ಗೌರಿಬಿದನೂರು | ನಾಳೆ ಡಾ.ಎಚ್.ನರಸಿಂಹಯ್ಯ ಜನ್ಮಶತಮಾನೋತ್ಸವ; ಸಿಎಂ ಸಿದ್ದರಾಮಯ್ಯ ಚಾಲನೆ

Date:

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹೊಸೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಫೆ.2ರ ಭಾನುವಾರದಂದು ಪದ್ಮಭೂಷಣ ಡಾ.ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವ ಮತ್ತು ಶಾಲಾ ಶತಮಾನೋತ್ಸವ ಸಮಾರಂಭವನ್ನು ಆಯೋಜಿಸಲಾಗಿದೆ.

ಭಾನುವಾರ ಬೆಳಗ್ಗೆ 10.30ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಕೆ ಎಚ್‌ ಪುಟ್ಟಸ್ವಾಮಿ ಗೌಡ ಸಮಾರಂಭದ ಅಧ್ಯಕ್ಷತೆವಹಿಸಲಿದ್ದು, ನಾಡೋಜ ಹಂಪ ನಾಗರಾಜಯ್ಯ ಮುಖ್ಯ ಭಾಷಣ ಮಾಡಲಿದ್ದಾರೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌, ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ಡಾ.ಕೆ.ಸುಧಾಕರ್‌, ವಿಪ ಸದಸ್ಯರಾದ ಅನಿಲ್‌ ಕುಮಾರ್‌, ಡಿ.ಟಿ.ಶ್ರೀನಿವಾಸ್‌, ಚಿದಾನಂದ್‌ ಗೌಡ ಎಂ, ಗೀತಾ ನಾಗರಾಜ್‌, ಹೆಚ್‌ವಿ ತಿಮ್ಮಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಗೌರಿಬಿದನೂರು | ಜೋಡಿ ಶತಮಾನೋತ್ಸವಕ್ಕೆ ಸಜ್ಜಾದ ಹೊಸೂರು ಗ್ರಾಮ

ಬೆಂಗಳೂರಿನ ಎನ್‌ಇಎಸ್‌ ಸಂಸ್ಥೆಯ ಅಧ್ಯಕ್ಷರಾದ ಡಾ.ಎಚ್.ಎನ್.ಸುಬ್ರಹ್ಮಣ್ಯ, ನಿವೃತ್ತ ಮಹಾಲೇಖಪಾಲರಾದ ಡಿ.ಎನ್.ಆನಂದ್‌ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ತಾಲೂಕಿನ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸರಕಾರಿ ನೌಕರರ ಸಂಘ, ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲೆಯ ಹಿರಿಯ ವಿದ್ಯಾರ್ಥಿಗಳು ಸೇರಿದಂತೆ 10 ಸಾವಿರ ಜನ ಭಾಗವಹಿಸಲಿದ್ದಾರೆ ಎಂದು ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಚ್.ವಿ.ಮಂಜುನಾಥ್‌ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...