ಯಾದಗಿರಿ | ಹೊರಗುತ್ತಿಗೆ ನೇಮಕಾತಿ ನಿಯಮದ ಆದೇಶ ತಿದ್ದುಪಡಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

Date:

ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ಅಳವಡಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ ನೇಮಕಾತಿಗೆ ಪಾಲಿಸಬೇಕಾದ ನಿಯಮಗಳನ್ನು ಮಾರ್ಪಡಿಸುವಂತೆ ಒತ್ತಾಯಿಸಿ ಯಾದಗಿರಿಯಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಯಾದಗಿರಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ದಲಿತ ಮುಖಂಡರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇರಕರ್, 2024ರ ಮೇ 20ರಂದು ರಾಜ್ಯ ಸರ್ಕಾರದ ಸುತ್ತೋಲೆ ಹೊರಡಿಸಿದ್ದು, ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ನಿಯಮಗಳನ್ನು ಅನ್ವಯಿಸಿ ನೇಮಕ ಪ್ರಕ್ರಿಯೆ ನಡೆಸಲು ಆದೇಶ ನೀಡಿದೆ. ಇದನ್ನು ದಲಿತ ಸಂಘರ್ಷ ಸಮಿತಿಯು ಸ್ವಾಗತಿಸುತ್ತದೆ. ಆದರೆ, ಸುತ್ತೋಲೆಯ 1ನೇ ಮತ್ತು 6ನೇ ಷರತ್ತುಗಳು ಈ ಆದೇಶದ ಸದುದ್ದೇಶದ ಆಶಯಗಳಿಗೇ ವಿರುದ್ಧವಾಗಿವೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“1ನೇ ಷರತ್ತಿನಲ್ಲಿ ಹೊರಗುತ್ತಿಗೆ ಮೀಸಲಾತಿ ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ ಎಂದಿದೆ. ಇದು ಮೀಸಲಾತಿ ವಿರೋಧಿಗಳಿಗೆ ಅನುಕೂಲಕರವಾಗಿದ್ದು, ಅದನ್ನು ರದ್ದುಪಡಿಸಬೇಕು. 6ನೇ ಷರತ್ತಿನಲ್ಲಿ ‘ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು” ಎಂದಿರುವುದು ತುಂಬಾ ಅವೈಜ್ಞಾನಿಕ ಮತ್ತು ದುರುದ್ದೇಶಪೂರಿತವಾಗಿದೆ” ಎಂದು ತಿಳಿಸಿದರು.

ಯಾದಗಿರಿ 19

“ಮೀಸಲಾತಿಯನ್ನು ವಂಚಿಸಿಲು ಸದಾ ಸಿದ್ದ ಇರುವವರಿಗೆ ಈ ನಿಬಂಧನೆ ಸಹಕಾರಿ ಆಗಲಿದೆ. 20ಕ್ಕೂ ಹೆಚ್ಚಿನ ಸಂಖ್ಯೆ ನೇಮಕಾತಿಗಳಿದ್ದಾಗ ಮಾತ್ರ ಮೀಸಲಾತಿ ನೀತಿ ಅನ್ವಯಿಸುತ್ತದೆ ಎಂದು ಸರ್ಕಾರವೇ ನಿರ್ಬಂಧ ಒಡ್ಡಿದರೆ, ಎಲ್ಲ ನೇಮಕಾತಿ ಉದ್ಯೋಗಗಳನ್ನು 20ರ ಒಳಗೇ ನಿಗದಿ ಮಾಡುತ್ತಾ ಹೋಗುವ ಮೀಸಲಾತಿ ವಂಚಕರ ಚಾಳಿಗೆ ಇದು ರತ್ನಗಂಬಳಿ ಹಾಸಿ ರಹದಾರಿ ಕಲ್ಪಿಸಿ ಕೊಟ್ಟಂತಾಗುತ್ತದೆ” ಎಂದು ಮರೆಪ್ಪ ಚಟ್ಟೇರಕರ್ ತಿಳಿಸಿದರು.

ಇದುವರೆಗೆ ನಡೆದಿರುವ ನೇಮಕಾತಿ ಪ್ರಕ್ರಿಯೆಗಳನ್ನು ಅವಲೋಕನ ಮಾಡಿದರೆ ಜಾತಿವಾದಿ ಅಧಿಕಾರಿಗಳ ಮೀಸಲಾತಿ ವಿರೋಧಿ ದುರಾಡಳಿತಕ್ಕೆ ಸಾಕಷ್ಟು ಪುರಾವೆಗಳು ಸಿಗುತ್ತವೆ. ಸಮಾಜದಲ್ಲಿ ಮೀಸಲಾತಿ ಬಗ್ಗೆ ಅಸಹನ ತುಂಬಿ ತುಳುಕುತ್ತಿರುವ ಹೊತ್ತಿನಲ್ಲಿ, ಇಂತಹ ಷರತ್ತು ಬದ್ಧ ಆದೇಶವು, ನೇಮಕಾತಿ ಮಾಡುವ ವೇಳೆ ಪಕ್ಷಪಾತ ಮಾಡುವ ಜಾತಿವಾದಿ ಅಧಿಕಾರಿಗಳಿಗೆ ಕಾನೂನು ಬದ್ಧ ಪ್ರೋತ್ಸಾಹ ನೀಡಿದಂತಾಗುವುದರಲ್ಲಿ ಸಂದೇಹವೇ ಇಲ್ಲ. ಹಾಗಾಗಿ ಸದರಿ 1 ಮತ್ತು 6 ನೇ ಷರತ್ತನ್ನು ರದ್ದು ಪಡಿಸಲು ಸಾಮಾಜಿಕ ನ್ಯಾಯಕ್ಕೆ ಬದ್ಧತೆ ಹೊಂದಿರುವ ತಮ್ಮ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ದಸಂಸ ಹೋರಾಟಗಾರರು ಆಗ್ರಹಿಸಿದರು.

ಹುದ್ದೆಗಳ ಸಂಖ್ಯೆ ಎಷ್ಟೇ ಇರಲಿ ಮತ್ತು ಎಷ್ಟೇ ಅವಧಿಯದ್ದಾಗಿರಲಿ ಅಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ “ರೋಸ್ಟರ್ ನಿಯಮಗಳ ಅನುಸಾರವಾಗಿ ನೇಮಕಾತಿ ಪ್ರಕ್ರಿಯೆಗಳು ಕಡ್ಡಾಯದಾಗಿ ಇರಲೇಬೇಕು ಎಂದು ಸರ್ಕಾರ ಸದರಿ ಆದೇಶವನ್ನು ಮಾರ್ಪಾಡು ಮಾಡಿ, ಮರು ಸುತ್ತೋಲೆ ಹೊರಡಿಸಬೇಕು. ಒಂದು ವೇಳೆ ಸರ್ಕಾರ ಈ ಸಂಬಂಧವಾಗಿ ಯಾವುದೇ ತುರ್ತು ಕ್ರಮ ಕೈಗೊಳ್ಳದೇ ಇದ್ದಲ್ಲಿ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದೆಂದು ಎಂದು ದಸಂಸ ಎಚ್ಚರಿಕೆ ನೀಡಿದೆ.

ಇದನ್ನು ಓದಿದ್ದೀರಾ? ಮಂಡ್ಯ | ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತಸಂಘದಿಂದ ಪ್ರತಿಭಟನೆ

ಪ್ರತಿಭಟನೆಯಲ್ಲಿ ದಸಂಸ ಮುಖಂಡರಾದ ಮಾನಪ್ಪ ಕಟ್ಟಿಮನಿ, ಬಸಪ್ಪ, ಗೋಪಾಲ, ಬಸವರಾಜ ಗುಡಿಮನಿ,
ಭೀಮರಾಯಿ.ಟಿ.ಸೈದಾಪೂರ, ಹೊನ್ನಪ್ಪ ನಾಟೇಕಾರ, ಮಲ್ಲಿನಾಥ ಸುಂಗಲಕರ್, ಲಾಲಪ್ಪ ತಲಾರಿ, ಮರಪ್ಪ,ಬಿ.ಜಾಲಿ ಬೆಂಚಿ, ರಾಜು ತಿಪ್ಪನಳ್ಳಿ, ನಿಂಗಣ್ಣ ತಿಪ್ಪನಳ್ಳಿ, ಶ್ರೀಕಾಂತ ತಲಾರಿ, ಮಹದೇವಪ್ಪ ಬದ್ದೇಪಲ್ಲಿ, ಪರಶುರಾಮ ಒಡೆಯರ್, ಹಣಮಂತರಾಯ ಮಿಲ್ಟ್ರಿ, ತಿಮ್ಮಣ್ಣ ರಾಯಚೂಕರ್, ಸಂಪತೆ ಚಿನ್ನಾಕಾರ,ವಸಂತ ಸುಂಗಲಕರ್, ಮರಿಲಿಂಗಕುರ ಕುಂಭಳ, ಅಕ್ಷಯಕುಮಾರ್ ಚಟ್ಟೇರಕರ್, ಗೌತಮ ಅರಕೇರಿ, ಮಲ್ಲಪ್ಪ ಕೆ.ಶಹಾಪೂರ್, ನರಸಪ್ಪ ಗಾಜರಕೋಟಿ, ಭೀಮರಾಯ ಸುಂಗಲಕರ್, ಶ್ರೀಕಾಂತ ತೆಳಗೇರಿ, ಮಲ್ಲು ಜಿನಕೇರಿ, ಶಿವು ಖಾನಾಪೂರ, ಹಣಮಂತ ಗಾಜರಕೋಟ, ಶರಣಪ್ಪ ಗಾಜರಕೋಟ, ಸಾಬಣ್ಣ, ಸೈದಪ್ಪ, ಮರಲಿಂಗಪ್ಪ,ವಿಶಾಲ್,  ನಾಗರಾಜ್, ಆಂಜನೇಯ, ಶಿವಕುಮಾರ್, ಬಸ್ಸು ಬೋಳಾರಿ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...