ಅರ್ಥಶಾಸ್ತ್ರಜ್ಞ ಪ್ರೊ. ವಿ.ಕೆ. ನಟರಾಜ್ ನಿಧನ

Date:

ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರೂ ಮುಖ್ಯಸ್ಥರೂ ಆಗಿದ್ದ ಅರ್ಥಶಾಸ್ತ್ರಜ್ಞ ಪ್ರೊ. ವಿ.ಕೆ. ನಟರಾಜ್ (85) ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಮಂಗಳವಾರ (ಡಿ.10) ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಗೆ ದಾನ ಮಾಡಲಾಗುತ್ತದೆ.

ಬೆಂಗಳೂರಿನಲ್ಲಿ 1939ರಲ್ಲಿ ಜನಿಸಿದ ನಟರಾಜ್ ಅವರ ತಂದೆ ಕೃಷ್ಣಮೂರ್ತಿ ಹೆಸರಾಂತ ವಕೀಲರು. ಮೈಸೂರಿನಲ್ಲಿ ಓದಿ ಬೆಳೆದ ನಟರಾಜ್ ಅವರು ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಜೈಲಿನಿಂದ ಬಿಡುಗಡೆಯಾದ 93 ವರ್ಷದ ವೃದ್ಧೆ ಖೈದಿ ಮನೆಯಲ್ಲಿ ನಿಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಗ್ಲೆಂಡಿನ ಯಾರ್ಕ್ ವಿವಿ ಮತ್ತು ಮುಂಬೈನ ನ್ಯಾಷನಲ್ ಇನ್‌ಸ್ಟಿಟ್ಯೂಟ್‌ನಲ್ಲಿ ಉಪನ್ಯಾಸಕರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ಬಳಿಕ 1970ರಲ್ಲಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾದರು.

ನಿವೃತ್ತಿ ಪಡೆದ ಬಳಿಕ ನಟರಾಜರನ್ನು ಮದ್ರಾಸಿನ ಎಂಐಡಿಎಸ್, ನಿರ್ದೇಶಕರನ್ನಾಗಿ ನೇಮಿಸಿಕೊಂಡಿತ್ತು. ಇದರಿಂದಾಗಿ ಸುಮಾರು ಐದು ವರ್ಷಗಳ ಕಾಲ ನಟರಾಜ್, ತಮಿಳುನಾಡು ಮತ್ತು ಕರ್ನಾಟಕದ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಿದ್ದಾರೆ. ಹಾಗೆಯೇ ಕಾವೇರಿ ಕುಟುಂಬಗಳ ಸೌಹಾರ್ದತೆಗಾಗಿ ಅವರ ಶ್ರಮ ಶ್ಲಾಘನಾರ್ಹ.

ನಿಧನ

ಇಂಗ್ಲೆಂಡ್‌ನ ಸನ್ಸೆಕ್ಸ್ ವಿಶ್ವವಿದ್ಯಾಲಯದಲ್ಲಿ ವಿಸಿಟಿಂಗ್ ಪ್ರೊಫೆಸರ್ ಆಗಿಯೂ ನಟರಾಜ್ ಕಾರ್ಯನಿರ್ವಹಿಸಿದ್ದಾರೆ. ಬಳಿಕ 1995ರಿಂದ 2005ರವರೆಗೆ ಇಂಡೋ-ಕೆನಡಿಯನ್ ಇನ್‌ಸ್ಟಿಟ್ಯೂಟ್‌ನ ಸಲಹಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದರು.

1996ರಲ್ಲಿ ಪಂಚಾಯತ್ ರಾಜ್ ತಜ್ಞರ ಸಮಿತಿ ಸದಸ್ಯರಾಗಿದ್ದ ನಟರಾಜ್ 2002ರಲ್ಲಿ ತಮಿಳುನಾಡು ಸರ್ಕಾರದ ಯೋಜನಾ ಆಯೋಗದ ಅಧ್ಯಕ್ಷರಾಗಿ, ಪೆರಿಯಾರ್ ವಿಶ್ವವಿದ್ಯಾಲಯದ ಯೋಜನಾ ಮಂಡಳಿ ಸದಸ್ಯರಾಗಿ ಕಾರ್ಯನಿರ್ವಹಿಸಿದರು. ಜೊತೆಗೆ ಮೈಸೂರಿನ ಗ್ರಾಮೀಣಾಭಿವೃದ್ಧಿ ತರಬೇತಿ ಕೇಂದ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ವರ್ಲ್ಡ್ ಬ್ಯಾಂಕಿನ ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...