ಬೀದರ್‌ | ಸಾಮಾಜಿಕ ಬದಲಾವಣೆಗೆ ಶಿಕ್ಷಣ ಪ್ರಬಲ ಅಸ್ತ್ರ : ನಾಗಶೆಟ್ಟಿ ಗಾದಗೆ

Date:

ಶಿಕ್ಷಣದಿಂದ ಮಾತ್ರ ತಳವರ್ಗ ಸಮುದಾಯಗಳ ಏಳಿಗೆ ಸಾಧ್ಯ ಎಂಬ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಆಶಯದಂತೆ ನಮ್ಮ ಗ್ರಾಮದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಮುಖ್ಯ ಶಿಕ್ಷಕ ನಾಗಶೆಟ್ಟಿ ಗಾದಗೆ ಅಭಿಪ್ರಾಯಪಟ್ಟರು.

ಬೀದರ್‌ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 133ನೇ ಜಯಂತಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, “ನಮ್ಮ ಗ್ರಾಮದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯವಾದ ಮೌಲ್ಯ ಶಿಕ್ಷಣಕ್ಕಾಗಿ ಮುಂದಿನ ದಿನಗಲ್ಲಿ ಇನ್ನಷ್ಟು ಶ್ರಮಿಸಲಾಗುವುದು” ಎಂದು ಭರವಸೆ ನೀಡಿದರು.

ಗ್ರಾಮ ಪಂಚಾಯತ್‌ ಸದಸ್ಯ ಯೇಸುದಾಸ ಮಾತನಾಡಿ, “ಬಾಬಾ ಸಾಹೇಬರು ನೀಡಿದ ಸಂವಿಧಾನ ಹಕ್ಕಿನಿಂದ ನಾವೆಲ್ಲರೂ ಉತ್ತಮ ಬದುಕು ರೂಪಿಸಿಕೊಳ್ಳಲು ಸಾಧ್ಯವಾಗಿದೆ. ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಬದಲಾವಣೆಗೆ ಅಂಬೇಡ್ಕರ್‌ ಅವರ ಚಿಂತನೆಗಳು ಅಡಿಪಾಯವಾಗಿವೆ. ನಾವು ಅವರ ಆದರ್ಶಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಳ್ಳೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಜೀವ ರತ್ನಾಕರ್‌ ಪ್ರಾಸ್ತಾವಿಕವಾಗಿ ಮಾತನಾಡಿ, “ಸಮಾಜ ಬದಲಾವಣೆಗೆ ಶಿಕ್ಷಣ ಒಂದು ಅಸ್ತ್ರ. ಶಿಕ್ಷಣದಿಂದ ಎಲ್ಲವೂ ಸಾಧಿಸಬಹುದು ಎನ್ನುವುದಕ್ಕೆ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರೇ ಉದಾಹರಣೆ ಆಗಿದ್ದಾರೆ. ಮಕ್ಕಳಿಗೆ ಉತ್ತಮ ಸಂಸ್ಕಾರ ಜೊತೆ ಗುಣಮಟ್ಟ ಶಿಕ್ಷಣಕ್ಕೆ ನಾವೆಲ್ಲರೂ ಒತ್ತು ಕೊಡಬೇಕು” ಎಂದು ನುಡಿದರು.

ಇದೇ ಸಂದರ್ಭದಲ್ಲಿ ಪಿಯುಸಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಶೈಕ್ಷಣಿಕವಾಗಿ ಸಾಧನೆಗೈದು ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮದ ಪ್ರತಿಭಾವಂತರನ್ನು ಸನ್ಮಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈತ್ಯಶಕ್ತಿ, ಮೋದಿಯ ಮೋಡಿ ಮತ್ತು ದಂಗಾದ ಜನ

ಕಾರ್ಯಕ್ರಮದಲ್ಲಿ ಪ್ರಮುಖರಾದ ಗ್ರಾ.ಪಂ. ಸದಸ್ಯ ನಾಗಪ್ಪ ಹಾರೂರಗೇರಿಕರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಸದಸ್ಯರಾದ ಬಂಡಯ್ಯಾ ಸ್ವಾಮಿ, ಸಿದ್ದಾರೆಡ್ಡಿ , ಶಾಮಣ್ಣಾ ಸೇರಿದಂತೆ ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪವನ್‌ ಕುಮಾರ ರತ್ನಾಕರ್‌ ಸ್ವಾಗತಿಸಿದರು, ಆಕಾಶ ಹಾರೂರಗೇರಿಕರ್‌ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...