ಚಿಕ್ಕಬಳ್ಳಾಪುರ | ಅಭಿವೃದ್ಧಿ ಮರೆತು, ಮುಖ್ಯಮಂತ್ರಿ ಚರ್ಚೆಯಲ್ಲಿ ತಲ್ಲೀನವಾದ ಸರಕಾರ; ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ

Date:

2023ರ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ನವರ ಸುಳ್ಳು ಭರವಸೆ, ಪ್ರಚಾರಗಳನ್ನು ನಂಬಿ ಅವಕಾಶ ಕೊಟ್ಟಿದ್ದಾರೆ. ಆದರೆ, ಕಾಂಗ್ರೆಸ್‌ ಸರಕಾರ ಅಭಿವೃದ್ಧಿ ಶೂನ್ಯಗೊಳಿಸಿ, ಮುಖ್ಯಮಂತ್ರಿ ಚರ್ಚೆಯಲ್ಲಿ ತಲ್ಲೀನವಾಗಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಚಿಕ್ಕಬಳ್ಳಾಪುರ ತಾಲೂಕಿನ ಅಲಾಸ್‌ತಿಮ್ಮನಹಳ್ಳಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಅಧಿಕಾರ ದುರುಪಯೋಗಕ್ಕೆ ಮುಂದಾಗಿದೆ. ರಾಜ್ಯದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರಗಳೇ ಹೆಚ್ಚಾಗಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ ಆಡಳಿತದಲ್ಲಿ ಅಭಿವೃದ್ದಿ ಮತ್ತು ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಇದ್ಯಾವುದನ್ನೂ ಲೆಕ್ಕಿಸದೇ ಯಾವಾಗ, ಯಾರು ಮುಖ್ಯಮಂತ್ರಿ ಆಗಬೇಕು, ಯಾವಾಗ ಮುಖ್ಯಮಂತ್ರಿಯನ್ನ ಇಳಿಸಬೇಕು ಎಂಬ ಚರ್ಚೆಯಲ್ಲೇ ಮುಳುಗಿದೆ ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಷೇತ್ರ ಅಭಿವೃದ್ಧಿಯಲ್ಲಿ ಹಿಂದುಳಿದಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಂಸದರು, ನಮ್ಮ ಬಿಜೆಪಿ ಸರಕಾರದ ಅವಧಿಯಲ್ಲಿ ನಾನು ತಂದಿದ್ದ 100 ಕೋಟಿ ಅನುದಾನದ ಕಾಮಗಾರಿಗಳು ಮಾತ್ರ ಕ್ಷೇತ್ರದಲ್ಲಿ ಆಗಿವೆ. ಅದರ ಉದ್ಘಾಟನೆ, ಶಂಕು ಸ್ಥಾಪನೆ ಕಾಮಗಾರಿಗಷ್ಟೇ ಇವರು ಹೋಗುತ್ತಿದ್ದಾರೆ. ಅದನ್ನ ಹೊರತುಪಡಿಸಿದರೆ ಕ್ಷೇತ್ರಕ್ಕೆ ಯಾವುದೇ ಅನುದಾನ ತಂದಿಲ್ಲ ಎಂದು ಪರೋಕ್ಷವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌ ಅವರಿಗೆ ಟಾಂಗ್‌ ನೀಡಿದರು.

ಉನ್ನತ ಶಿಕ್ಷಣ ಇಲಾಖೆ ಸಂಪೂರ್ಣ ವಿಫಲವಾಗಿದೆ. ಇತ್ತ ಅತಿಥಿ ಉಪನ್ಯಾಸಕರಿಗೂ ನ್ಯಾಯ ಒದಗಿಸಿಲ್ಲ. ಇವರು ಪ್ರತೀ ವರ್ಷ ಎಷ್ಟು ಕಾಲೇಜುಗಳಿಗೆ, ಯಾವ ಕೋರ್ಸ್‌ಗಳಿಗೆ ಎಷ್ಟು ಹಣ ಎಂಬುದನ್ನ ನಿಗದಿ ಮಾಡಿ, ಹಣ ಪಡೆಯುತ್ತಿದ್ದಾರೆ. ಈ ಮೂಲಕ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ : ಕೋಲಾರ | ದಲಿತ ಹೋರಾಟಗಾರ ಕೊಮ್ಮಣ್ಣ ಎಂ ನಿಧನ

ಶಾಸಕರು ಹೊಸದಾಗಿ ಹಳ್ಳಿ ನೋಡ್ತಿದಾರೆ. ಜಿಪಂ, ತಾಪಂ ಚುನಾವಣೆ ಸಮೀಪಿಸುತ್ತಿದೆ. ಎಂಪಿ ಚುನಾವಣೆಯಲ್ಲಿ ಮುಖಭಂಗವಾಗಿದೆ. ಒಂದೇ ಬಾರಿಗೆ 36 ಸಾವಿರ ಮತಗಳು ವಿರುದ್ಧವಾಗಿ ಹೋಗಿವೆ ಎಂಬ ಕಾರಣಕ್ಕೆ ರಾತ್ರೋರಾತ್ರಿ ಭಯಬಿದ್ದು ಕೆಲಸಕ್ಕೆ ಮುಂದಾಗಿದ್ದಾರೆ ಅಷ್ಟೇ, ಹೃದಯದಿಂದ ಕೆಲಸ ಮಾಡುತ್ತಿಲ್ಲ. ಹುಟ್ಟಿದಾಗಿನಿಂದಲೂ ನಾಟಕವೇ ಅವರ ವೃತ್ತಿಯಾಗಿದೆ. ನಟನೆಯ ಮುಖವನ್ನಿಟ್ಟುಕೊಂಡು ಇದೀಗ ಜನರ ಮುಂದೆ ಹೋಗುತ್ತಿದ್ದಾರೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಅವರ ನಮ್ಮೂರು, ನಮ್ಮ ಶಾಸಕ ಕಾರ್ಯಕ್ರಮದ ಕುರಿತು ವ್ಯಂಗ್ಯವಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...