ನಿಮ್ಮ ಕ್ಷೇತ್ರಗಳ ಜನರ ನಿರೀಕ್ಷೆ ಹುಸಿ ಮಾಡದೇ ಕೆಲಸ ಮಾಡಿ; ಕಾಂಗ್ರೆಸ್‌ ಶಾಸಕರಿಗೆ ಸಿಎಂ ಸೂಚನೆ

Date:

  • ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಯು ಟಿ ಖಾದರ್‌ಗೆ ಸಿಎಂ ಅಭಿನಂದನೆ
  • ಕೇಂದ್ರ ಸರ್ಕಾರದ ತಾರತಮ್ಯ ಕುರಿತು ಶಾಸಕರಿಗೆ ಸಿದ್ದರಾಮಯ್ಯ ಮನವರಿಕೆ

ರಾಜ್ಯದ ಜನತೆ ಅಪಾರ ನಿರೀಕ್ಷೆ ಇಟ್ಟುಕೊಂಡು ನಮಗೆ ಬಹುಮತದ ಮೂಲಕ ಜವಾಬ್ದಾರಿ ವಹಿಸಿದ್ದಾರೆ. ಐದು ವರ್ಷಗಳ ಕಾಲ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿ. ನಿಮ್ಮ ಕ್ಷೇತ್ರಗಳ ಜನರ ನಿರೀಕ್ಷೆ ಈಡೇರಿಸಿ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

15ನೇ ವಿಧಾನಸಭೆಯ ಕೊನೆಯ ದಿನವಾದ ಇಂದು (ಮೆ 24) 16ನೇ ವಿಧಾನಸಭೆಯ ಸಭಾಧ್ಯಕ್ಷರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಯು ಟಿ ಖಾದರ್ ಅವರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಭಿನಂದಿಸಿ ಮಾತನಾಡಿದ ಅವರು, ತಮ್ಮ ಪಕ್ಷದ ಶಾಸಕರುಗಳಿಗೆ ಸಲಹೆ, ಸೂಚನೆ ನೀಡಿದರು.

“ವಿಧಾನಸಭೆ ಅಧಿವೇಶನದಲ್ಲಿ ಕಡ್ಡಾಯವಾಗಿ ಹೆಚ್ಚು ಕ್ರಿಯಾಶೀಲತೆಯಿಂದ ಭಾಗವಹಿಸಿ. ಬಿಜೆಪಿಯವರು ಮಾಡುವ ಸುಳ್ಳು ಆಪಾದನೆಗಳನ್ನು ಯಶಸ್ವಿಯಾಗಿ ಎದುರಿಸಲು ಎಲ್ಲ ಶಾಸಕರು ಕಡ್ಡಾಯವಾಗಿ ಅಧಿವೇಶನದಲ್ಲಿ ಭಾಗವಹಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರದ ತಾರತಮ್ಯ ನೀತಿಯಿಂದ ರಾಜ್ಯದ ಜನತೆಗೆ ಅಪಾರ ನಷ್ಟವಾಗಿದೆ. ಹಣಕಾಸು ಆಯೋಗದಲ್ಲೂ ನಮಗೆ ಅನ್ಯಾಯವಾಗಿದೆ. ತೆರಿಗೆ ಪಾಲಿನಲ್ಲೂ ಅನ್ಯಾಯವಾಗಿದೆ. ನಮ್ಮ ನಾಡಿನ‌ ಜನತೆ ಕಟ್ಟುವ ತೆರಿಗೆಯಲ್ಲಿ ನಮ್ಮ ಪಾಲು ಸಮರ್ಪಕವಾಗಿ ಬರುತ್ತಿಲ್ಲ. ನಾವು ಕ್ರಿಯಾಶೀಲ ಒತ್ತಡ ಮತ್ತು ಬೇಡಿಕೆ ಮೂಲಕ ನಮ್ಮ ಪಾಲನ್ನು ನಾವು ಪಡೆದುಕೊಳ್ಳಬೇಕು” ಎಂದು ಕೇಂದ್ರದ ತಾರತಮ್ಯ ಕುರಿತು ಮನವರಿಕೆ ಮಾಡಿಕೊಟ್ಟರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಜ್ರೀವಾಲ್ ಸರ್ಕಾರದ ವಿರುದ್ಧ ಮೋದಿ ಸೇಡಿನ ಕ್ರಮ

“ಕೇಂದ್ರದಿಂದ ರಾಜ್ಯಕ್ಕೆ, ನಾಡಿನ ಜನತೆಗೆ ಅನ್ಯಾಯ ಆಗುತ್ತಿದ್ದರೂ ರಾಜ್ಯದಿಂದ ಆಯ್ಕೆ ಆದ ಸಂಸದರು ನಾಲ್ಕೂವರೆ ವರ್ಷಗಳ ಕಾಲ ನಾಡಿನ ಜನತೆಯ ಪರವಾಗಿ ಬಾಯಿ ಬಿಡಲಿಲ್ಲ. ಇದನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಕೋವಿಡ್, ಪ್ರವಾಹದ ಸಂದರ್ಭದಲ್ಲೂ ಈ ಸಂಸದರು ರಾಜ್ಯದ ಪರವಾಗಿ ಕೇಂದ್ರದ ಮುಂದೆ ಬಾಯಿ ಬಿಡಲಿಲ್ಲ. ಹೀಗಾಗಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಇವರಿಗೆ ಸರಿಯಾದ ಉತ್ತರ ಕೊಡಬೇಕು. ಹೀಗಾಗಿ ಬರಲಿರುವ ಲೋಕಸಭಾ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಜನಪರವಾಗಿ ಕೆಲಸ ಮಾಡಿ” ಎಂದು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...