ಉಡುಪಿ | RSS ಬೆಳೆಯಲು ಕಾಂಗ್ರೆಸ್‌ ಕಾರ್ಯಕರ್ತರೆ ಕಾರಣ : ಮಂಜುನಾಥ್‌ ಗಿಳಿಯಾರ್‌

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಇಂದು ಆರ್‌ಎಸ್‌ಎಸ್‌ ವಿರುದ್ಧ ಪ್ರತಿಭಟನಾ ಸಭೆ ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ದಸಂಸ ಅಂಬೇಡ್ಕರ್ ಉಡುಪಿ ಜಿಲ್ಲಾ ಸಂಚಾಲಕ ಅಡ್ವಕೇಟ್‌ ಮಂಜುನಾಥ್‌ ಗಿಳಿಯಾರ್‌, ದೇಶದಲ್ಲಿ ಆರ್‌ಎಸ್‌ಎಸ್‌ ಬೆಳೆಯಲು ಕಾರಣವೇ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು. ಕಾಂಗ್ರೆಸ್‌ ಆಡಳಿತದಲ್ಲಿದ್ದರೂ ಆರ್‌ಎಸ್‌ಎಸ್‌ ನಿಷೇಧಿಸಲು ಸಾಧ್ಯವಾಗಲಿಲ್ಲ. ಇದರ ಹೊಣೆಗಾರರು ಸ್ವತಃ ಕಾಂಗ್ರೆಸ್‌ ನಾಯಕರೇ ಎಂದು ಹೇಳಿದರು.

ಆರ್‌ಎಸ್‌ಎಸ್‌ ಸಮಾನತೆಯ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಮೀಸಲಾತಿ ವ್ಯವಸ್ಥೆ, ಮಹಿಳೆಯರಿಗೆ ಸಮಾನ ಹಕ್ಕು, ಸಂವಿಧಾನದ ಮೌಲ್ಯಗಳನ್ನೂ ವಿರೋಧಿಸುತ್ತದೆ. ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಯನ್ನೂ ಅವರು ಸ್ವೀಕರಿಸುವುದಿಲ್ಲ. ದೇಶದಲ್ಲಿ ದ್ವೇಷದ ಬೀಜ ಬಿತ್ತುವ ಕೆಲಸವನ್ನು ಆರ್‌ಎಸ್‌ಎಸ್‌ ನಿರಂತರವಾಗಿ ಮಾಡುತ್ತಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ಸತ್ಯ ಎಂದು ನಂಬಿಸುವ ಕೆಲಸವೇ ಅವರ ನೂರು ವರ್ಷದ ಸಾಧನೆ. ದಲಿತರ ದೇವಾಲಯ ಪ್ರವೇಶ ಹಕ್ಕು, ಮಹಿಳಾ ಸುರಕ್ಷತೆ, ಅತ್ಯಾಚಾರ ಪ್ರಕರಣಗಳ ಕುರಿತು ಅವರು ಧ್ವನಿ ಎತ್ತುವುದೇ ಇಲ್ಲ. ಕೆಲವೇ ಜನರ ಕೈಯಲ್ಲಿ ಸಂಪತ್ತು ಕೇಂದ್ರೀಕೃತವಾಗಿರುವ ಕುರಿತು ಆರ್‌ಎಸ್‌ಎಸ್‌ ಯಾವುದೇ ಮಾತು ಆಡುತ್ತಿಲ್ಲ ಎಂದು ಮಂಜುನಾಥ್‌ ಗಿಳಿಯಾರ್‌ ವಾಗ್ದಾಳಿ ನಡೆಸಿದರು.

ಹಿಂದು–ಮುಸ್ಲಿಂ ದ್ವೇಷದ ಮೂಲಕ ರಾಜಕೀಯ ನೆಲೆ ಗಟ್ಟಿಗೊಳಿಸಿರುವ ಆರ್‌ಎಸ್‌ಎಸ್‌ ನ ನಿಲುವು ರಾಷ್ಟ್ರದ ಏಕತೆಯ ವಿರುದ್ಧದಾಗಿದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...