ಹೆಸರಾಂತ ಸಾಹಿತಿ ಡಾ. ಡಿ ವಿ ಗುಂಡಪ್ಪ(ಡಿವಿಜಿ)ನವರ ಜನಪ್ರಿಯ ಪದ್ಯ ಪುಸ್ತಕ ʼಮಂಕುತಿಮ್ಮನ ಕಗ್ಗʼ. ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್(ವಿ ರವಿ), ಡಿವಿಜಿಯವರ ʼಮಂಕುತಿಮ್ಮನ ಕಗ್ಗʼವನ್ನು ಚಿತ್ರದ ಮೂಲಕ ತೆರೆಗೆ ತಂದಿದ್ದಾರೆ.
ಎನ್ ಎ ಶಿವಕುಮಾರ್ ಅವರು ನಿರ್ಮಿಸಿರುವ ಹಾಗೂ ಮೀನಾ ಶಿವಕುಮಾರ್ ಅವರ ನಿರ್ಮಾಣವಿರುವ ಈ ಚಿತ್ರ ಮೇ 23ರಂದು ಬಿಡುಗಡೆಯಾಗುತ್ತಿದೆ.
ಈ ಚಿತ್ರದಲ್ಲಿ ಡಿವಿಜಿಯವರ ಬಾಲ್ಯದ ದಿನಗಳ ಬಗ್ಗೆ ತೋರಿಸಲಾಗಿದೆ. ತಿಮ್ಮಣ್ಣ ಮೇಷ್ಟ್ರು ಪಾತ್ರದಲ್ಲಿ ಹಿರಿಯ ನಟ ರಾಮಕೃಷ್ಣ, ಬಾಲಕ ಸೋಮಿ(ಡಿವಿಜಿ)ಯವರ ಪಾತ್ರದಲ್ಲಿ ಮಾಸ್ಟರ್ ರಣವೀರ್, ಅಲಮೇಲು ಪಾತ್ರದಲ್ಲಿ ಭವ್ಯಶ್ರೀ ರೈ, ವೆಂಕರಮಣಯ್ಯ ಪಾತ್ರದಲ್ಲಿ ರವಿನಾರಾಯಣ್ ಹಾಗೂ ಅಜ್ಜಿಯ ಪಾತ್ರದಲ್ಲಿ ಲಕ್ಷ್ಮೀ ನಾಡಗೌಡ ಅಭಿನಯಿಸಿದ್ದಾರೆ. ಸಾಯಿಪ್ರಕಾಶ್, ನರಸೇಗೌಡ, ಶ್ರೀನಿವಾಸ್ ಕೆಮ್ತೂರ್ ಸೇರಿದಂತೆ ಮುಂತಾದವರು ತಾರಾ ಬಳಗದಲ್ಲಿದ್ದಾರೆ.

ಇದನ್ನೂ ಓದಿದ್ದೀರಾ? ಸಂವಿಧಾನವೇ ಸುಪ್ರೀಂ: ಧನಕರ್‌ಗೆ ಸಿಜೆಐ ಪವರ್‌ಫುಲ್ ಕ್ಲಾಸ್
ಕಥೆ ವಿಸ್ತರಣೆ, ಚಿತ್ರಕಥೆ ಹಾಗೂ ಸಂಭಾಷಣೆ ನಿರ್ದೇಶಕ ರಾಜ ರವಿಶಂಕರ್ ಅವರದು. ಎ ಟಿ ರವೀಶ್ ಅವರ ಸಂಗೀತ ನಿರ್ದೇಶನ, ಸಿ ನಾರಾಯಣ್ ಅವರ ಛಾಯಾಗ್ರಹಣ ಹಾಗೂ ಆರ್ ಡಿ ರವಿ ಸಂಕಲನ(ದೊರೈರಾಜ್) ಈ ಚಿತ್ರಕ್ಕಿದೆ.





