ಕಟ್ಟಡ ನಕ್ಷೆ ಮಂಜೂರಾತಿ ನೀಡಲು ಜುಲೈ 1ರಿಂದ ಇ-ಖಾತಾ ಕಡ್ಡಾಯ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

Date:

ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಇಒಡಿಬಿ-ಒಬಿಪಿಎಸ್ (EoDB-OBPS) ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್‌ಲೈನ್ ನಲ್ಲಿ ನೀಡಲಾಗುತ್ತಿದ್ದು, ಪಾಲಿಕೆಯ ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ ಇ-ಖಾತಾ ನೀಡಲಾಗುತ್ತಿದೆ. ಇಂತಹ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯವಿರುತ್ತದೆ. ಹಾಗಾಗಿ, ಕಟ್ಟಡ ನಕ್ಷೆ ಮಂಜೂರಾತಿ ನೀಡಲು 2025ರ ಜುಲೈ 1ರಿಂದ ಇ-ಖಾತಾ ಕಡ್ಡಾಯ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, “ಪಾಲಿಕೆಯ ನಗರ ಯೋಜನಾ ವಿಭಾಗದಿಂದ ನಕ್ಷೆ ಮಂಜೂರಾತಿ ನೀಡುತ್ತಿರುವ ಇಒಡಿಬಿ-ಒಬಿಪಿಎಸ್ ಆನ್‌ ಲೈನ್ ತಂತ್ರಾಂಶವನ್ನು ಪಾಲಿಕೆಯ ಕಂದಾಯ ವಿಭಾಗದಿಂದ ಇ-ಖಾತಾ ನೀಡುತ್ತಿರುವ ಇ-ಆಸ್ತಿ ತಂತ್ರಾಂಶದೊಂದಿಗೆ ಏಕೀಕರಣಗೊಳಿಸಲು ಕ್ರಮ ಜರುಗಿಸಲಾಗಿದೆ. ನಿವೇಶನ /ಸ್ವತ್ತಿನ ಕಂದಾಯ ದಾಖಲಾತಿಗಳ ಪರಿಶೀಲನಾ ತಂತ್ರಾಂಶದಲ್ಲಿ ಸ್ವಯಂಚಾಲಿತವಾಗಿ ಕೈಗೊಳ್ಳಲು ಮುಂದಿನ ಜುಲೈ 1ರಿಂದ ರಿಂದ ಸ್ವತ್ತಿನ ಇ-ಖಾತಾ/ಇಪಿಐಡಿ ಸಂಖ್ಯೆಯನ್ನು ಆನ್‌ಲೈನ್ ತಂತ್ರಾಂಶದಲ್ಲಿ ನಮೂದಿಸುವುದು ಹಾಗೂ ಇ-ಖಾತಾ ಸಲ್ಲಿಸುವುದು ಅವಶ್ಯವಿರುತ್ತದೆ. ಇದರಿಂದಾಗಿ ಪಾಲಿಕೆಯ ಕಂದಾಯ ವಿಭಾಗಕ್ಕೆ ಸ್ವತ್ತಿನ ದಾಖಲಾತಿಗಳ ಪರಿಶೀಲನೆಗಾಗಿ ಸಲ್ಲಿಸುವ ಕ್ರಮವನ್ನು ಹೊರತುಪಡಿಸಿರುವುದರಿಂದ ಪಾಲಿಕೆಯು ನೀಡುವ ಸೇವೆಗಳನ್ನು ಸರಳೀಕರಣಗೊಳಿಸಲು ಹಾಗೂ ಕಾಲಮಿತಿಯಲ್ಲಿ ನಕ್ಷೆ ಮಂಜೂರಾತಿ ನೀಡಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಜುಲೈ 1ರಿಂದ ಕಟ್ಟಡ ನಕ್ಷೆ ಮಂಜೂರಾತಿ ಕೋರಿ ಪಾಲಿಕೆಗೆ ಆನ್‌ಲೈನ್‌ನಲ್ಲಿ ನಂಬಿಕೆ ನಕ್ಷೆ ಒಳಗೊಂಡಂತೆ ಎಲ್ಲಾ ಕಟ್ಟಡ ಅನುಮತಿಗಳಿಗೆ ಅರ್ಜಿ ಸಲ್ಲಿಸುವಾಗ ಇ-ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಿದೆ ಹಾಗೂ ಸದರಿ ದಿನಾಂಕದಿಂದ ಕಟ್ಟಡ ನಕ್ಷೆಗಳ ಮಂಜೂರಾತಿ ಕೋರಿ ಸಲ್ಲಿಸುವ ಪ್ರಸ್ತಾವನೆಗಳ ಸ್ವತ್ತಿನ ದಾಖಲಾತಿಗಳನ್ನು ಪರಿಶೀಲನೆಗೆ ಪಾಲಿಕೆಯ ಕಂದಾಯ ವಿಭಾಗಕ್ಕೆ ಕಳುಹಿಸುವ ಕ್ರಮವನ್ನು ರದ್ದುಪಡಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಾಲ್ತುಳಿತ | ಅಸಮರ್ಪಕ ಸುರಕ್ಷಾ ವ್ಯವಸ್ಥೆಗಾಗಿ ಸರಕಾರ ಹೊಣೆ ಹೊರಬೇಕು: ನಟ ಕಿಶೋರ್‌ ಆಗ್ರಹ

ಮುಂದುವರೆದು, ನಂಬಿಕೆಯೊಂದಿಗೆ ಪರಿಶೀಲಿಸುವ (Trust & Verify) ವಿಧಾನದಡಿ ಸೃಜನೆಗೊಳ್ಳುವ ತಾತ್ಕಾಲಿಕ ನಕ್ಷೆ ಮಂಜೂರಾತಿಗಳನ್ನು ಸಂಬಂಧಪಟ್ಟ ಸಹಾಯಕ ನಿರ್ದೇಶಕರು (ನಗರ ಯೋಜನೆ) ಇವರು ಕಾಲಮಿತಿಯೊಳಗೆ ದೃಢೀಕರಿಸುವುದು ಅಥವಾ ಸಕಾರಣಗಳೊಂದಿಗೆ ನಿರಾಕರಿಸದೆ ಇದ್ದಲ್ಲಿ, ತಂತ್ರಾಂಶದಲ್ಲಿ ಸ್ವಯಂಚಾಲಿತವಾಗಿ ಸ್ವಯಂ ಅನುಮೋದನೆ ನೀಡುವುದು. ಇಂತಹ ಸ್ವಯಂ ಅನುಮೋದನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮಕ್ಕೆ ಸಂಬಂಧಪಟ್ಟ ವಲಯ ಕಚೇರಿಗಳ ಜಂಟಿ ನಿರ್ದೇಶಕರು (ನಗರ ಯೋಜನೆ) ವಲಯ ಆಯುಕ್ತರಿಗೆ ವರದಿ ಸಲ್ಲಿಸಲು ಆದೇಶಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...