ಬೀದರ್‌ | 137 ಗ್ರಾಮಗಳ ಕುಡಿಯುವ ನೀರು ಪೂರೈಕೆಗೆ ಸಂಪುಟ ಅಸ್ತು; ಯೋಜನೆಗೆ ರಾಜ್ಯ ಸರ್ಕಾರದಿಂದ 184 ಕೋಟಿ : ಈಶ್ವರ ಖಂಡ್ರೆ

Date:

ಜಲ ಜೀವನ ಮಿಷನ್ ಅಡಿ ರಾಜ್ಯ ಸರ್ಕಾರದ ಅನುದಾನವನ್ನೂ ಸಂಯೋಜಿಸಿ ಒಟ್ಟು 330 ಕೋಟಿ ರೂ. ವೆಚ್ಚದಲ್ಲಿ ಬೀದರ್ ತಾಲೂಕಿನ ಬಗದಲ್ ಮತ್ತು ಇತರೆ 104‌  ಹಾಗೂ ಚಿಟಗುಪ್ಪ ತಾಲೂಕಿನ ಮನ್ನಾಎಖೇಳಿ ಮತ್ತು ಸುತ್ತಲಿನ 32 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಪೂರೈಸುವ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
“ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಗುರುವಾರ ಸಂಜೆ ನಡೆದ ಸಂಪುಟ ಸಭೆಯಲ್ಲಿ ಬೀದರ್ ತಾಲೂಕಿನ 105 ಮತ್ತು ಚಿಟಗುಪ್ಪ ತಾಲೂಕಿನ 33 ಸೇರಿ ಒಟ್ಟು 137 ಜನವಸತಿಗಳಿಗೆ ಕೊಳವೆ ನೀರು ಸರಬರಾಜು ಯೋಜನೆ/ ಕಿರು ನೀರು ಸರಬರಾಜು ಯೋಜನೆ ಅಡಿಯಲ್ಲಿ ತೆರೆದ ಬಾವಿ/ ಕೊಳವೆ ಬಾವಿಯನ್ನು ಜಲಮೂಲವನ್ನಾಗಿ ಪರಿಗಣಿಸಿ ನೀರು ಪೂರೈಕೆ ಮಾಡಲು ಅನುಮೋದನೆ ನೀಡಲಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
137 ಗ್ರಾಮಗಳ ಕುಡಿಯುವ ನೀರು ಯೋಜನೆಯ ಬಂಡವಾಳ ವೆಚ್ಚ 291.20 ಕೋಟಿ ರೂ. ಮತ್ತು ಸಗಟು ವೆಚ್ಚ 38.80 ಕೋಟಿ ರೂ. ಸೇರಿ ಒಟ್ಟು ಮೊತ್ತ 330 ಕೋಟಿ ರೂ. ಆಗಿದೆ. ಈ ಪೈಕಿ ಕೇಂದ್ರ ಸರ್ಕಾರ ಬಂಡವಾಳ ವೆಚ್ಚದ ಶೇ.50ರಷ್ಟು ಅಂದರೆ 145 ಕೋಟಿ ರೂ. ಮಾತ್ರ ಒದಗಿಸುತ್ತದೆ. ರಾಜ್ಯ ಸರ್ಕಾರ ಬಂಡವಾಳ ವೆಚ್ಚದ ಶೇ.50ರಷ್ಟು ಅಂದರೆ 145 ಕೋಟಿ ರೂ. ಜೊತೆಗೆ ಸಗಟು ನೀರಿನ ವೆಚ್ಚವಾದ 38.80 ಕೋಟಿ ರೂ. ಸೇರಿ ಒಟ್ಟು 184.40 ಕೋಟಿ ರೂ. ಭರಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಮಾಹಿತಿ ನೀಡಿದ್ದಾರೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...