ಜಿಲ್ಲೆಯಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಜಿಲ್ಲಾಧಿಕಾರಿ ಪ್ರಭು

Date:

ಚಿಂತಾಮಣಿ:ಜಿಲ್ಲೆಯಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಮಹತ್ವಾಕಾಂಕ್ಷಿ ಯೋಜನೆ ಎಚ್ ಪಿ ವಿ ಲಸಿಕೆ ನೀಡುವ ಅಭಿಯಾನವನ್ನು ವಿದ್ಯುಕ್ತವಾಗಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹೆಣ್ಣುಮಕ್ಕಳಿಗೆ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳಿಗೆ ವೈರಸ್ ಕಾರಣವಾಗುತ್ತದೆ.ಮುನ್ನೆಚ್ಚರಿಕೆಯ ಕ್ರಮವಾಗಿ ಅನೇಕ ಕಾಯಿಲೆಗಳನ್ನು ತಡೆಗಟ್ಟಲು ಸುಮಾರು 10 ವಿವಿಧ ಲಸಿಕೆಗಳನ್ನು ನೀಡಲಾಗುತ್ತಿದೆ.ಮಗು ಮುಂದೆ ಯಾವುದೇ ರೋಗಗಳಿಗೆ ತುತ್ತಾಗದೆ ಸದೃಢವಾಗಿ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ. ಜಿಲ್ಲೆಯಲ್ಲಿ ಎಚ್.ಪಿ.ವಿ ಲಸಿಕಾ ಅಭಿಯಾನವನ್ನು ಚಿಂತಾಮಣಿಯಿಂದ ಆರಂಭಿಸಲಾಗುತ್ತಿದೆ.

ಹೆಣ್ಣುಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು 14 ರಿಂದ 15 ವರ್ಷ ಒಳಗಿನ ವಯೋಮಾನದ ಹೆಣ್ಣುಮಕ್ಕಳಿಗೆ ಈ ಲಸಿಕೆಯನ್ನು ನೀಡುವ ಅಭಿಯಾನವಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿ ಸುಮಾರು 13500 ಹೆಣ್ಣುಮಕ್ಕಳನದನು ಗುರುತಿಸಿದ್ದು ಎಚ್.ಪಿ.ವಿ ಲಸಿಕೆ ನೀಡಲು ಎಲ್ಲ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಇಂದಿನಿಂದ ಮೇ 31 ರವರೆಗೆ ಪ್ರತಿ ಬುಧವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆಯನ್ನು ನೀಡಲಾಗುತ್ತದೆ. ಸರ್ಕಾರಿ, ಅನುದಾನಿತ, ವಸತಿ ಮತ್ತು ಅನುದಾನರಹಿತ ಶಾಲೆಗಳ ಹೆಣ್ಣುಮಕ್ಖಳ ಪೋಷಕರಿಗೆ ಇಲಾಖೆಯ ಮೂಲಕ ಸ್ವಯಂಪ್ರೇರಿತ ತಿಳುವಳಿಕೆ ಪತ್ರವನ್ನು ಕಳುಹಿಸಲಾಗುವುದು ಎಂದರು.

ರಾಜ್ಯದಲ್ಲಿ ಪ್ರತಿವರ್ಷ ಸುಮಾರು 50 ಸಾವಿರ ಹೆಣ್ಣುಮಕ್ಕಳು ಗರ್ಭಕಂಠಕ ಕ್ಯಾನ್ಸರ್ ಕಾಯಿಲೆಗೆ ತುತ್ತಾಗುತ್ತಿದ್ದಾರೆ.ವಿಶ್ವದ 150 ದೇಶಗಳಲ್ಲಿ ಎಚ್.ಪಿ.ವಿ ಲಸಿಕೆಯನ್ನು ಯಶಸ್ವಿಯಾಗಿ ನೀಡಲಾಗುತ್ತಿದೆ.ಪೋಷಕರು ಯಾವುದೇ ಹಿಂಜರಿಕೆ ಇಲ್ಲದೆ ತಮ್ಮ ಹೆಣ್ಣು ಮಕ್ಕಳನ್ನು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಲಸಿಕೆಯನ್ನು ಕೊಡಿಸಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ..? ಆನ್ಲೈನ್ ನಲ್ಲಿ ಹಾಲು ಖರೀದಿ ವಿರೋಧಿ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ ಮಾತನಾಡಿ ಪ್ರತಿವರ್ಷ 12 ಮಾರಕ ರೋಗಗಳ ವಿರುದ್ಧ ಲಸಿಕೆಗಳನ್ನು ನೀಡಲಾಗುತ್ತಿದೆ. ಪೋಲಿಯೋ ಮತ್ತು ಸಿಡುಬುಮುಕ್ತ ದೇಶ ಎಂದು ಘೋಷಣೆಯಾಗಿದೆ. 2025-26 ಕ್ಕೆ ದಡಾರಮುಕ್ತ ದೇಶವನ್ನಾಗಿ ಮಾಡಲು ಗುರಿಯನ್ನು ಹೊಂದಲಾಗಿದೆ. ಹೆಣ್ಣುಮಕ್ಕಳ ಸುರಕ್ಷತೆ,ಆರೋಗ್ಯ ಮತ್ತು ಭವಿಷ್ಯವನ್ನು ಉತ್ತಮ ಪಡಿಸುವ ಹಿನ್ನಲೆಯಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಗರ್ಭಕಂಠಕ ಕ್ಯಾನ್ಸರ್ ಬರದಂತೆ ತಡೆಯಲು ಜಿಲ್ಲೆಯಲ್ಲಿ 13412 ಹೆಣ್ಣುಮಕ್ಕಳಿಗೆ ಎಚ್.ಪಿ.ವಿ ಲಸಿಕೆಯನ್ನು ನೀಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಡಾ!ಸಂತೋಷ್ ಡಾ!ರಾಮಚಂದ್ರರೆಡ್ಡಿ.ಡಾ! ಸ್ವಾತಿ,ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...