ಮಂಗಳೂರು ಕಮಿಷನರ್ ಅನುಪಮ್ ಅಗ್ರವಾಲ್ ಹೆದ್ದಾರಿಯ ಗುತ್ತಿಗೆದಾರರೇ: ನಿತಿನ್ ಕುತ್ತಾರ್ ಪ್ರಶ್ನೆ

Date:

ಮಂಗಳೂರಿನಲ್ಲಿ ಪ್ರತಿಭಟನೆಗಳಿಗೆ ಅನುಮತಿ ನೀಡಲು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಯಾಕೆ ಹೆದರುತ್ತಿದ್ದಾರೆ? ಅಗ್ರವಾಲ್ ಏನಾದರೂ ಹೆದ್ದಾರಿಯ ಗುತ್ತಿಗೆ ತೆಗೆದು ಭ್ರಷ್ಟಾಚಾರ ಮಾಡಿದ್ದಾರೆಯೇ ಎಂದು ಡಿವೈಎಫ್ಐ ಉಳ್ಳಾಲ ತಾಲೂಕು ಅಧ್ಯಕ್ಷ, ನ್ಯಾಯವಾದಿ ನಿತಿನ್ ಕುತ್ತಾರ್ ಪ್ರಶ್ನಿಸಿದ್ದಾರೆ.

ಮಂಗಳೂರು ನಗರ ಕಮಿಷನರ್ ಅನುಪಮ್ ಅಗ್ರವಾಲ್ ವರ್ಗಾವಣೆಗೆ ಆಗ್ರಹಿಸಿ ಹರೇಕಳ ಗ್ರಾಮಚಾವಡಿಯಲ್ಲಿ ಸಿಪಿಐಎಂ ಮತ್ತು ಡಿವೈಎಫ್ಐ ನೇತೃತ್ವದಲ್ಲಿ ಧರಣಿ ನಡೆಸಲಾಯಿತು. ಈ ಧರಣಿಯನ್ನು ಉದ್ದೇಶಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿ ನಿತಿನ್ ಕುತ್ತಾರ್ ಮಾತನಾಡಿದರು.

nitin kuthar

“ಅನುಪಮ್ ಅಗ್ರವಾಲರು ಯಾವ ಅಗ್ರಹಾರದಿಂದ ಬಂದಿದ್ದಾರೋ ತಿಳಿಯದು. ಆದರೆ ಅವರು ಮೊದಲು ನಮ್ಮ ಜಿಲ್ಲೆಯ ಎಡಪಂಥೀಯ ಚಳುವಳಿಗಳ ಬಗ್ಗೆ ಅರಿತುಕೊಳ್ಳಲಿ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಂಗಳೂರು | ಚೆಂಬುಗುಡ್ಡೆ ಘಟನೆ: ರಾತ್ರೋರಾತ್ರಿ ಶಾಸಕ ಯು ಟಿ ಖಾದರ್ ವಿರುದ್ಧ ಡಿವೈಎಫ್‌ಐ ಪ್ರತಿಭಟನೆ

ಇನ್ನು “ಬ್ರಿಟೀಷ್ ಅಧಿಕಾರಿ ಜನರಲ್ ಡಯರ್‌ನಂತೆ ವರ್ತಿಸುತ್ತಿರುವ ಅಗ್ರವಾಲರನ್ನು ಈ ಕೂಡಲೇ ವರ್ಗಾವಣೆ ಮಾಡದಿದ್ದರೆ ಜಿಲ್ಲೆಯಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು” ಎಂದು ನಿತಿನ್ ಕುತ್ತಾರ್ ಎಚ್ಚರಿಕೆ ನೀಡಿದರು.

ಇನ್ನು ಈ ಸಂದರ್ಭದಲ್ಲೇ ಮಾತನಾಡಿದ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿಕೆ ಇಮ್ತಿಯಾಝ್, “ಜನಪರವಾದ ಹೋರಾಟಕ್ಕೆ ಅನುಮತಿಯನ್ನು ನಿರಾಕರಿಸುತ್ತಿರುವ ಕಮಿಷನರ್ ಅಗ್ರವಾಲ್‌ ಅವರನ್ನು ಎತ್ತಂಗಡಿ ಮಾಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ” ಎಂದು ಎಚ್ಚರಿಸಿದರು.

nitin kuthar1

ಪ್ರತಿಭಟನೆಯಲ್ಲಿ ಸಿಪಿಐಎಂ ಮುಡಿಪು ವಲಯ ಕಾರ್ಯದರ್ಶಿ ರಫೀಕ್ ಹರೇಕಳ, ಹರೇಕಳ ಗ್ರಾಮ ಪಂಚಾಯತ್ ಸದಸ್ಯರಾದ ಅಶ್ರಫ್ ಹರೇಕಳ, ಕೆ.ಎಚ್ ಹಮೀದ್, ಉಮರಬ್ಬ ನ್ಯೂಪಡ್ಪು, ಡಿವೈಎಫ್ಐ ಮುಖಂಡರಾದ ರಝಾಕ್ ಮುಡಿಪು, ಬಶೀರ್ ಲಚ್ಚಿಲ್ ಮುಂತಾದವರು ಉಪಸ್ಥಿತರಿದ್ದರು. ಡಿವೈಎಫ್ಐ ಉಳ್ಳಾಲ ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ ಸ್ವಾಗತಿಸಿ ರಫೀಕ್ ಹರೇಕಳ ವಂದಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...