ಉಡುಪಿ| ಹಾವಂಜೆಯಲ್ಲಿ ಕಾವಿ ಕಲೆಯ ವಿನ್ಯಾಸ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟನೆ

Date:

ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಕರಕುಶಲ ಅಭಿವೃದ್ಧಿ ಮಂಡಳಿಯ ವತಿಯಿಂದ ಕಾವಿ ಕಲೆಯ ವಿನ್ಯಾಸಗಳ ಅಭಿವೃದ್ಧಿ ಕಾರ್ಯಾಗಾರವು ಹಾವಂಜೆಯ ಭಾಸ ಗ್ಯಾಲರಿ ಮತ್ತು ಸ್ಟುಡಿಯೋದಲ್ಲಿ ಹಾವಂಜೆ ಗ್ರಾಮ ಪಂಚಾಯತ್ನ ಉಪಾಧ್ಯಕ್ಷರಾದ ಗುರುರಾಜ ಕಾರ್ತಿಬೈಲು ಅವರಿಂದ ಉದ್ಘಾಟನೆಗೊಂಡಿತು.

“ಈ ರೀತಿಯ ಕಾರ್ಯಾಗಾರಗಳು ನಮ್ಮ ಹಳ್ಳಿಯಲ್ಲಿ ನಡೆಯುತ್ತಿರುವುದು ನಮಗೊಂದು ಹೆಮ್ಮೆ, ಕಾವಿ ಕಲೆಯನ್ನು ಬೆಳೆಸಿ, ಗ್ರಾಮೋದ್ಯೋಗವನ್ನು ಸೃಜಿಸುವ ಡಾ ಹಾವಂಜೆಯವರ ಪ್ರಯತ್ನ ಶ್ಲಾಘನೀಯ” ಎಂಬುದಾಗಿ ಹೇಳಿದರು.

ಮಣ್ಣಿನ ಉತ್ಪನ್ನಗಳು, ಬಟ್ಟೆ, ಮರ ಮೊದಲಾದ ವಿವಿಧ ಮಾಧ್ಯಮದಲ್ಲಿ ಕಾವಿ ಕಲೆಯ ವಿನ್ಯಾಸಗಳನ್ನು ಬೆಳೆಸುವ ಈ ಕಾರ್ಯಾಗಾರವು ಸುಮಾರು 25 ದಿನಗಳ ಕಾಲ ನಡೆಯಲಿದ್ದು, ಉಡುಪಿ ಭಾಗದ ಕಲಾವಿದರು ಇದರಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಾಗಾರವು ಕಾವಿ ಕಲೆಯ ವಿನ್ಯಾಸಗಳನ್ನು ಉತ್ತೇಜಿಸುವುದು ಹಾಗೂ ದಿನಬಳಕೆಯ ವಸ್ತುಗಳಲ್ಲಿ ಅದನ್ನು ತರುವ ಪ್ರಯತ್ನ ಎಂಬುದಾಗಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ಹಾಗೂ ಕಾವಿ ಕಲಾವಿದ ಡಾ. ಜನಾರ್ದನ ಹಾವಂಜೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿಯ ವಿನ್ಯಾಸಗಾರ ಬ್ರಿಜೇಶ್ ಜೈಸ್ವಾಲ್ ಈ ಕಾರ್ಯಾಗಾರದಲ್ಲಿ ಕಲಾವಿದರುಗಳ ವಿನ್ಯಾಸಗಳ ಬೆಳವಣಿಗೆಗೆ ಸಹಕರಿಸುವರಲ್ಲದೇ ವಿವಿಧ ಮಾಧ್ಯಮಗಳ ಮೇಲೆ ಇದರ ಬಳಕೆಯ ಸಾಧ್ಯತೆಯನ್ನು ಪ್ರಯೋಗಿಸುತ್ತಾರೆ. ಪುತ್ತೂರಿನ ಕುಂಬಾರರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜನಾರ್ದನ ಮೂಲ್ಯ, ಕರಕುಶಲ ನಿಗಮದ ಹೆಚ್ ಪಿ ಒ ಸುಪ್ರಿಯಾ ಭಾರದ್ವಾಜ್ ಹಾಗೂ ಕಾವಿ ಆರ್ಟ್ ಫೌಂಡೇಶನ್‌ನ ಮಂಜುನಾಥ ರಾವ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...