಗಲಿ ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಬೇಕು. ಅದನ್ನು ಹೊರತುಪಡಿಸಿ ಮನೆ ಬಳಿ ಬಂದು ಮಹಿಳೆಯರೊಂದಿಗೆ ಅನುಚಿತವಾಗಿ ಮಾತನಾಡುವುದು, ಕಿರುಕುಳ ನೀಡುವುದು ಗೊತ್ತಾದರೆ ಕೂಡಲೇ ನನ್ನ ಗಮನಕ್ಕೆ ತನ್ನಿ. ಅಂತವರ ವಿರುದ್ಧ ಕಾನೂನು ರೀತಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ಮಾತನಾಡಿದ ಮಹಿಳೆಯೊಬ್ಬರು, ಸಾಲ ತೆಗೆದುಕೊಳ್ಳೂವಾಗ ಚೆನಾಗಿರುತ್ತೆ, ಕಟ್ಟುವಾಗ ಆಗಲ್ವಾ? ನಮಗೆ ಹಣ ಬೇಕು ಏನಾದರೂ ಮಾಡಿ ಕಟ್ಟಿ ಎಂದು ಅಸಭ್ಯವಾಗಿ ಮಾತುಗಳನ್ನಾಡುತ್ತಿದ್ದಾರೆ. ಗಂಡಸರು ಮನೆಗೆ ಬಾರದಂತಾಗಿದ್ದಾರೆ. ದಿನಕ್ಕೊಬ್ಬರು ಸಾಲಗಾರರು ಬರುತ್ತಿದ್ದಾರೆ. ಇದರಿಂದ ನೆಮ್ಮದಿ ಇಲ್ಲದಾಗಿದೆ ಎಂದು ದೂರಿದರು.

ಮತ್ತೋರ್ವ ಮಹಿಳೆ ಮಾತನಾಡಿ, ಐದಾರು ಜನರು ಬೆಳಗಾದರೆ ಸಾಕು ಮನೆ ಬಾಗಿಲಿಗೆ ಬರುತ್ತಿದ್ದಾರೆ. ಮನೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ಸತ್ತೀದ್ದೀರಿ ಎಂದಾದರೂ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಪ್ರದೀಪ್‌ ಈಶ್ವರ್ ನಡೆ, ಹಳ್ಳಿ ಜನರ ಕಡೆ

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಈ ರೀತಿ ಯಾರೇ ಕಿರುಕುಳ ನೀಡಿದರೂ, ಅಂತವರ ಮೇಲೆ ಪ್ರಕರಣ ದಾಖಲಿಸುವಂತೆ ಸೂಚಿಸಿದರು.

ಈ ವೇಳೆ ತಹಶೀಲ್ದಾರ್‌ ಅನಿಲ್‌, ಇಒ ಮಂಜುನಾಥ್‌, ತಾಲೂಕು ಆರೋಗ್ಯ ಅಧಿಕಾರಿ ಮಂಜುಳಾ, ಸಮಾಜ ಕಲ್ಯಾಣ ಅಧಿಕಾರಿ ಶೇಷಾದ್ರಿ, ಪಿಡಿಒ ಮದ್ದರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...