ರಾಯಚೂರು | ಜಯಪ್ರಕಾಶ ಪಾಟೀಲ್ ಮೇಲೆ ಗುಂಡಿನ ದಾಳಿ ಪ್ರಕರಣ: ಆರೋಪಿಗಳ ಬಂಧನ

Date:

  • ವೈದ್ಯರ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿಗಳಿಗೆ ಬಂಧಿಸಿದ ರಾಯಚೂರು ಪೊಲೀಸರು.
  • ರಾಯಚೂರುನ ಬೆಟ್ಟದೂರು ಆಸ್ಪತ್ರೆ ವೈದ್ಯ ಡಾ.ಜಯಪ್ರಕಾಶ ಪಾಟೀಲ್ ರವರ ಮೇಲೆ ಗುಂಡಿನ ದಾಳೆ ಪ್ರಕರಣ

ರಾಯಚೂರು ನಗರದ ಬೆಟ್ಟದೂರು ಆಸ್ಪತ್ರೆಯ ಡಾ.ಜಯಪ್ರಕಾಶ ಪಾಟೀಲ್ ರವರ ಮೇಲೆ ಗುಂಡಿನ ದಾಳಿ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿತರನ್ನು ಬಂಧಿಸಲಾಗಿದೆ ಎಂದು ಬಳ್ಳಾರಿ ವಲಯ ಐಜಿಪಿ ಲೋಕೇಶ ಕುಮಾರ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇ ರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆ.31ರಂದು ಬೆಟ್ಟದೂರು ಆಸ್ಪತ್ರೆಯಿಂದ ಮಾನ್ವಿ ಕಡೆಗೆ ಹೋಗುತ್ತಿರುವ ವೇಳೆ ವೈದ್ಯರ ಮೇಲೆ ಬೈಕ್‌ ಮೇಲೆ ಬಂದ ಇಬ್ಬರು ದುಷ್ಕರ್ಮಿಗಳು ಸಾಥ್‌ಮೈಲ್ ಹತ್ತಿರ ಪಿಸ್ತೂಲ್ ನಿಂದ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು, ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ತಂಡ ರಚಿಸಿ ಇಬ್ಬರು ಆರೋಪಿಗಳಿಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ “ಎಂದರು.

“ಶರ್ಫುದ್ದಿನ್ ಮತ್ತು ಕಮರುದ್ದೀನ್ ಬಂಧಿತ ಆರೋಪಿಗಳಾಗಿದ್ದಾರೆ. ಡಾ.ಜಯಪ್ರಕಾಶ ಪಾಟೀಲ್ ಅವರು ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರೊಫೈಲ್ ಚೆಕ್ ಮಾಡಿದ್ದಾರೆ. ಪ್ರಸಿದ್ಧ ವೈದ್ಯರೆಂದು ತಿಳಿದು ಅವರ ಬಗ್ಗೆ ಮಾಹಿತಿ ಪಡೆದು ಆಸ್ಪತ್ರೆ ಮತ್ತು ಅವರ ಮೊಬೈಲ್ ನಂಬರ್ ಪಡೆದುಕೊಂಡು ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದರು. ವೈದ್ಯರು ಯಾವುದೇ ಪ್ರತಿಕ್ರಿಯೆ ನೀಡದೇ ಇರುವುದರಿಂದ ಅವರನ್ನು ಹಿಂಬಾಲಿಸಿಕೊಂಡು ಬಂದು ಹೆದರಿಸುವ ಉದ್ದೇಶದಿಂದ ಅಡ್ಡಗಟ್ಟಿ ಪಿಸ್ತೂಲ್ ನಿಂದ ಗುಂಡಿನ ದಾಳಿ ನಡೆಸಿದ್ದರು. ಬಂಧಿತ ಆರೋಪಿಗಳಿಂದ ಪಿಸ್ತೂಲ್ ಮತ್ತು ಬೈಕ್ ಮತ್ತು ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗೌರಿ ನೆನಪು | ಅನಾಮಿಕ ಅಮಾಯಕ ಜನಗಳ ಮನದಾಳದಲ್ಲಿ ಗೌರಿ

ಈ ಸಂದರ್ಭದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿವಕುಮಾರ, ಡಿ.ಎಸ್.ಪಿ ಎಸ್.ಬಿ.ಪತ.ನಾರಾಯಣ ರಾವ್, ಸಿಪಿಐ. ಉಪಸ್ಥಿತರಿದ್ದರು.

ವರದಿ: ಹಪ್ಪಿಜುಲ್ಲಾ, ಸಿಟಿಜನ್‌ ಜರ್ನಲಿಸ್ಟ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...