ಬಜೆಟ್ ಅಧಿವೇಶನದಲ್ಲಿ ಖಾಲಿ ಹುದ್ದೆಗಳ ಭರ್ತಿ ಚರ್ಚೆಗೆ ಡಾ.ಕೆ.ನಾಗರಾಜ್ ಒತ್ತಾಯ.

Date:

ಕೋಲಾರ: ಮುಂಬರುವ ರಾಜ್ಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದಲ್ಲಿರುವ 43 ಇಲಾಖೆಯ ಸುಮಾರು 2.80 ಲಕ್ಷಕ್ಕೂ ಹೆಚ್ಚು ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಗತ್ಯ ಕ್ರಮ ವಹಿಸುವಂತೆ ರಾಜ್ಯ ಸರ್ಕಾರವನ್ನು ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಹಾಗೂ ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯಾದ್ಯಂತ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.80 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರದ ಅಂಕಿಅಂಶಗಳ ಮೂಲಕವೇ ಬಹಿರಂಗಗೊಂಡಿದೆ ಅ ಹುದ್ದೆಗಳಿಗೆ ಭರ್ತಿ ಮಾಡುವ ಜೊತೆಗೆ ಎಲ್ಲಾ ಇಲಾಖೆಗಳಲ್ಲಿನ ಗುತ್ತಿಗೆ ಪದ್ಧತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಕಾಯಂ ಉದ್ಯೋಗಿಗಳಾಗಿ ನೇಮಕ ಮಾಡಿಕೊಳ್ಳಲು ಮುಂಬರುವ ಬಜೆಟ್ ಅಧಿವೇಶನದಲ್ಲಿ ಚರ್ಚೆಯಾಗುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ಕಾರ್ಮಿಕರ ವಿರೋಧಿ ನೀತಿಗಳ ವಿರುದ್ಧ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ 1000 ಒಂದು ಸಾವಿರ ದಿನಗಳ ಸಂಭ್ರಮದ ಸಾಧನಾ ಸಮಾವೇಶ ನಡೆಯುತ್ತಿದೆ ಆದರೆ ಖಾಲಿ ಹುದ್ದೆಗಳು ಮಾತ್ರ ನೇಮಕ ಮಾಡಿಲ್ಲ ಜೊತೆಗೆ ಸರ್ಕಾರವು ಐದು ಗ್ಯಾರಂಟಿ ಯೋಜನೆಯಲ್ಲಿ ಯುವನಿಧಿ ಯೋಜನೆಯನ್ನು ಜಾರಿ ಮಾಡಿದೆ ಪದವಿ ಮತ್ತು ಡಿಪ್ಲೋಮಾ ಮುಗಿಸಿದ ನಿರುದ್ಯೋಗಿಗಳಿಗೆ ಮಾತ್ರವಲ್ಲದೆ ಎಲ್ಲಾ ಅರ್ಹ ನಿರುದ್ಯೋಗಿಗಳಿಗೂ ಈ ಯೋಜನೆಯನ್ನು ವಿಸ್ತರಿಸಬೇಕು ಎಷ್ಟೋ ಯುವಕರು ಪದವಿಯನ್ನು ಪಡೆದು ಉದ್ಯೋಗಕ್ಕಾಗಿ ಕಾಯುತ್ತಿದ್ದು ಅವರಿಗೆ ಅವಕಾಶ ಮಾಡಲು ಕೂಡಲೇ ಖಾಲಿ ಹುದ್ದೆಗಳ ನೇಮಕಾತಿಗೆ ಸರ್ಕಾರವು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯಿಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...