ಸಾರ್ವಜನಿಕ ಸಭೆಯೊಂದರಲ್ಲಿ ಮಹಿಳೆಯರನ್ನು ಅವಹೇಳನ ಮಾಡಿದ, ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ, ಬಂಧಿಸದಂತೆ ಪುತ್ತೂರಿನ ಆರನೇ ಹೆಚ್ಚುವರಿ ಸೆಷನ್ ಕೋರ್ಟ್ ಆದೇಶಿಸಿದೆ.
ಸಾರ್ವಜನಿಕ ಸಭೆಯೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಎಫ್ಐಆರ್ ಪ್ರಶ್ನಿಸಿ ಭಟ್ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಪ್ರಕರಣ ವಿಚಾರಣೆ ನಡೆಸಿದ ಕೋರ್ಟ್ ಮುಂದಿನ ವಿಚಾರಣೆವರೆಗೆ ಬಲವಂತವಾಗಿ ಬಂಧಿಸದಂತೆ, ಕ್ರಮ ಕೈಗೊಳ್ಳದಂತೆ ಸೂಚಿಸಿದೆ. ಅಕ್ಟೋಬರ್ 29ರಂದು ಮುಂದಿನ ವಿಚಾರಣೆ ನಡೆಯಲಿದೆ.
ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡ | ವಿವಾದಾತ್ಮಕ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು
ಅಕ್ಟೋಬರ್ 20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು ಅಪಮಾನ ಮಾಡಿ, ಗರ್ಭಿಣಿಯರನ್ನು ನಿಂದಿಸಿದ್ದರು. ಈ ಸಂಬಂಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಪುತ್ತೂರಿನ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.
ದೂರಿನ ಆಧಾಯದಲ್ಲಿ ಅಪರಾಧ ಕ್ರಮಾಂಕ 118/2025, ಭಾರತೀಯ ನ್ಯಾಯ ಸಂಹಿತೆ (BNS) 79, 196, 299, 302 ಹಾಗೂ 3(5) ಕಲಂಗಳ ಅಡಿಯಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





