ಈ ದಿನ ಫಲಶೃತಿ | ಸಿದ್ದಾಪುರ ಶಾಲೆಗೆ ಶಿಕ್ಷಣಾಧಿಕಾರಿ ಭೇಟಿ: ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಪುಸ್ತಕ ವಿತರಣೆಯಾಗದ ಹಿನ್ನೆಲೆಯಲ್ಲಿ ತಾಲೂಕು ಶಿಕ್ಷಣಾಧಿಕಾರಿಗಳೇ ಖುದ್ದು ಬುಕ್ ಗೋಡನ್ಗೆ ಭೇಟಿ ನೀಡಿದ್ದು, ಪುಸ್ತಕ ಒದಗಿಸಿದ್ದಾರೆ.

2025-2026 ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಯಲ್ಲಿ 211 ವಿದ್ಯಾರ್ಥಿಗಳ ದಾಖಲಾತಿಯಾಗಿದ್ದು. ಕಳೆದ ವರ್ಷ 164 ವಿದ್ಯಾರ್ಥಿಗಳ ದಾಖಲಾತಿಯಾಗಿದ್ದು, ಈ ಬಾರಿ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಿದೆ. ಹೀಗಿರುವಾಗ ಇಲಾಖೆಯಿಂದ ಇನ್ನುಳಿದ 30 ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಲಭ್ಯವಾಗಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಈ ದಿನ.ಕಾಮ್‌ ಆಗಸ್ಟ್‌ 11ರಂದು ಭದ್ರಾವತಿ | ಹೊಸ ಸಿದ್ದಾಪುರ ಶಾಲೆಯ ವಿದ್ಯಾರ್ಥಿಗಳಿಗೆ, ಪಠ್ಯ ಪುಸ್ತಕವಿಲ್ಲದೆ ಪರದಾಟ ; ಜಾಣ ಮೌನಕ್ಕೆ ಜಾರಿದ ಡಿಡಿಪಿಐ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು.

ಭದ್ರಾವತಿ ತಾಲೂಕು ಶಿಕ್ಷಣಾಧಿಕಾರಿ ಈ ದಿನ.ಕಾಮ್‌ ವರದಿಗೆ ಸ್ಪಂದಿಸಿದ್ದು, ಸಿದ್ದಾಪುರದ ಶಾಲೆಗೆ ಭೇಟಿ ನೀಡಿ ಪುಸ್ತಕಗಳ ಕೊರತೆಯ ಬಗ್ಗೆ ಮಾಹಿತಿ ಪಡೆದು, ಲಭ್ಯತೆ ಇರುವ ಪುಸ್ತಕಗಳನ್ನು ಒದಗಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಭದ್ರಾವತಿ ತಾಲೂಕು ಎಸ್‌ಡಿಎಂಸಿ ಸಮನ್ವಯ ವೇದಿಕೆಯಿಂದ ಕೃತಜ್ಞತೆ ಸಲ್ಲಿಸಲಾಗಿದೆ.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...