ಉಡುಪಿ | ಮಕ್ಕಳ ಜೊತೆ ಸಂವೇದನೆಯಿಂದ ವ್ಯವಹರಿಸಲು ತರಬೇತಿ ಕಾರ್ಯಕ್ರಮ ಸಹಕಾರಿ: ಡಾ. ತಿಪ್ಪೇಸ್ವಾಮಿ ಕೆ. ಟಿ

Date:

ಮಕ್ಕಳ ರಕ್ಷಣಾ ಘಟಕದಲ್ಲಿ ಮಕ್ಕಳ ಜೊತೆ ವ್ಯವಹರಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದಿಸುವ ಜ್ಞಾನ ಮತ್ತು ಕೌಶಲ್ಯಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಪಡೆದ ಜ್ಞಾನವನ್ನು ಮನನ ಮಾಡುವ ಜೊತೆ ಕೌಶಲ್ಯವನ್ನು ಮೇಲ್ದರ್ಜೆಗೆ ಏರಿಸಿ ಮಕ್ಕಳ ಜೊತೆ ಸಂವೇದನಾಶೀಲತೆಯಿಂದ ವ್ಯವಹರಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ. ಟಿ ಹೇಳಿದರು.

ಅವರು ಇಂದು ರಜತಾದ್ರಿಯ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಉಡುಪಿ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಪಾಲನ ಸಂಸ್ಥೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮಕ್ಕಳ ರಕ್ಷಣೆಯ ಕುರಿತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಹಕ್ಕುಗಳ ರಕ್ಷಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ರಾಜ್ಯದ 5970 ಗ್ರಾಮಗಳಲ್ಲಿಯೂ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಅದಾಗಲೇ 26 ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ಪೂರ್ಣಗೊಂಡಿದೆ. ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಜೊತೆ ಸಂವಾದ ನಡೆಸಿ ಅವರ ಸಮಸ್ಯೆ, ಅಹವಾಲುಗಳನ್ನು ಆಲಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಕ್ಕಳ ಜೊತೆ ವ್ಯವಹರಿಸುವ ಮಕ್ಕಳ ಪಾಲನಾ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿಗಳು, ಸರ್ಕಾರೇತರ ಸಂಸ್ಥೆಗಳ ಕಾರ್ಯಕರ್ತರು ಕೇವಲ ಕಾನೂನಾತ್ಮಕ ದೃಷ್ಟಿಯಿಂದ ನೋಡದೆ ಮಕ್ಕಳ ಜೀವನದ ಆಶಾಕಿರಣವಾಗಿ ಆರೈಕೆ ಮತ್ತು ಪುನರ್ವಸತಿ ಪ್ರಕ್ರಿಯೆಗಳನ್ನು ರೂಪಿಸಬೇಕು. ಈ ನಿಟ್ಟಿನಲ್ಲಿ ಇಂತಹ ತರಬೇತಿ ಕಾರ್ಯಕ್ರಮಗಳು ಸ್ಪಷ್ಟ ಮಾರ್ಗದರ್ಶನ ನೀಡಲಿದೆ. ಮಕ್ಕಳ ಸಮಸ್ಯೆಗಳನ್ನು ನೋಡುವ ಮತ್ತು ಅವರ ಜೊತೆ ವ್ಯವಹರಿಸುವ ಮನೋಭಾವ ಬದಲಾಗಬೇಕು. ಮಕ್ಕಳಿಗೆ ಸಂಬಂಧಿಸಿದ ಮನೋವೈಜ್ಞಾನಿಕ ಪುಸ್ತಕಗಳನ್ನು ಹೆಚ್ಚು ಓದಿದಾಗ ಮನೋಭಾವನೆಯಲ್ಲಿ ಬದಲಾವಣೆ ತರಲು ಸಾಧ್ಯ ಎಂದ ಅವರು ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಲು ಕಿವಿಮಾತು ಹೇಳಿದರು.

ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನಾ ನಿರ್ದೇಶಕಿ ಹಲಿಮಾ ಮಾತನಾಡಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ಬಾಲನ್ಯಾಯ ಕಾನೂನಿನ ಬಗ್ಗೆ ಸರಿಯಾದ ಮಾಹಿತಿ ಇರಬೇಕು. ಮಕ್ಕಳಿಗೆ ಸಂಬಂಧಿಸಿದ ದೂರುಗಳನ್ನು ಬರೆಯುವಾಗ ಸ್ಪಷ್ಟತೆ ಇರಬೇಕು. ತಮ್ಮಲ್ಲಿಗೆ ಬರುವ ಮಕ್ಕಳು ಇನ್ಯಾರದೊ ಎಂದು ತಾತ್ಸಾರ ಮಾಡದೆ ಆ ಜಾಗದಲ್ಲಿ ತಮ್ಮದೇ ಮಕ್ಕಳಿದ್ದಾಗ ಯಾವ ರೀತಿ ಪ್ರೀತಿ, ಕಾಳಜಿ ತೋರುತ್ತೇವೆಯೋ ಅದೇ ರೀತಿ ಸಂವೇದನೆ ತೋರಬೇಕು ಎಂದ ಅವರು, ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಡಿ.ವೈ.ಎಸ್.ಪಿ ಪ್ರಭು ಡಿ.ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅನುರಾಧಾ ಹಾದಿಮನಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜೂಹಿ ದಾಮೋದರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಭಾನುಮತಿ, ಮಕ್ಕಳ ರಕ್ಷಣಾ ಘಟಕದ ನಾಗರತ್ನ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...