ವಿಜಯಪುರ ಬಂದ್ ವೇಳೆ ಹೂ ವ್ಯಾಪಾರಿ ಉಮಾ ಸಿಂಗಾಡೆಯವರಿಗೆ ಆಗಿದ್ದ ನಷ್ಟ ಭರಿಸುವಲ್ಲಿ ಡಿವಿಪಿ ಯಶಸ್ವಿ

Date:

ದಲಿತ, ಅಹಿಂದ ಸಂಘಟನೆಗಳು ಸೋಮವಾರ ಕರೆ ನೀಡಿದ್ದ ವಿಜಯಪುರ ಬಂದ್ ವೇಳೆ ಹೂ ಮಾರಾಟಕ್ಕೆಂದು ಬಂದಿದ್ದ ಹೂ ವ್ಯಾಪಾರಿ ಉಮಾ ಸಿಂಗಾಡೆಯವರಿಗೆ ಆಗಿದ್ದ ಹಾನಿಯನ್ನು ಭರಿಸುವಲ್ಲಿ ದಲಿತ ವಿದ್ಯಾರ್ಥಿ ಪರಿಷತ್(ಡಿವಿಪಿ) ಯಶಸ್ವಿಯಾಗಿದೆ.

ವಿಜಯಪುರ ನಗರದ ಲಾಲ್ ಬಹದ್ದೂರ್‌ ಶಾಸ್ತ್ರಿ ಮಾರುಕಟ್ಟೆಯ ಬಳಿ ಮಹಿಳೆಯೊಬ್ಬರು ಮಾರಾಟಕ್ಕೆ ತಂದಿದ್ದ ಹೂವನ್ನು ರಸ್ತೆ ಮೇಲೆ ಚೆಲ್ಲುವ ಮೂಲಕ ಪ್ರತಿಭಟನಾಕಾರರು ಅಟ್ಟಹಾಸ ಮೆರೆದಿದ್ದರು. ಹೂ ರಸ್ತೆ ಪಾಲಾಗಿದ್ದರಿಂದ ಆ ಮಹಿಳೆ ಕಣ್ಣೀರಿಟ್ಟು ಅಸಹಾಯಕತೆ ವ್ಯಕ್ತಪಡಿಸಿದ್ದರು.

ಮಹಿಳೆಗೆ ನಷ್ಟವಾದ ಹಿನ್ನೆಲೆಯಲ್ಲಿ ಸ್ಪಂದಿಸಿದ ದಲಿತ ಮುಖಂಡರು ಮಂಗಳವಾರ ಸಂತ್ರಸ್ತೆಯ ಬಳಿ ಹೋಗಿ ಆಗಿರುವ ಅಚಾತುರ್ಯದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಉಂಟಾಗಿದ್ದ ನಷ್ಟವನ್ನು ಭರಿಸಿದ್ದಾರೆ. ಜತೆಗೆ ಬೀದಿಬದಿ ಹೂ ಮಾರುತ್ತಿದ್ದ ಸಹೋದರಿಯ ಹೂಗಳನ್ನು ಬೀದಿಗೆ ಚೆಲ್ಲಿ ಅವರ ಆ ದಿನದ ಬಂಡವಾಳ ನಾಶಮಾಡಿದ್ದ ಮಹಾದೇವ ಕಾಂಬಳೆ ಅವರನ್ನೂ ಕೂಡಾ ಜತೆಯಲ್ಲಿ ಕರೆದುಕೊಂಡು ಬಂದು ಕ್ಷಮೆ ಕೇಳುವಂತೆ ದಲಿತ ವಿದ್ಯಾರ್ಥಿ ಪರಿಷತ್ ಕ್ರಮ ಕೈಗೊಂಡಿದೆ. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಗೆ ನಗದು ಸಹಾಯ ಮಾಡಿ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಶ್ರೀನಾಥ ಪೂಜಾರಿ, “ಮಹಿಳೆಗೆ
ಆದ ನಷ್ಟವನ್ನು ನಾವೇ ಭರಿಸಿದ್ದೇವೆ. ಅವರ ದಿನದ ವ್ಯಾಪಾರಕ್ಕೆ ಧಕ್ಕೆಯಾಗದಂತೆ ನೊಡಿಕೊಳ್ಳುವ ಜವಾಬ್ದಾರಿ ನಮ್ಮದು. ನೀವು ನಗುಮೊಗದೊಂದಿಗೆ ವ್ಯಾಪಾರ ಮಾಡಿರಿ” ಎಂದು ಧೈರ್ಯ ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸರ್ಕಾರಿ ಶಾಲೆ ಶಿಕ್ಷಕಿ ನಿವೃತ್ತಿ; ಅಂಬೇಡ್ಕರ್ ಫೋಟೋ ನೀಡಿ, ಹಳೆ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ

ಕ್ಷಮೆ ಕೇಳಿದ ಕಾಂಬಳೆ : “ಬಂದ್ ವೇಳೆ ಆವೇಶದಲ್ಲಿದ್ದ ನಾನು ಹಾಗೆ ಮಾಡಬಾರದಿತ್ತು. ಮಹಿಳೆಯ ಹೂ ಚೆಲ್ಲಿದ್ದು ನಂತರ ನನಗೆ ತುಂಬಾ ನೋವಾಯಿತು. ಹಾಗಾಗಿ ನಾನು ಸಹೋದರಿಯ ಕ್ಷಮೆ ಕೇಳುತ್ತೇನೆ” ಎಂದು ಹೂ ಚೆಲ್ಲಿದ್ದ ಮಹಾದೇವ ಕಾಂಬಳೆ ಕ್ಷಮೆ ಯಾಚಿಸಿದರು.

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ನಾಗವರ್ಬಣ್ಣ, ಜಿಲ್ಲಾ ಸಂಚಾಲಕ ಚನ್ನು ಕಟ್ಟಿಮನಿ, ಮಾನವ ಬಂದತ್ವ ವೇದಿಕೆ ಜಿಲ್ಲಾ ಮುಖಂಡ ಪ್ರಭುಗೌಡ ಪಾಟೀಲ, ದಲಿತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯಕುಮಾರ ಅಜಮನಿ, ಯಮನಪ್ಪ ಮಾದರ, ಜಕ್ಕಪ್ಪ ಯಡವೆ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...