ಸಿಎಂ ಆಯ್ಕೆ ಅಂತಿಮವಾಗಿಲ್ಲ, ಸುಳ್ಳುಸುದ್ದಿ ಹಬ್ಬಿಸಬೇಡಿ: ರಣದೀಪ್‌ ಸಿಂಗ್‌ ಸುರ್ಜೇವಾಲ

Date:

ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಪ್ರಕ್ರಿಯೆ ಇನ್ನೂ ನಡೆಯುತ್ತಿದ್ದು, ಅಂತಿಮವಾಗಿ ಯಾವ ನಿರ್ಧಾರಕ್ಕೂ ಬಂದಿಲ್ಲ. ದಯವಿಟ್ಟು ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಎದುರು ಮಾತನಾಡಿದ ಅವರು, “ಸದ್ಯ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಎಲ್ಲ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ನಿರ್ಧಾರ ಕೈಗೊಂಡಾಗ ನಾವು ತಿಳಿಸುತ್ತೇವೆ. ಇನ್ನು 48 ರಿಂದ 72 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದೆ” ಎಂದು ಹೇಳಿದ್ದಾರೆ.

“ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಈಗ ಹರಿದಾಡುತ್ತಿರುವುದು ಸುಳ್ಳು ಸುದ್ದಿ. ಶಾಸಕಾಂಗ ಪಕ್ಷದ ನಾಯಕರು ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ. ಇಂದು ಅಥವಾ ನಾಳೆ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಎಐಸಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಆದರೆ ನಾಳೆ ಪ್ರಮಾಣವಚನ ಇರುವುದಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲ್ಲಿಕಾರ್ಜುನ ಖರ್ಗೆ ಕಳೆದೆರಡು ದಿನಗಳಿಂದ ಚರ್ಚೆ ನಡೆಸುತ್ತಿದ್ದಾರೆ. ಖರ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಬಹುದು. ಪ್ರಧಾನಿ ಮೋದಿ ಇಂತಹ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು 10 ರಿಂದ 15 ದಿನ ತೆಗೆದುಕೊಳ್ಳುತ್ತಿದ್ದರು. ಸಂಪುಟದಲ್ಲಿ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಪ್ರತೀ ಯೋಜನೆಗಳನ್ನು ಈಡೇರಿಸುತ್ತೇವೆ ಎಂದು ಸುರ್ಜೇವಾಲ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸುದ್ದಿ ಹರಿದಾಡಿತ್ತು. ಇದರಿಂದ ಹಲವೆಡೆ ಸಿದ್ದು ಅಭಿಮಾನಿಗಳು ಸಂಭ್ರಮಾಚರಣೆ ಕೂಡ ಮಾಡಿದ್ದರು. ಆದರೆ ಸುರ್ಜೇವಾಲ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...