ಉಡುಪಿ | 20 ಕೋಟಿ ಅನುದಾನದ ಪ್ರಸ್ತಾವ ಸರ್ಕಾರಕ್ಕೆ ಸಲ್ಲಿಕೆ : ಡಾ ಎಂ ಏನ್ ರಾಜೇಂದ್ರ ಕುಮಾರ್

Date:

ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ ಎಂಬ ದಿವ್ಯ ಸಂದೇಶವನ್ನು ಜಗತ್ತಿಗೆ ಸಾರಿದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆಯು ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ಶ್ರೀ ಜೈನ ಧರ್ಮ ಜೀರ್ಣೋದ್ಧಾರಕ ಸಂಘದ ಕಾರ್ಯಾಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ ಎಂ ಏನ್ ರಾಜೇಂದ್ರ ಕುಮಾರ್ ಅವರು ಈ ಮಹೋತ್ಸವವನ್ನು ನಾಡ ಹಬ್ಬದ ರೀತಿಯಲ್ಲಿ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಳಿಸಬೇಕಾಗಿದ್ದು, ಮಹಾಮಸ್ತಕಾಭಿಷೇಕದ ಮುನ್ನ ಸಾಕಷ್ಟು ಪೂರ್ವ ತಯಾರಿಗಳು ನಡೆಯಬೇಕಾಗಿದೆ. ಸಭೆಯಲ್ಲಿ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಕೇವಲ ಮಹಾಮಸ್ತಕಾಭಿಷೇಕ ಮಾತ್ರ ನಡೆಯದೇ ಸಾರ್ವಜನಿಕರಿಗೂ ಪ್ರಯೋಜನ ಜೊತೆಗೆ ನೆನಪಿಡುವಂತಹ ಕಾಮಗಾರಿಗಳ ನಡೆಸಬೇಕು ಮಹಾಮಸ್ತಕಾಭಿಷೇಕ ಪ್ರಯುಕ್ತ ಬಾಹುಬಲಿ ಬೆಟ್ಟ ಹಾಗೂ ಕಾರ್ಕಳ ಪರಿಸರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಕೆಲಸಕ್ಕಾಗಿ ಲೋಕೋಪಯೋಗಿ, ಪ್ರವಾಸೋದ್ಯಮ, ಪುರಾತತ್ವ ಇಲಾಖೆ, ಅಲ್ಪಸಂಖ್ಯಾತ ಇಲಾಖೆ ಹಾಗೂ ಪುರಸಭೆಯಿಂದ ಶಾಶ್ವತ ಮೂಲಭೂತ ಅಭಿವೃದ್ಧಿ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡುವ ಸಲುವಾಗಿ ರೂ. 20 ಕೋಟಿ ಅನುದಾನದ ಅಂದಾಜು ಪಟ್ಟಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದ ಅವರು ಮುಂದೆ ಸಭೆ ನಡೆಸಿ ವಿವಿಧ ಸಮಿತಿಗಳನ್ನು ರಚಿಸಿ ಮಹೋತ್ಸವದ ವಿವಿಧ ಚಟುವಟಿಕೆಗಳ ಜವಾಬ್ದಾರಿಗಳನ್ನು ನೀಡಲಾಗುವುದು. ಈ ಮಹೋತ್ಸವವನ್ನು ಯಶಸ್ವಿಗೊಳಿಸುವಲ್ಲಿ ಎಲ್ಲರ ಸಹಕಾರ ಅತ್ಯಗತ್ಯ. ಎಲ್ಲರೂ ಒಗ್ಗೂಡಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ತಿಳಿಸಿದರು.

WhatsApp Image 2025 11 09 at 6.14.10 AM 1

ಪುರಾತತ್ವ ಇಲಾಖೆಯಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ವಿಗ್ರಹ, ಚತುರ್ಮುಖ ಬಸದಿ, ಹಿರಿಯಂಗಡಿಯ ಮಾನಸ್ತಂಬ ಹಾಗೂ ಇನ್ನಿತರ ಪುರಾತತ್ವ ಇಲಾಖೆಯ ಸ್ಥಳಗಳ ಸ್ವಚ್ಛತೆ ಮತ್ತು ಆಗಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪುರಾತತ್ವ ಇಲಾಖೆಯ ಅಧಿಕಾರಿಗಳಿಗೆ ಮನವಿ ನೀಡಲಾಯಿತು. ಪುರಾತತ್ವ ಇಲಾಖೆಯ ಅಧಿಕಾರಿಗಳು ಬಾಹುಬಲಿ ಬೆಟ್ಟಕ್ಕೆ ತೆರಳಿ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಚರ್ಚಿಸಿ ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಹಿರಿಯ ಸದಸ್ಯರಾದ ಎಸ್. ಅನಂತರಾಜ್ ಪೂವಣಿ, ಕೋಶಾಧಿಕಾರಿ ಡಾ. ಜೀವಂಧರ ಬಲ್ಲಾಳ್, ಪುರಾತತ್ವ ಇಲಾಖೆಯ ಹಿರಿಯ ಸಂರಕ್ಷಣಾಧಿಕಾರಿ ಸೂರಜ್, ಸ್ಮಾರಕ ಸಂರಕ್ಷಕ ಆನಂದ ನಾಯಕ್, ಜೈನ ಸಮಾಜದ ಪ್ರಮುಖರಾದ ಆಂಡಾರು ಮಹಾವೀರ ಜೈನ್, ಪುಷ್ಪರಾಜ್ ಜೈನ್, ಪ್ರಭಾತ್ ಕುಮಾರ್, ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...