ಕೊಡಗು, ಮೈಸೂರು ಜಿಲ್ಲೆಯ ಗಡಿ ಭಾಗದಲ್ಲಿ ಭೂಕಂಪನದ ಅನುಭವ

Date:

ಕೊಡಗು ಹಾಗೂ ಮೈಸೂರು ಗಡಿಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ, ಬಸವನತ್ತೂರು ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದೆ.

ಬೆಳಗ್ಗೆ 6:30ರ ವೇಳೆಗೆ 2 ರಿಂದ 3 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ಪಿರಿಯಾಪಟ್ಟಣ ತಾಲೂಕಿನ ಅಡುಗೂರು ಮತ್ತು ಕಣಗಾಲು ಸುತ್ತಮುತ್ತ ಭಾಗದಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ.

ಭೂಮಿ ಕಂಪಿಸುವ ವೇಳೆ ಗುಂಡಿಗಳಿರುವ ರಸ್ತೆಯಲ್ಲಿ ಲಾರಿ ಚಲಿಸುವಾಗ ಉಂಟಾಗುವ ಶಬ್ಧದಂತೆ ಸದ್ದು ಉಂಟಾಗಿದೆ. ಕೆಲವೆಡೆ ಡ್ಯಾಂನಲ್ಲಿ ನೀರು ಬಿಟ್ಟಾಗ ಆಗುವ ಶಬ್ಧ ಕೇಳಿದ ಅನುಭವ ಉಂಟಾಗಿದೆ. ಭೂಮಿಯಿಂದ ಬಂದ ವಿಚಿತ್ರ ಶಬ್ಧದಿಂದ ಜನ ಆತಂಕಕ್ಕೊಳಗಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಶಾಲನಗರ, ಮುಳ್ಳುಸೋಗೆ, ಕೂಡುಮಂಗಳೂರು, ‌ಹೆಬ್ಬಾಲೆಭಾಗದಲ್ಲಿ ಭಾರೀ ಶಬ್ದ ಉಂಟಾಗಿರುವುದಾಗಿ ವರದಿಯಾಗಿದೆ. ಕುಶಾಲನಗರದ ಜ್ಞಾನಭಾರತಿ ಶಾಲೆ ಹಿಂಭಾಗ, ಬಸವನತ್ತೂರು, ಹೆಬ್ಬಾಲೆಯ ಹಕ್ಕೆ, ಹುಲುಸೆ ವ್ಯಾಪ್ತಿಯಲ್ಲಿ ಭೂಮಿ‌‌ ಕಂಪಿಸಿದ‌ ಅನುಭವ ಉಂಟಾಗಿರುವ ಬಗ್ಗೆ ನಿವಾಸಿಗಳು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಗೂಗಲ್‌ನಲ್ಲಿ ತಪ್ಪು ಮಾಹಿತಿ: ‘ರಾಣಿಝರಿ’ ಬಿರುಕು ಬಿಟ್ಟಿತ್ತೆಂದು ಅಧಿಕಾರಿಗಳ ದೌಡು!

ಬೆಳಗ್ಗೆ 6.35 ರ ಸಮಯದಲ್ಲಿ ಎರಡು‌ ಸೆಕೆಂಡ್ ಕಾಲ ಭೂಮಿ ಕಂಪಿಸಿದ ಅನುಭವ ಉಂಟಾದ ಬಗ್ಗೆ ಕುಶಾಲನಗರದ ಮೋಹನ್ ಹಾಗೂ ಬಸವನತ್ತೂರಿನ ಮಂಜುನಾಥ್, ಹಕ್ಕೆಯ ಸುರೇಶ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಬಹುತೇಕ‌ ಮಂದಿ ನಿದ್ರೆಯಲ್ಲಿದ್ದ ಕಾರಣ ಕೆಲವರಿಗಷ್ಟೇ ಕಂಪನದ‌ ಅನುಭವ ಆಗಿದ್ದು, ಭೂಕಂಪನ‌ ಉಂಟಾಗಿದೆಯೇ ಎಂಬ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಬೇಕಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...