ಉನ್ನತ ಶಿಕ್ಷಣ ಸಂಸ್ಥೆಯಿಲ್ಲ, ಸಾಕ್ಷರತೆಯೂ ಇಲ್ಲ: ಶೈಕ್ಷಣಿಕವಾಗಿ ಹಿಂದುಳಿದ ಯಾದಗಿರಿ

Date:

ಅತ್ತ ಉನ್ನತ ಶಿಕ್ಷಣ ಸಂಸ್ಥೆ ಇಲ್ಲದೆ, ಇತ್ತ ಸಾಕ್ಷರತೆ ಪ್ರಮಾಣವೂ ಅಧಿಕವಿಲ್ಲವೇ ಯಾದಗಿರಿ ಇಂದಿಗೂ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯಾಗಿದೆ. ಕಳೆದ ವರ್ಷ (2024) ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉಡುಪಿ ಮೊದಲ ಸ್ಥಾನ ಪಡೆದಿದ್ದರೆ, ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿ 35ನೇ ಅಂದರೆ ಕೊನೆಯ ಸ್ಥಾನವನ್ನು ಪಡೆದಿತ್ತು. 2023ರಲ್ಲಿಯೂ ಜಿಲ್ಲೆ ಕೊನೆಯ ಸ್ಥಾನದಲ್ಲಿದ್ದು, ಈವರೆಗೂ ಜಿಲ್ಲೆಯಲ್ಲಿ ಶೈಕ್ಷಣಿಕವಾಗಿ ಸಬಲಗೊಳಿಸುವ ಪ್ರಯತ್ನಗಳು ನಡೆದಿಲ್ಲ.

ಯಾದಗಿರಿಯಲ್ಲಿ ಸುಮಾರು 1050 ಪ್ರಾಥಮಿಕ ಶಾಲೆಗಳು, 148 ಪ್ರೌಢ ಶಾಲೆಗಳುಮ, 42 ಪದವಿ ಪೂರ್ವ ಕಾಲೇಜುಗಳಿದ್ದರೆ, ಇಡೀ ಜಿಲ್ಲೆಯಲ್ಲಿ ಬರೀ ಆರು ಪದವಿ ಕಾಲೇಜುಗಳಿವೆ. ಆದರೆ ಒಂದೇ ಒಂದು ಉನ್ನತ ಶಿಕ್ಷಣ ಸಂಸ್ಥೆಗಳಿಲ್ಲ. ಅದರಲ್ಲೂ ವಿಜ್ಞಾನ ಬೋಧಿಸುವ ಕಾಲೇಜುಗಳು ಅತೀ ಕಡಿಮೆಯಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಯಾದಗಿರಿ| ವಿಶ್ವ ವಿಖ್ಯಾತ ಹಂಪಿ ಉತ್ಸವ ಮಹಿಳಾ ಕವಿಗೋಷ್ಠಿಗೆ ನೀಲಮ್ಮ ಬಿ. ಮಲ್ಲೆ ಆಯ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು ಮೂರು ವರ್ಷಗಳ ಹಿಂದೆಯೇ ಯಾದಗಿರಿ ಜಿಲ್ಲೆಯನ್ನು ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯಾಗಿ ಘೋಷಿಸಲಾಗಿದೆ. ಆದರೆ ಈಗವರೆಗೂ ಜಿಲ್ಲೆಯಲ್ಲಿ ಯಾವುದೇ ಸುಧಾರಣೆ ಕ್ರಮಗಳು ನಡೆದಿಲ್ಲ. ಕಳೆದ ವರ್ಷ ಎಸ್‌ಎಸ್‌ಎಲ್‌ಸಿಯಲ್ಲಿ ಅತೀ ಕಡಿಮೆ ಫಲಿತಾಂಶ ಪಡೆದ ಜಿಲ್ಲೆ (ಶೇಕಡ 51.87) ಎಂಬ ಅಪಖ್ಯಾತಿಯನ್ನು ಪಡೆದ ಯಾದಗಿರಿಯ ಒಟ್ಟು ಸಾಕ್ಷರತಾ ಪ್ರಮಾಣ ಶೇಕಡ 39.8ರಷ್ಟಿದೆ. ಗ್ರಾಮೀಣ ಪ್ರದೇಶದಲ್ಲಿ ಶೇಕಡ 34.56 ಮತ್ತು ನಗರ ಪ್ರದೇಶದಲ್ಲಿ ಶೇಕಡ 63.5ರಷ್ಟು ಸಾಕ್ಷರರಿದ್ದಾರೆ.

ಇನ್ನು ಜಿಲ್ಲೆಯ ಈ ಸಾಕ್ಷರತೆ ಪ್ರಮಾಣ ಕಡಿಮೆ ಇರುವುದಕ್ಕೆ ಪ್ರಮುಖ ಸಮಸ್ಯೆ ಗುಳೇ ಹೋಗುವುದಾಗಿದೆ ಎಂಬ ವಾದವಿದೆ. ಈ ಜಿಲ್ಲೆಯ ಜನರು ಹೆಚ್ಚಾಗಿ ಗುಳೇ ಯೋಗುತ್ತಾರೆ. ಆದ್ದರಿಂದ ಮಕ್ಕಳು ಶಿಕ್ಷಣ ಪಡೆಯಲಾಗುತ್ತಿಲ್ಲ ಎಂದು ಹೇಳಲಾಗಿದೆ. ಆದರೆ ಸರ್ಕಾರದ ಕಡೆಗಣನೆಯನ್ನೂ ನಾವು ಅಲ್ಲಗಳೆಯುವಂತಿಲ್ಲ.

ಕಳೆದ ವರ್ಷ (2024-25ನೇ ಶೈಕ್ಷಣಿಕ ವರ್ಷ) ಶಾಲೆ ಆರಂಭವಾಗಿ ಒಂದುವರೆ ತಿಂಗಳು ಕಳೆದರೂ ಕೂಡಾ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಸಮವಸ್ತ್ರ ಲಭಿಸಿರಲಿಲ್ಲ. ಕೆಲ ಮಕ್ಕಳಿಗೆ ಪಠ್ಯಪುಸ್ತಕವೂ ವಿತರಣೆಯಾಗಿರಲಿಲ್ಲ. ಜೊತೆಗೆ ಜಿಲ್ಲೆಯಲ್ಲಿ ಶಿಕ್ಷಕರ ಕೊರತೆಯೂ ಅಧಿಕವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...