ಉಡುಪಿ | ಶೋಷಿತ ಸಮಾಜದ ಪ್ರತಿಭೆಗಳಿಗೆ ಸರಕಾರ, ಸಮಾಜದ ಪ್ರೋತ್ಸಾಹ ಅಗತ್ಯ : ಡಾ.ವಿಜಯ ಬಲ್ಲಾಳ್

Date:

ಪ್ರತಿಭೆಗೆ ಯಾವುದೇ ತಾರತಮ್ಯವಿಲ್ಲ. ಕಡು ಬಡವನಲ್ಲೂ ಪ್ರತಿಭೆ ಇರುತ್ತದೆ. ಸಮಾಜದ ಶೋಷಿತ ವರ್ಗಗಳ ಪ್ರತಿಭೆಗಳಿಗೆ ಸರಕಾರ, ಇಲಾಖೆ ಹಾಗೂ ಸಮಾಜದ ಪ್ರೋತ್ಸಾಹ ಅತೀ ಅಗತ್ಯ ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ಎನ್. ಬಿ.ವಿಜಯ ಬಲ್ಲಾಳ್ ಹೇಳಿದರು.

ಅವರು ಶನಿವಾರ ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಹಮ್ಮಿಕೊಂಡ ಕಲಾ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಶೋಷಿತ ವರ್ಗಗಳಲ್ಲಿ ಇಂದು ವೈದ್ಯರು, ಇಂಜೀನಿಯರ್ ಸೇರಿದಂತೆ ಉನ್ನತ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಈ ಮೂಲಕ ಅಂಬೇಡ್ಕರ್ ಅವರ ಕನಸು ನನಸಾಗುತ್ತಿದೆ ಎಂದ ಅವರು, ಭಾರತೀಯ ಜಾನಪದ, ಸಾಂಸ್ಕೃತಿಕ ಕಲೆಗಳು ಅತ್ಯಂತ ಪ್ರಭಾವಶಾಲಿಯಾಗಿವೆ. ಈ ಪ್ರತಿಭೆಗಳಿಗೆ ಸೂಕ್ತ ಪ್ರೋತ್ಸಾಹ ಹಾಗೂ ವೇದಿಕೆ ನೀಡಬೇಕು ಎಂದು ಅಭಿಪ್ರಾಯ ಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು ಮಾತನಾಡಿ, ಕರಾವಳಿ ಜಿಲ್ಲೆಗಳ ಜಾನಪದ ಕಲೆಗಳು ಅತ್ಯಂತ ವೈಶಿಷ್ಟ್ಯ ಪೂರ್ಣವಾಗಿವೆ. ಅದರಲ್ಲೂ ಕೊರಗ ಸಮಾಜ ಅತೀ ಹಿಂದುಳಿದಿದ್ದು, ಅವರ ಸಂಪ್ರದಾಯಗಳು, ಜಾನಪದ ಕಲೆಗಳ ಬಗ್ಗೆ ಹೊರ ಜಗತ್ತಿಗೆ ತಿಳಿದಿರುವುದು ಅತ್ಯಲ್ಪ. ಈ ನಿಟ್ಟಿನಲ್ಲಿ ಅವರ ಜಾನಪದ ಕಲೆಗಳ ಬಗ್ಗೆ ತರಬೇತಿ ನೀಡಿ ಯುವ ಪೀಳಿಗೆಗೆ ದಾಟಿಸುವ ಮಹಾತ್ಕಾರ್ಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿರುವುದು ಅಭಿನಂದನೀಯ. ಇದರಿಂದ ಕೊರಗ ಸಮುದಾಯದ ನಶಿಸುತ್ತಿರುವ ಜಾನಪದ ಕಲೆಗಳನ್ನು ಉಳಿಸಿದಂತೆಯೂ ಆಗುತ್ತದೆ ಎಂದರು.

ಉಡುಪಿ ಜಿಲ್ಲಾ ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಮಾತನಾಡಿ, ತರಬೇತಿ ನಮ್ಮ ವ್ಯಕ್ತಿತ್ವವನ್ನು ಬೆಳೆಸುತ್ತದೆ. ಜಾನಪದ ಕಲೆ ಅಂದರೆ ಬರೀ ಕುಣಿಯುವುದಲ್ಲ, ಇದು ನಮ್ಮ ವ್ಯಕ್ತಿತ್ವವನ್ನು ಬದಲಾಯಿಸಬಲ್ಲದು. ಕಲೆ ನಮ್ಮ ಸಂಸ್ಕೃತಿಯನ್ನು ಕಲಿಸುತ್ತದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕ ಮಾತುಗಳನ್ನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿನಿಯರಿಗೆ ಕಲಾ ತರಬೇತಿ ನೀಡಲು ಜಿಲ್ಲೆಯ 2 ಹಾಸ್ಟೇಲುಗಳ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ಕಳೆದ ಜುಲೈ ತಿಂಗಳಿಂದ ತರಬೇತಿ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ ಕಲಾಗುರುಗಳಾದ ರಮೇಶ್ ಕಲ್ಮಾಡಿ ಹಾಗೂ ಗಣೇಶ್ ಬಾರ್ಕೂರು ಅವರನ್ನು ಗೌರವಿಸಲಾಯಿತು. ತರಬೇತಿಯಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಯರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಶಿಬಿರದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಯರು ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು.

ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ನಾರಾಯಣ ಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕಿ ವಿಜಯಲಕ್ಷ್ಮಿ ದಿನ್ನಿ, ಕೊರಗ ಸಮಾಜದ ಮುಖಂಡ ಗಣೇಶ್ ಕೊರಗ ಉಪಸ್ಥಿತರಿದ್ದರು. ಉಪನ್ಯಾಸಕ ರಾಮಾಂಜಿ ನಮ್ಮಭೂಮಿ ನಿರೂಪಿಸಿ, ಬನ್ನಂಜೆ ವಸತಿಶಾಲೆಯ ಮೇಲ್ವಿಚಾರಕಿ ಸುಚಿತ್ರಾ ವಂದಿಸಿದರು.

ಕಾರ್ಯಕ್ರಮದಲ್ಲಿ ಕಲಾ ತರಬೇತಿ ಪಡೆದ ವಿದ್ಯಾರ್ಥಿನಿಯರಿಂದ ಉತ್ತರ ಕನ್ನಡದ ಹಾಲಕ್ಕಿ ಕುಣಿತ, ಕೋಲಾಟ, ಕೊರಗ ಸಮುದಾಯದ ಡೊಳ್ಳು ಕುಣಿತ, ಕಂಗೀಲು ನೃತ್ಯ ಸಭಿಕರ ಮನಸೂರೆಗೊಂಡವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...